Bengaluru Power Cut: ಬೆಂಗಳೂರಿನ ಈ ಭಾಗಗಳಲ್ಲಿ ನವೆಂಬರ್ 23, 24ರಂದು ವಿದ್ಯುತ್ ವ್ಯತ್ಯಯ

Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಬೆಂಗಳೂರಿನ ಈ ಭಾಗಗಳಲ್ಲಿ ನವೆಂಬರ್ 23, 24ರಂದು ಬೆಂಗಳೂರಿನ ಈ ಭಾಗಗಳಲ್ಲಿ ಕರೆಂಟ್‌ ಕಟ್‌ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಹಾಗೂ ಕಾರಣ ಏನು ಎಂದು ತಿಳಿಯಿರಿ.

ಕೆಪಿಟಿಸಿಎಲ್ ವತಿಯಿಂದ ತುರ್ತುನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆ ನವೆಂಬರ್ 23, 24ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ತಿಳಿಯಿರಿ.

Power Cut in Bengaluru s These Areas on November 23 24 Know details

66/11 ಕೆವಿ ವಿಡಿಯಾ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ ಜಾಲಹಳ್ಳಿ ವಿಭಾಗದ ಎನ್-9 ಉಪ ವಿಭಾಗದ ಹಲವೆಡೆ ನವೆಂಬರ್ 23 ಹಾಗೂ 24ರಂದು ಬೆಳಗ್ಗೆ 9ರಿಂ ಮಧ್ಯಾಹ್ನ 12 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಎಲ್ಲೆಲ್ಲಿ ಕರೆಂಟ್‌ ಕಟ್‌?: ವಿನಾಯಕ ನಗರ, ವಿಕಾಸ್ ನಗರ, ಶೋಭಾ ಅಪಾರ್ಟ್‌ಮೆಂಟ್, 8ನೇ ಮೈಲ್ ರಸ್ತೆ, ರಾಮಯ್ಯ ಲೇಔಟ್, ಹಾವನೂರು ಎಕ್ಸ್‌ಟಿಎನ್, ನಾರಾಯಣ ಲೇಔಟ್, ವಿಡಿಯಾ ಸ್ಕೂಲ್, ಕುವೆಂಪು ನಗರ, ವಿಡಿಯಾ ಬಸ್ ಸ್ಟಾಪ್, ಮುನಿಕೊಂಡಪ್ಪ ಲೇಔಟ್, ಅಶೋಕ್ ನಗರ, ವಿದ್ಯಾ ನಗರ, ಡಿಫೆನ್ಸ್ ಕಾಲೋನಿ, ಮಂಜುನಾಥ್ ನಗರ, ಮಹಾಲಕ್ಷ್ಮಿ ನಗರ, ಕಾಟರಾಯ ನಗರ, ಸೋಪ್ ಫ್ಯಾಕ್ಟರಿ ಲೇಔಟ್, ವಿಜಯಲಕ್ಷ್ಮಿ ಲೇಔಟ್ ಹಾಗೂ ಸುತ್ತಮುತ್ತಲಿದಲಿನ ಪ್ರದೇಶಗಳಲ್ಲಿ ಕರೆಂಟ್‌ ಕಟ್‌ ಆಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಅಲ್ಲದೆ, ಅಂದಾನಪ್ಪ ಲೇಔಟ್ , ಬಿಟಿಎಸ್ ಲೇಔಟ್, ಸಿದ್ದೇಶ್ವರ ಲೇಔಟ್, ಸಾಸುವೆಘಟ್ಟ, ಸೋಲದೇವನಹಳ್ಳಿ, ತರಬನಹಳ್ಳಿ ಮುಖ್ಯ ರಸ್ತೆ, ಹೆಸರಘಟ್ಟ ಮುಖ್ಯ ರಸ್ತೆ, ವಿಶ್ವೇಶರಯ್ಯ ಲೇಔಟ್, ರಾಯಲ್ ಎನ್‌ಕ್ಲೇವ್, ಬೈರವೇಶ್ವರ ವೃತ್ತ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಭಾನುವಾರ ಎಲ್ಲೆಲ್ಲಿ ಕರೆಂಟ್‌ ಕಟ್‌?: ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ 66/11 ಕೆವಿ ಯಲಹಂಕ ಉಪಕೇಂದ್ರ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ನವೆಂಬರ್ 23ರ ಭಾನುವಾರ ಬೆಳಗ್ಗೆ 11ರಿಂದ ಮಧ್ಯಾಹ್ನ 4.30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಕೆಎಂಎಫ್, ವೈಎನ್‌ಕೆ ನ್ಯೂ ಟೌನ್ 208, 407, 'ಬಿ' ಸೆಕ್ಟರ್, ಅಲ್ಲಾಳಸಂದ್ರ, ಶಾರದ ನಗರ, ಜನಪ್ರಿಯ, ಅನ್ರಿಯಾ, ಮಾರುತಿನಗರ, ಕೋಗಿಲು, ಬಿಬಿ ರಸ್ತೆ ಯಲಹಂಕ, ಬಾಗಲೂರು ಕ್ರಾಸ್, ನಿಟ್ಟೆ ಕಾಲೇಜು, ಬಿಎಸ್‌ಎಫ್, ಐಎಎಫ್, ಪಾಲನಹಳ್ಳಿ, ದ್ವಾರಕ ನಗರ, ಪೂರ್ವಂಕರ ಆರ್‌ಎಂಝೆಡ್‌ ಗ್ಯಾಲೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

66/11 ಕೆವಿ ಅಬ್ಬಿಗೆರೆ ಉಪಕೇಂದ್ರ ವ್ಯಾಪ್ತಿಯ ಹಲವೆಡೆಯೂ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಕಮ್ಮಗೊಂಡನಹಳ್ಳಿ, ರಾಘವೇಂದ್ರ ಬಡಾವಣೆ, ಲಕ್ಷೀಪುರ, ವಡೇರಹಳ್ಳಿ, ಅಬ್ಬಿಗೆರೆ ಇಂಡಸ್ಟ್ರಿಯಲ್ ಏರಿಯ, ಅಬ್ಬಿಗೆರೆ, ಪೈಪ್ ಲೈನ್ ರೋಡ್, ನಿಸರ್ಗ ಬಡಾವಣೆ, ಕೆಂಪೆಗೌಡ ಬಡಾವಣೆ, ಕಲಾನಗರ ಮುಖ್ಯ ರಸ್ತೆ ಹಾಗೂ ಸುತ್ತ,ಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್‌ ಕಟ್‌ ಆಗಲಿದೆ ಎಂದು ತಿಳಿಸಿದೆ.

ಕಮ್ಮಗೊಂಡನಹಳ್ಳಿ, ವಿಶ್ವೇಶ್ವರಯ್ಯ ಬಡಾವಣೆ, ಎಚ್.ವಿ.ವಿ. ಬಡಾವಣೆ, ಕುವೆಂಪು ನಗರ, ಕಾಶಿರಾಮ ನಗರ, ವಡೇರಹಳ್ಳಿ, ಸಿಂಹಾದ್ರಿ ಬಡಾವಣೆ, ಪ್ರಕೃತಿ ಬಡಾವಣೆ, ಮುನಿಸ್ವಮಪ್ಪ ಬಡಾವಣೆ, ಲಕ್ಕಪ್ಪ ಬಡಾವಣೆ, ಬಾಲಾಜಿ ಬಡಾವಣೆ, ವರದರಾಜಸ್ವಾಮಿ ಬಡಾವಣೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮಾಹಿತಿ ನೀಡಿದೆ.

220/66/11 ಕೆವಿ ಎಸ್‌ಆರ್‌ಎಸ್ ಪೀಣ್ಯ ಉಪಕೇಂದ್ರ ವ್ಯಾಪ್ತಿಯ ಹಲವೆಡೆಯೂ ಇಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಪೀಣ್ಯ 10ನೇ ಮುಖ್ಯರಸ್ತೆ, 11ನೇ ಮುಖ್ಯರಸ್ತೆ, ಉಡುಪಿ ಹೋಟೆಲ್ ಸುತ್ತಮುತ್ತಲಿನ ಪ್ರದೇಶ, ಐಆರ್ ಪಾಲಿಟೆಕ್ನಿಕ್ ರಸ್ತೆ, ಲಕ್ಷ್ಮಿ ದೇವಿ ನಗರ, ಲಗ್ಗೆರೆ ಹಳೆಯ ಗ್ರಾಮ, ಲವಕುಶ ನಗರ, ರಾಘವೇಂದ್ರ ನಗರ, ಚೌಡೇಶ್ವರಿ ನಗರ 6ನೇ, 7ನೇ, 8ನೇ, 9ನೇ ಕ್ರಾಸ್, 1ನೇ ಹಂತದ ಪಿಐಎ 7ನೇ ಕ್ರಾಸ್, 1ನೇ ಹಂತದ ಪಿಯುಎ, ಟಿವಿಎಸ್ ಕ್ರಾಸ್ ರಸ್ತೆಯ ಹತ್ತಿರ, ಇಸ್ರೋ 1ನೇ, 2ನೇ ಕ್ರಾಸ್, 1ನೇ ಹಂತದ ಪಿಐಎ ಎಂಇಐ ಮತ್ತು ಯಶವಂತಪು ಕೈಗಾರಿಕಾ ಪ್ರದೇಶ.

ಎಚ್‌ಎಂಟಿ ರಸ್ತೆ, ಆರ್‌ಎನ್‌ಎಸ್ ಅಪಾರ್ಟ್‌ಮೆಂಟ್, ಸಿಎಂಟಿಐ, ಬೋರಲಿಂಗಪ್ಪ ಗಾರ್ಡನ್, ಪೀಣ್ಯ ಪೊಲೀಸ್ ಠಾಣೆ ರಸ್ತೆ, ರಿಲಯನ್ಸ್ ಕಮ್ಯುನಿಕೇಷನ್, ಗಣಪತಿನಗರ ಮುಖ್ಯರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ಮುನೇಶ್ವರ ದೇವಸ್ಥಾನ ರಸ್ತೆ, ಕೆಎಚ್‌ಬಿ ಲೇಔಟ್, ರಾಜೇಶ್ವರಿನಗರ, ಆಕಾಶ್ ಥೀಟರ್ ರಸ್ತೆ, ಫ್ರೆಂಡ್ಸ್ ಸರ್ಕಲ್, ವಿಜ್ಞಾನ ಪಬ್ಲಿಕ್ ಸ್ಕೂಲ್ ರಸ್ತೆ, ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, 6ನೇ ಮುಖ್ಯರಸ್ತೆ, ವಿಭಾಗ ರಸ್ತೆ, 5ನೇ ಮುಖ್ಯರಸ್ತೆ, ಯುಕೋ ಬ್ಯಾಂಕ್ ರಸ್ತೆ, 7ನೇ ಮುಖ್ಯರಸ್ತೆ, 3ನೇ ಹಂತ, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ, ಜಿಕೆಡಬ್ಲ್ಯೂ ಲೇಔಟ್, ಬೈರವೇಶ್ವರ ನಗರ, ಇಎಸ್ಐ ಆಸ್ಪತ್ರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಅಲ್ಲದೆ, ಯಾವೆಲ್ಲಾ ಎಲ್ಲೆಲ್ಲಿ ಕರೆಂಟ್‌ ಕಟ್‌ ಆಗಲಿದೆಯೋ ಅಂತಹ ಪ್ರದೇಶಗಳ ನಿವಾಸಿಗಳು ಮುಂಜಾಗ್ರತಾ ಕ್ರಮವಾಗಿ ಲ್ಯಾಪ್‌ಟ್ಯಾಪ್‌, ಮೊಬೈಲ್, ಬ್ಯಾಟರಿ ಸೇರಿದಂತೆ ಚಾರ್ಜಿಂಗ್ ಸಾಧನಗಳನ್ನು ಮುಂಚಿತವಾಗಿ ಚಾರ್ಜ್‌ ಮಾಡಿಟ್ಟುಕೊಳ್ಳುವಂತೆ ಸಲಹೆಯನ್ನೂ ಕೂಡ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+