Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಜೂನ್ 21 ಮತ್ತು 22ರಂದು ಕರೆಂಟ್ ಕಟ್
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳ ಹಾಗೂ ಅತೀ ಹೆಚ್ಚು ಮಳೆಯಾಗುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಜೂನ್ 21 ಮತ್ತು 22ರಂದು ನಗರದ ಹಲವು ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದರೆ ಕಾರಣ ಏನು ಹಾಗೂ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಪಟ್ಟಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ ಈ ಕೆಳಕಂಡ ಪ್ರದೇಶಗಳಲ್ಲಿ ಜೂನ್ 21 ಹಾಗೂ ಜೂನ್ 22ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಜೂನ್ 21ರಂದು ಎಲ್ಲೆಲ್ಲಿ ಕರೆಂಟ್ ಕಟ್?: ಎಚ್‌ಎಂಟಿ ಮುಖ್ಯ ರಸ್ತೆ, ಆರ್‌ಎನ್‌ಎಸ್ ಅಪಾರ್ಟ್‌ಮೆಂಟ್, ಸಿಎಂಟಿಐ, ಬೋರಲಿಂಗಪ್ಪ ಗಾರ್ಡನ್, ಪೀಣ್ಯ ಪೊಲೀಸ್ ಠಾಣೆ, ರಿಲಯನ್ಸ್ ಕಮ್ಯುನಿಕೇಷನ್, ಗಣಪತಿ ನಗರ ಮುಖ್ಯ ರಸ್ತೆ, ಮುನೇಶ್ವರ ದೇವಸ್ಥಾನ ರಸ್ತೆ, ಮೆಕ್ ಲೇಔಟ್, ಮಲಯಾಳಿ ಗೆಸ್ಟ್ ಹೌಸ್ ರಸ್ತೆ, ಕೆಎಚ್‌ಬಿ ಲೇಔಟ್, ರಾಜೇಶ್ವರಿನಗರ.
ಆಕಾಶ್ ಥಿಯೇಟರ್ ರಸ್ತೆ, ಫ್ರೆಂಡ್ಸ್ ಸರ್ಕಲ್, ವಿಜ್ಞಾನ್ ಪಬ್ಲಿಕ್ ಸ್ಕೂಲ್, ಬೈರವೇಶ್ವರ ನಗರ, ಬ್ಯಾಂಕ್ ಕಾಲೊನಿ, ಯುಸಿಒ ಬ್ಯಾಂಕ್ ರಸ್ತೆ, ರಾಜಗೋಪಾಲ್ ನಗರ, ಕಸ್ತೂರಿ ರಸ್ತೆ, ಜಿಕೆಡಬ್ಲ್ಯೂ ಲೇಔಟ್, ಇಎಸ್‌ಐ ಆಸ್ಪತ್ರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ತರಬನಹಳ್ಳಿ, ಹುರುಳಿಚಿಕ್ಕನಹಳ್ಳಿ, ಟಿಬಿ ಕ್ರಾಸ್, ಹೆಸರಘಟ್ಟ, ಬಿಳಿಜಾಜಿ, ದ್ವಾರಕ ನಗರ, ಚಿಕ್ಕಬಾಣವರ, ಮಾರುತಿ ನಗರ, ಗಣಪತಿ ನಗರ, ಶಾಂತಿ ನಗರ, ಬ್ರದರ್ಸ್ ಕಲೋನಿ, ಸಾಸಿವೆಘಟ್ಟ, ಗುಡ್ಡದಹಳ್ಳಿ, ದಾಸೆನಹಳ್ಳಿ, ತೋಟಗೆರೆ ಬಸವನ ದೇವಸ್ಥಾನ, ಹೊಸಹಳ್ಳಿ ಪಾಳ್ಯ, ಬಸವಣ್ಣ ದೇವಸ್ಥಾನ ಗುಣಿ ಅಗ್ರಹಾರ, ಸೋಮಶೆಟ್ಟಿಹಳ್ಳಿ, ಗಾಣಿಗರಹಳ್ಳಿ, ಪೈಪ್‌ಲೈನ್ ರಸ್ತೆ, ಕೆರೆಗುಡ್ಡದಹಳ್ಳಿ, ಕೆಟಿ ಪುರ, ಐಐಎಚ್‌ಆರ್, ಕುರುಬರಹಳ್ಳಿ, ಕುಂಬಾರಹಳ್ಳಿ, ಆಚಾರ್ಯ ಕಾಲೇಜು ಮುಖ್ಯ ರಸ್ತೆ, ಸೋಲದೇವನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೆರೆಂಟ್ ಕಟ್ ಆಗಲಿದೆ ಎಂದು ತಿಳಿಸಿದೆ.
ಎನ್‌ಎಸ್ ಪಾಳ್ಯ ಕೈಗಾರಿಕಾ ಪ್ರದೇಶ, ಜಾನ್ಹವಿ ಎನ್‌ಕ್ಲೇವ್, ಅನಂತ್ ಲೇಔಟ್, ಬನ್ನೇರುಘಟ್ಟ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಕೆಇಬಿ ಕಾಲೋನಿ, ಬಿಎಂಟಿ 1ನೇ ಹಂತ, ಎಲೆಕ್ಟ್ರಾನಿಕ್ ಸಿಟಿ ಹಂತ-1 ಮತ್ತು 2, ವೀರಸಂದ್ರ, ಗೊಲ್ಲಹಳ್ಳಿ, ಎಎಚ್‌ಟಿ ಇನ್ಫೋಸಿಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಕೆಎಸ್‌ಟಿ ಕಾಲೇಜು, ಅಂಜನಾಪುರ, ಪುರವಂಕರ ಅಪಾರ್ಟ್‌ಮೆಂಟ್, ಅಮೃತ್ ನಗರ, ವಡ್ಡರಪಾಳ್ಯ, ಕೆಂಬತ್ತಳ್ಳಿ, ವಿಶ್ವಪ್ರಿಯ ಲೇಔಟ್, ದೇವರಚಿಕ್ಕನಹಳ್ಳಿ, ಅಕ್ಷಯನಗರ, ತೇಜಸ್ವಿ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಜೂನ್ 22ರಂದು ಎಲ್ಲೆಲ್ಲಿ ಕರೆಂಟ್ ಕಟ್?: ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ಎಲೆಕ್ಟ್ರಾನಿಕ್ ಸಿಟಿಯ ಹಲವೆಡೆ, ಬೊಮ್ಮನಹಳ್ಳಿ, ಎನ್‌ಜೆಆರ್ ಲೇಔಟ್, ಚಿಕ್ಕತೋಗೂರು, ಹೊಂಗಸಂದ್ರ, ಕೋನಪ್ಪನ ಅಗ್ರಹಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ಜೂನ್ 20, 21, 22ರಂದು ಎಲ್ಲೆಲ್ಲಿ ಕರೆಂಟ್ ಕಟ್?: ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ಆನೇಕಲ್, ಯಡವನಹಳ್ಳಿ, ಇಚ್ಚಂಗೂರು, ವಟ್ಟರಪಾಳ್ಯ, ಅತ್ತಿಬೆಲೆ ಕೈಗಾರಿಕಾ ಪ್ರದೇಶ, ಬಳಗಾರನಹಳ್ಳಿ, ಮಂಚನಹಳ್ಳಿ, ಅತ್ತಿಬೆಲೆ ಟೌನ್, ಮಾಯಸಂದ್ರ, ದಾಸನಪುರ, ಬಲ್ಲೂರು, ಕಂಬಳಪುರ, ಚಿಕ್ಕನಹಳ್ಳಿ, ವಿಬಿಎಚ್ ಅಪಾರ್ಟ್‌ಮೆಂಟ್, ರಾಚಮ್ಮನಹಳ್ಳಿ, ಅರವಂತಿಗೆಪುರ, ಪಿ.ಗೊಲ್ಲಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.












Click it and Unblock the Notifications