Bengaluru Power Cut: ಬೆಂಗಳೂರಿನ ಈ ಭಾಗಗಳಲ್ಲಿ ಅಕ್ಟೋಬರ್ 10ರ ಶುಕ್ರವಾರ ವಿದ್ಯುತ್ ವ್ಯತ್ಯಯ
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಅಕ್ಟೋಬರ್ 10ರ ಶುಕ್ರವಾರದಂದು ಬೆಂಗಳೂರಿನ ಈ ಭಾಗಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಹಾಗೂ ಕಾರಣ ಏನು ಎಂದು ತಿಳಿಯಿರಿ.
ಕೆಪಿಟಿಸಿಎಲ್ ವತಿಯಿಂದ ತುರ್ತುನಿರ್ವಹಣಾ ಕಾರ್ಯ ಮತ್ತು ದುರಸ್ತಿ ಕಾರ್ಯಗಳನ್ನು ಕೈಗೊಳ್ಳುವ ಹಿನ್ನೆಲೆ ಬೆಂಗಳೂರಿನ ಹಲವಾರು ಭಾಗಗಳಲ್ಲಿ ಅಕ್ಟೋಬರ್ 10ರ ಶುಕ್ರವಾರ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ನಿರ್ವಹಣಾ ಚಟುವಟಿಕೆಗಳಲ್ಲಿ ಪ್ರಸರಣ ಮಾರ್ಗಗಳನ್ನು ನವೀಕರಿಸುವುದು, ಟ್ರಾನ್ಸ್‌ಫಾರ್ಮರ್‌ಗಳನ್ನು ಬದಲಾಯಿಸುವುದು ಮತ್ತು ವಿದ್ಯುತ್ ಗ್ರಿಡ್‌ಗಳ ಬಳಿ ಸಸ್ಯವರ್ಗವನ್ನು ತೆರವುಗೊಳಿಸುವುದು ಸೇರಿದಂತೆ ಇನ್ನಿತರೆ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ ಕರೆಂಟ್ ಕಟ್ ಮಾಡಲಾಗುತ್ತದೆ ಎಂದು ತಿಳಿಸಿದೆ.
ವಿದ್ಯುತ್ ಕಡಿತದ ಪರಿಣಾಮವು ಬೆಂಗಳೂರು ದಕ್ಷಿಣ ಮತ್ತು ಪೂರ್ವ ವಿಭಾಗಗಳ ವ್ಯಾಪ್ತಿಯ ಹಲವಾರು ನೆರೆಹೊರೆಗಳ ಮೇಲೆ ಬೀರಲಿದೆ. ಹಾಗಾದ್ರೆ, ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎನ್ನುವ ಪ್ರಶ್ನೆಗೆ ಉತ್ತರವನ್ನು ಇಲ್ಲಿ ನೀಡಲಾಗಿದೆ ಕಣ್ಣಾಡಿಸಿ.
ಶುಕ್ರವಾರ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?: ಬಿನ್ನಿಪೇಟೆ, ವಿಜಯನಗರ, ರಾಜಾಜಿನಗರ, ಬಸವನಗುಡಿ, ಜಯನಗರ, ಕೋರಮಂಗಲ, ಬಿಟಿಎಂ ಲೇಔಟ್, ಇಂದಿರಾನಗರ, ಎಚ್‌ಎಎಲ್, ವೈಟ್‌ಫೀಲ್ಡ್, ಮಾರತ್ತಹಳ್ಳಿ ಹಾಗೂ ಇಲ್ಲಿನ ಸುತ್ತಮುತ್ತಲಿ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಇನ್ನು ವಿದ್ಯುತ್ ವ್ಯತ್ಯಯ ಆಗುವ ಪ್ರದೇಶಗಳ ನಿವಾಸಿಗಳು ಮುಂಜಾಗ್ರತಾ ಕ್ರಮವಾಗಿ ಅಗತ್ಯ ಸಾಧನಗಳನ್ನು ಮುಂಚಿತವಾಗಿ ಚಾರ್ಜ್ ಮಾಡಿಕೊಳ್ಳುವುದು ಉತ್ತಮ ಎಂದು ಸೂಚಿಸಿದೆ.
ಯಾವ್ಯಾವ ಪ್ರದೇಶಗಳಲ್ಲಿ ಕರೆಂಟ್ ಕಟ್?
* ಬಿನ್ನಿಪೇಟೆ
* ವಿಜಯನಗರ
* ರಾಜಾಜಿನಗರ
* ಬಸವನಗುಡಿ
* ಜಯನಗರ
* ಕೋರಮಂಗಲ
* ಬಿಟಿಎಂ ಲೇಔಟ್
* ಇಂದಿರಾನಗರ
* ಎಚ್‌ಎಎಲ್
* ವೈಟ್‌ಫೀಲ್ಡ್
* ಮಾರತ್ತಹಳ್ಳಿ ಹಾಗೂ ಇಲ್ಲಿನ ಸುತ್ತಮುತ್ತಲಿ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಬೆಸ್ಕಾಂ ಸಲಹೆ ಏನು?: ಮೊಬೈಲ್, ಲ್ಯಾಪ್‌ಟಾಪ್, ಟ್ಯಾಬ್, ಬ್ಯಾಟರಿ ಸೇರಿದಂತೆ ಇನ್ನಿತರೆ ವಿದ್ಯುತ್ ಅವಲಂಬಿತ ಉಪಕರಣಗಳನ್ನು ಚಾರ್ಜ್ ಮಾಡಿಕೊಳ್ಳುವುದು ಉತ್ತಮ ಎಂದು ಸಲಹೆ ನೀಡಿದೆ. ಗ್ರಾಹಕರು ಹೆಚ್ಚಿನ ಮಾಹಿತಿಗಾಗಿ ಬೆಸ್ಕಾಂ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ ಅಂತಲೂ ತಿಳಿಸಿದೆ. ಪ್ರತಿ ಬಾರಿಯೂ ಸಹ ಯಾವಾಗ ವಿದ್ಯುತ್ ವ್ಯತ್ಯಯ ಮಾಡಲಾಗುತ್ತದೆಯೋ ಅಂತಹ ಪ್ರದೇಶಗಳ ನಿವಾಸಿಗಳಿಗೆ ಮುಂಜಾಗ್ರತಾ ಕ್ರಮವಾಗಿ ಒಂದು ಇನ ಮುಂಚಿತವಾಗಿ ಈ ಸಲಹೆಯನ್ನು ಬೆಸ್ಕಾಂ ನೀಡುತ್ತಲೇ ಬಂದಿದೆ.












Click it and Unblock the Notifications