Bengaluru Power Cut: ಬೆಂಗಳೂರಿನ ಈ ಭಾಗಗಳಲ್ಲಿ ನವೆಂಬರ್ 23ರ ಭಾನುವಾರ ವಿದ್ಯುತ್ ವ್ಯತ್ಯಯ
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಬೆಂಗಳೂರಿನ ಈ ಭಾಗಗಳಲ್ಲಿ ನವೆಂಬರ್ 23ರಂದು ಬೆಂಗಳೂರಿನ ಈ ಭಾಗಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಹಾಗೂ ಕಾರಣ ಏನು ಎಂದು ತಿಳಿಯಿರಿ.
ಕೆಪಿಟಿಸಿಎಲ್ ವತಿಯಿಂದ ತುರ್ತುನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆ ನವೆಂಬರ್ 23ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ತಿಳಿಯಿರಿ.

ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ 66/11 ಕೆವಿ ಯಲಹಂಕಾ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ನವೆಂಬರ್ 23ರ ಭಾನುವಾರ ಬೆಳಗ್ಗೆ 11ರಿಂದ ಮಧ್ಯಾಹ್ನ 4.30 ಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ಎಲ್ಲೆಲ್ಲಿ ಕರೆಂಟ್ ಕಟ್?: ಕೆಎಂಎಫ್, ವೈಎನ್‌ಕೆ ನ್ಯೂ ಟೌನ್ 208, 407, ಬಿ ಸೆಕ್ಟರ್, ಸಿಬಿ ಸಾಂದ್ರ, ಅಲ್ಲಾಳಸಂದ್ರ, ಶಾರದ ನಗರ, ಮಾರುತಿನಗರ, ಕೋಗಿಲು, ಬಿಬಿ ರಸ್ತೆ ಯಲಹಂಕ, ಬಾಗಲೂರು ಕ್ರಾಸ್, ವೆಂಕಟಾಲ್, ನಿಟ್ಟೆ ಕಾಲೇಜು, ಬಿಎಸ್‌ಎಫ್, ಐಎಎಫ್, ಪಾಲನಹಳ್ಳಿ, ದ್ವಾರಕ ನಗರ ಇತ್ಯಾದಿ. ಪೂರ್ವಂಕರ ಆರ್‌ಎಂಝೆಡ್ ಗ್ಯಾಲೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.
ಅಲ್ಲದೆ, 66/11 ಕೆವಿ ಅಬ್ಬಿಗೆರೆ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಭಾನುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಕಮ್ಮಗೊಂಡನಹಳ್ಳಿ, ರಾಘವೇಂದ್ರ ಬಡಾವಣೆ, ಲಕ್ಷೀಪುರ, ವಡೇರಹಳ್ಳಿ, ಅಬ್ಬಿಗೆರೆ ಇಂಡಸ್ಟ್ರಿಯಲ್ ಏರಿಯಾ, ಅಬ್ಬಿಗೆರೆ, ಪೈಪ್ ಲೈನ್ ರೋಡ್, ನಿಸರ್ಗ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಕೆಂಪೆಗೌಡ ಬಡಾವಣೆ, ಕಲಾನಗರ ಮುಖ್ಯ ರಸ್ತೆ, ಕಮ್ಮಗೊಂಡನಹಳ್ಳಿ, ವಿಶ್ವೇಶ್ವರಯ್ಯ ಬಡಾವಣೆ, ಎಚ್.ವಿ.ವಿ. ಬಡಾವಣೆ, ಕುವೆಂಪು ನಗರ, ಕಾಶಿರಾಮ ನಗರ, ವಡೇರಹಳ್ಳಿ, ಸಿಂಹಾದ್ರಿ ಬಡಾವಣೆ, ಪ್ರಕೃತಿ ಬಡಾವಣೆ, ಮುನಿಸ್ವಮಪ್ಪ ಬಡಾವಣೆ, ಲಕ್ಕಪ್ಪ ಬಡಾವಣೆ, ಬಾಲಾಜಿ ಬಡಾವಣೆ, ವರದರಾಜಸ್ವಾಮಿ ಬಡಾವಣೆ, ಬ್ರಿಗೆಡ್ ಪಾರ್ಕ್ ಸೈಡ್ ಉತ್ತರ ಅಪಾರ್ಟ್‌ಮೆಂಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
220/66/11 ಕೆವಿ ಎಸ್‌ಆರ್‌ಎಸ್ ಪೀಣ್ಯ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ನವೆಂಬರ್ 23ರಂದು ಭಾನುವಾರ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಪೀಣ್ಯ 10ನೇ ಮುಖ್ಯರಸ್ತೆ, 11ನೇ ಮುಖ್ಯರಸ್ತೆ, ಉಡುಪಿ ಹೋಟೆಲ್ ಸುತ್ತಮುತ್ತಲಿನ ಪ್ರದೇಶ, ಐಆರ್ ಪಾಲಿಟೆಕ್ನಿಕ್ ರಸ್ತೆ, ಲಕ್ಷ್ಮಿ ದೇವಿ ನಗರ, ಲಗ್ಗೆರೆ ಹಳೆಯ ಗ್ರಾಮ, ಲವಕುಶ ನಗರ.
ರಾಘವೇಂದ್ರ ನಗರ, ಚೌಡೇಶ್ವರಿ ನಗರ 6ನೇ, 7ನೇ, 8ನೇ, 9ನೇ ಕ್ರಾಸ್, 1ನೇ ಹಂತದ ಪಿಐಎ 7ನೇ ಕ್ರಾಸ್, 1ನೇ ಹಂತದ ಪಿಯುಎ, ಟಿವಿಎಸ್ ಕ್ರಾಸ್ ರಸ್ತೆಯ ಹತ್ತಿರ, ಇಸ್ರೋ 1ನೇ, 2ನೇ ಕ್ರಾಸ್, 1ನೇ ಹಂತದ ಪಿಐಎ ಎಂಇಐ ಮತ್ತು ಯಶವಂತಪು ಕೈಗಾರಿಕಾ ಪ್ರದೇಶ, ಎಚ್‌ಎಂಟಿ ರಸ್ತೆ, ಆರ್‌ಎನ್‌ಎಸ್ ಅಪಾರ್ಟ್‌ಮೆಂಟ್, ಸಿಎಂಟಿಐ, ಬೋರಲಿಂಗಪ್ಪ ಗಾರ್ಡನ್, ಪೀಣ್ಯ ಪೊಲೀಸ್ ಠಾಣೆ ರಸ್ತೆ, ಟೆಲಿಫೋನ್ ಎಕ್ಸ್ಚೇಂಜ್, 6ನೇ ಕ್ರಾಸ್, ರಿಲಯನ್ಸ್ ಕಮ್ಯುನಿಕೇಷನ್, ಗಣಪತಿನಗರ ಮುಖ್ಯರಸ್ತೆ, ಪೊಲೀಸ್ ಠಾಣೆ ರಸ್ತೆ.
ಚಾಮುಂಡಿಪುರ, ಮುನೇಶ್ವರ ದೇವಸ್ಥಾನ ರಸ್ತೆ, ಮೆಕ್ ಲೇಔಟ್, ಮಲಯಾಳಿ ಅತಿಥಿ ಗೃಹ ರಸ್ತೆ, ಕೆಎಚ್‌ಬಿ ಲೇಔಟ್, ರಾಜೇಶ್ವರಿನಗರ, ಆಕಾಶ್ ಥೀಯೆಟರ್ ರಸ್ತೆ, ಫ್ರೆಂಡ್ಸ್ ಸರ್ಕಲ್, ವಿಜ್ಞಾನ ಪಬ್ಲಿಕ್ ಸ್ಕೂಲ್ ರಸ್ತೆ, ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, 6ನೇ ಮುಖ್ಯರಸ್ತೆ, ವಿಭಾಗ ರಸ್ತೆ, 5ನೇ ಮುಖ್ಯರಸ್ತೆ, ಯುಕೋ ಬ್ಯಾಂಕ್ ರಸ್ತೆ, 7ನೇ ಮುಖ್ಯರಸ್ತೆ, 3ನೇ ಹಂತ, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ, ಜಿಕೆಡಬ್ಲ್ಯೂ ಲೇಔಟ್, ಬೈರವೇಶ್ವರ ನಗರ, ಇಎಸ್ಐ ಆಸ್ಪತ್ರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆಯೋ ಅಂತಹ ಪ್ರದೇಶಗಳ ನಿವಾಸಿಗಳು ಮುಂಜಾಗ್ರತಾ ಕ್ರಮವಾಗಿ ಲ್ಯಾಪ್‌ಟ್ಯಾಪ್, ಬ್ಯಾಟರಿ, ಮೊಬೈಲ್ ಸೇರಿದಂತೆ ಇನ್ನಿತರೆ ಚಾರ್ಜಿಂಗ್ ಸಾಧನಗಳನ್ನು ಮುಂಚಿತವಾಗಿ ಚಾರ್ಜ್ ಮಾಡಿಟ್ಟುಕೊಳ್ಳುವುದು ಒಳಿತು. ಹೆಚ್ಚಿನ ಮಾಹಿತಿಗಾಗಿ ಬೆಸ್ಕಾಂ ಸಹಾಯವಾಣಿಗೆ ಸಂಪರ್ಕಿಸಬಹುದು ಎಂದು ತಿಳಿಸಿದೆ.












Click it and Unblock the Notifications