Bengaluru Power Cut: ಬೆಂಗಳೂರಿನ ಈ ಭಾಗಗಳಲ್ಲಿ ನವೆಂಬರ್ 30ರ ಭಾನುವಾರ ಕರೆಂಟ್‌ ಕಟ್‌

Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಬೆಂಗಳೂರಿನ ಈ ಭಾಗಗಳಲ್ಲಿ ನವೆಂಬರ್ 30ರಂದು ಬೆಂಗಳೂರಿನ ಈ ಭಾಗಗಳಲ್ಲಿ ಕರೆಂಟ್‌ ಕಟ್‌ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಹಾಗೂ ಕಾರಣ ಏನು ಎಂದು ತಿಳಿಯಿರಿ.

ಕೆಪಿಟಿಸಿಎಲ್ ವತಿಯಿಂದ ತುರ್ತುನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆ ನವೆಂಬರ್ 30ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ತಿಳಿಯಿರಿ.

Power Cut in Bengaluru s These Areas on november 30 Know details

ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆನೆ 66/11ಕೆವಿ ಪ್ಲಾಟಿನಂ ಸಿಟಿ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ನವೆಂಬರ್ 30ರ ಭಾನುವಾರ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಎಲ್ಲೆಲ್ಲಿ ಕರೆಂಟ್ ಕಟ್‌?: ರಿಲಯನ್ಸ್ ಇಂಡಸ್ಟ್ರೀಸ್, ಅಲಿಸ್ಡಾ, ಜೈ ಭಾರತ್‌ ಇಂಡಸ್ಟ್ರೀಸ್ ಏರಿಯಾ, ಟಾಟಾ ಅಕೆವಲ್, ಕರ‍್ಲೆ, ರಾಘವೇಂದ್ರ ಲೇಔಟ್, ಆರ್‌ಎನ್‌ಎಸ್‌ ಮೋಟಾರ್, ಮುನೇಶ್ವರ ನಗರ, ವೈಷ್ಣವಿ ನಕ್ಷತ್ರ ಅಪಾರ್ಟ್‌ಮೆಂಟ್, ಎಲ್‌ಟಿ ಕರ‍್ಲೆ, ಮುನೇಶ್ವರ ನಗರ 1ನೇ ಬ್ಲಾಕ್, ಆರ್‌ಟಿಒ ಟ್ರಾಕ್‌ ರಸ್ತೆ, ಪ್ಲಾಟಿನಂ ಸಿಟಿ ಅಪಾರ್ಟ್‌ಮೆಂಟ್, ಬಿಎಫ್‌ಡಬ್ಲ್ಯೂ, ಎನ್‌ಟಿಆರ್‌ಒ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಇನ್ನು ಗ್ರಾಹಕರು ಸಹಕರಿಸಬೇಕು ಎಂದು ಮನವಿ ಮಾಡಿದೆ. ಅಲ್ಲದೆ, ಹೆಚ್ಚಿನ ಮಾಹಿತಿಗಾಗಿ ಬೆಸ್ಕಾಂ ಸಹಾಯವಾಣಿಗೆ ಸಂಪರ್ಕಿಸಬಹುದು ಅಂತಲೂ ತಿಳಿಸಿದೆ. ಜೊತೆಗೆ ಯಾವೆಲ್ಲಾ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆಯೋ ಅಂತಹ ಪ್ರದೇಶಗಳ ಜನರು ಮುಂಜಾಗ್ರತಾ ಕ್ರಮವಾಗಿ ಚಾರ್ಜಿಂಗ್ ಸಾಧನಗಳನ್ನು ಮುಂಚಿತವಾಗಿ ಚಾರ್ಜ್‌ ಮಾಡಿಕೊಳ್ಳಿ ಎಂದು ಸೂಚನೆ ನೀಡಿದೆ. ಈ ರೀತಿಯ ಸಲಹೆಗಳನ್ನು ನೀಡಿರುವುದು ಇದೇ ಮೊದಲೇನಲ್ಲ. ವಿದ್ಯುತ್ ವ್ಯತ್ಯಯ ಉಂಟಾಗುವ ಹಿಂದಿನ ದಿನವೇ ಈ ಬಗ್ಗೆ ಮನವಿ ಮಾಡುತ್ತಲೇ ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+