Bengaluru Power Cut: ಬೆಂಗಳೂರಿನ ಈ ಭಾಗಗಳಲ್ಲಿ ನವೆಂಬರ್ 24ರ ಸೋಮವಾರ ಕರೆಂಟ್ ಕಟ್
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಬೆಂಗಳೂರಿನ ಈ ಭಾಗಗಳಲ್ಲಿ ನವೆಂಬರ್ 24ರಂದು ಬೆಂಗಳೂರಿನ ಈ ಭಾಗಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಹಾಗೂ ಕಾರಣ ಏನು ಎಂದು ತಿಳಿಯಿರಿ.
ಕೆಪಿಟಿಸಿಎಲ್ ವತಿಯಿಂದ ತುರ್ತುನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆ ನವೆಂಬರ್ 24ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ತಿಳಿಯಿರಿ.

66/11 ಕೆವಿ ವಿಡಿಯಾ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ ಜಾಲಹಳ್ಳಿ ವಿಭಾಗದ ಎನ್-9 ಉಪ ವಿಭಾಗದ ಹಲವೆಡೆ ನವೆಂಬರ್ 24ರ ಸೋಮವಾರ ಬೆಳಗ್ಗೆ 9ರಿಂದ ಮಧ್ಯಾಹ್ನ 12 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಕಟ್?: ವಿನಾಯಕ ನಗರ, ವಿಕಾಸ್ ನಗರ, ಶೋಭಾ ಅಪಾರ್ಟ್‌ಮೆಂಟ್, 8ನೇ ಮೈಲ್ ರಸ್ತೆ, ರಾಮಯ್ಯ ಲೇಔಟ್, ಹಾವನೂರು ಎಕ್ಸ್‌ಟಿಎನ್, ನಾರಾಯಣ ಲೇಔಟ್, ವಿಡಿಯಾ ಸ್ಕೂಲ್, ಕುವೆಂಪು ನಗರ, ವಿಡಿಯಾ ಬಸ್ ಸ್ಟಾಪ್, ಮುನಿಕೊಂಡಪ್ಪ ಲೇಔಟ್, ಅಶೋಕ್ ನಗರ, ವಿದ್ಯಾ ನಗರ, ಡಿಫೆನ್ಸ್ ಕಾಲೋನಿ, ಮಂಜುನಾಥ್ ನಗರ, ಮಹಾಲಕ್ಷ್ಮಿ ನಗರ, ಕಾಟರಾಯ ನಗರ, ಸೋಪ್ ಫ್ಯಾಕ್ಟರಿ ಲೇಔಟ್, ವಿಜಯಲಕ್ಷ್ಮಿ ಲೇಔಟ್ ಹಾಗೂ ಸುತ್ತಮುತ್ತಲಿದಲಿನ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಅಲ್ಲದೆ, ಅಂದಾನಪ್ಪ ಲೇಔಟ್ , ಬಿಟಿಎಸ್ ಲೇಔಟ್, ಸಿದ್ದೇಶ್ವರ ಲೇಔಟ್, ಸಾಸುವೆಘಟ್ಟ, ಸೋಲದೇವನಹಳ್ಳಿ, ತರಬನಹಳ್ಳಿ ಮುಖ್ಯ ರಸ್ತೆ, ಹೆಸರಘಟ್ಟ ಮುಖ್ಯ ರಸ್ತೆ, ವಿಶ್ವೇಶರಯ್ಯ ಲೇಔಟ್, ರಾಯಲ್ ಎನ್‌ಕ್ಲೇವ್, ಬೈರವೇಶ್ವರ ವೃತ್ತ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹರಿಸಬೇಕು ಎಂದು ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಕಟ್ ಆಗಲಿದೆಯೋ ಅಂತಹ ಪ್ರದೇಶಗಳ ನಿವಾಸಿಗಳು ಮುಂಜಾಗ್ರತಾ ಕ್ರಮವಾಗಿ ಲ್ಯಾಪ್‌ಟ್ಯಾಪ್, ಮೊಬೈಲ್, ಬ್ಯಾಟರಿ ಸೇರಿದಂತೆ ಚಾರ್ಜಿಂಗ್ ಸಾಧನಗಳನ್ನು ಮುಂಚಿತವಾಗಿ ಚಾರ್ಜ್ ಮಾಡಿಟ್ಟುಕೊಳ್ಳುವಂತೆ ಸಲಹೆಯನ್ನೂ ಕೂಡ ನೀಡಿದೆ.












Click it and Unblock the Notifications