Bengaluru Power Cut: ಬೆಂಗಳೂರಿನ ಈ ಭಾಗಗಳಲ್ಲಿ ನವೆಂಬರ್ 19ರ ಬುಧವಾರ 7 ಗಂಟೆ ಕರೆಂಟ್‌ ಕಟ್‌

Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ನವೆಂಬರ್ 19ರ ಬುಧವಾರ ಬೆಂಗಳೂರಿನ ಈ ಭಾಗಗಳಲ್ಲಿ ಕರೆಂಟ್‌ ಕಟ್‌ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಹಾಗೂ ಕಾರಣ ಏನು ಎಂದು ತಿಳಿಯಿರಿ.

ಕೆಪಿಟಿಸಿಎಲ್ ವತಿಯಿಂದ ತುರ್ತುನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆ ನವೆಂಬರ್ 18ರ ಬುಧವಾರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ತಿಳಿಯಿರಿ.

Power Cut in Bengaluru s These Areas On November 19 Know details

220/66/11 ಕೆ.ವಿ. ಎನ್.ಆರ್.ಎಸ್, 66/11 ಕೆ.ವಿ ಪಲಾಡಿಯಂ ಮತ್ತು 66/11 ಕೆ.ವಿ ಟೆಲಿಕಾಂ ಲೇಔಟ್‌ನ ವಿದ್ಯುತ್‌ ವಿತರಣಾ ಕೇಂದ್ರಗಳ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗುಳ್ಳುವ ಹಿನ್ನೆಲೆ ಬುಧವಾರ ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?: ರಾಜಾಜಿನಗರ 1, 2, 3, 4, 5 ಮತ್ತು 6ನೇ ಬ್ಲಾಕ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಗುಬ್ಬಣ್ಣ ಇಂಡಸ್ಟ್ರಿಯಲ್ ಏರಿಯಾ, ಮೋದಿ ಹಾಸ್ಪಿಟಲ್ ರೋಡ್, ಮಂಜುನಾಥನಗರ, ಶಿವನಗರ, ಅಗ್ರಹಾರ ದಾಸರಹಳ್ಳಿ, ವೆಸ್ಟ್ ಆಫ್ ಕಾರ್ಡ್ ರಸ್ತೆ 1, 2, 3, 4 ಹಾಗೂ 5ನೇ ಕ್ರಾಸ್, ಮಹಾಗಣಪತಿನಗರ, ಕೆ.ಹೆಚ್.ಬಿ.ಕಾಲೋನಿ 2ನೇ ಹಂತ, ದೇವಯ್ಯ ಪಾರ್ಕ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್‌ ಕಟ್‌ ಆಗಲಿದೆ ಎಂದು ತಿಳಿಸಿದೆ.

ನಾಗಪ್ಪ ಬ್ಲಾಕ್, ಲಿಂಕ್ ರೋಡ್, ಶನಿ ಮಹಾತ್ಮ ಟೆಂಪಲ್, ಪ್ರಕಾಶ ನಗರ, ಗಾಯತ್ರಿ ನಗರ, ಸುಬ್ರಮಣ್ಯನಗರ, ಎಲ್.ಎನ್.ಪುರ, ರಾಜ್‌ ಕುಮಾರ್ ರೋಡ್, ದಯಾನಂದನಗರ, ಸಾಯಿಮಂದಿರ, ಹರಿಶ್ಚಂದ್ರ ಘಾಟ್, ರಾಜಾಜಿನಗರ, ಬ್ರಿಗೇಡ್ ಗೇಟ್ ವೇ ಅಪಾರ್ಟ್‌ಮೆಂಟ್ಸ್, ಪ್ಯಾಲೇಸ್ ಗುಟ್ಟಹಳ್ಳಿ, ಮುನೇಶ್ವರ ಬ್ಲಾಕ್, ಮಲ್ಲೇಶ್ವರ ಸ್ವಿಮ್ಮಿಂಗ್ ಪೂಲ್, ಪೈಪ್‌ಲೈನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

ಅಲ್ಲದೆ, ಆರ್.ಬ್ಲಾಕ್, ನಿರ್ಮಾಣ್ ಭವನ್, ಕೆ.ಆರ್.ಡಿ.ಸಿ.ಎಲ್, ಜೆಟ್‌ ಲಾಗ್, ನಾರಾಯಣ ನೇತ್ರಾಲಯ, ಇಸ್ಕಾನ್ ಟೆಂಪಲ್, ಪಲಾಡಿಯಂ ವಸತಿ ಸಮುಚ್ಚಯ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲೂ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ವೆಸ್ಟ್ ಆಫ್ ಕಾರ್ಡ್ ರೋಡ್, ಎಂ.ಸಿ.ಲೇಔಟ್, ವಿಜಯನಗರ ವಾಟರ್ ಟ್ಯಾಂಕ್.

ಹೊಸಹಳ್ಳಿ ಮುಖ್ಯ ರಸ್ತೆ, ಹಂಪಿನಗರ, ಮಾಗಡಿ ಮುಖ್ಯ ರಸ್ತೆ, ಬಿನ್ನಿಪೇಟೆ, ಜಗಜೀವನ ರಾಂನಗರ, ಗೋಪಾಲಪುರ, ಹೊಸಹಳ್ಳಿ, ಹಳೇಗುಡ್ಡದಹಳ್ಳಿ, ಭುವನೇಶ್ವರಿನಗರ, ಗೋರಿಪಾಳ್ಯ, ವಿ.ಎಸ್.ಗಾರ್ಡನ್, ಗೂಡ್ಸ್ ಶೆಡ್ ರೋಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

ಇನ್ನೂ ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆಯೋ ಅಂತಹ ಪ್ರದೇಶಗಳ ನಿವಾಸಿಗಳು ಮುಂಜಾಗ್ರತಾ ಕ್ರಮವಾಗಿ ಮೊಬೈಲ್‌, ಲ್ಯಾಪ್‌ಟಾಪ್‌, ಬ್ಯಾಟರಿ ಸೇರಿದಂತೆ ಇನ್ನಿತರೆ ಚಾರ್ಜಿಂಗ್ ಸಾಧನಗಳನ್ನು ಮುಂಚಿತವಾಗಿ ಚಾರ್ಜ್‌ ಮಾಡಿಟ್ಟುಕೊಳ್ಳುವುದು ಅಂತಾ ಸಲಹೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+