Bengaluru Power Cut: ಬೆಂಗಳೂರಿನ ಈ ಭಾಗಗಳಲ್ಲಿ ಸೋಮವಾರ, ಮಂಗಳವಾರ ಕರೆಂಟ್ ಕಟ್
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಅಕ್ಟೋಬರ್ 13 ಹಾಗೂ 14ರಂದು ಬೆಂಗಳೂರಿನ ಈ ಭಾಗಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಹಾಗೂ ಕಾರಣ ಏನು ಎಂದು ತಿಳಿಯಿರಿ.
ಕೆಪಿಟಿಸಿಎಲ್ ವತಿಯಿಂದ ತುರ್ತುನಿರ್ವಹಣಾ ಕಾರ್ಯ ಹಿನ್ನೆಲೆ ಅಕ್ಟೋಬರ್ 13 ಸೋಮವಾರ ಹಾಗೂ 14 ಮಂಗಳವಾರ 8 ಗಂಟೆಗಳ ಕಾಲ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ತಿಳಿಯಿರಿ.

ಎಲ್ಲೆಲ್ಲಿ ಕರೆಂಟ್ ಕಟ್?: ನಾಗರಘಟ್ಟ ಮತ್ತು ನರಸಿಕಟ್ಟೆ ಉಪಕೇಂದ್ರಗಳಲ್ಲಿ ತುರ್ತುನಿರ್ವಹಣಾ ಕಾರ್ಯ ನಡೆಯಲಿದೆ. ಈ ಹಿನ್ನೆಲೆ ಅಕ್ಟೋಬರ್ 13 ಮತ್ತು 14ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ಸೋಮವಾರ ಮತ್ತು ಮಂಗಳವಾರ ಬೆಂಗಳೂರಿನ ಹೆಡಗರಹಳ್ಳಿ, ಬೆಳಗರಹಳ್ಳಿ, ಕನ್ನುಘಟ್ಟ, ನಾಗರಘಟ್ಟ, ಎನ್ ಮೇಲನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ವ್ಯತ್ಯಯ ಉಂಟಾಗುವಂತಹ ಪ್ರದೇಶಗಳ ನಿವಾಸಿಗಳು ಮೊಬೈಲ್ ಫೋನ್, ಬ್ಯಾಟರಿ, ಲ್ಯಾಪ್‌ಟ್ಯಾಪ್ ಸೇರಿದಂತೆ ಇನ್ನಿತರೆ ಚಾರ್ಜಿಂಗ್ ಸಾಧನಗಳನ್ನು ಚಾರ್ಜ್ ಮಾಡಿಟ್ಟುಕೊಳ್ಳುವುದು ಉತ್ತಮ ಎಂದು ತಿಳಿಸಿದೆ.
ತಿಂಗಳಾಂತ್ಯದವರೆಗೂ ವಿದ್ಯುತ್ ವ್ಯತ್ಯಯ: ಮತ್ತೊಂದೆಡೆ, ಬೆಸ್ಕಾಂ ಉಪವಿಭಾಗ 1ರಲ್ಲಿ ಫೀಡರ್ ನಿರ್ವಹಣಾ ಕಾರ್ಯವನ್ನು ಕೈಗೊಳ್ಳಲಾಗುತ್ತಿದ್ದು, ಈ ಹಿನ್ನೆಲೆ ನಗರದ ಹಲವು ಭಾಗಗಳಲ್ಲಿ ಅಕ್ಟೋಬರ್ 31ರವರೆಗೆ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ.
ಅಕ್ಟೋಬರ್ 13, 15, 17, 19, 21, 23, 25, 27, 29 ಮತ್ತು 31ರಂದು ಹನುಮಂತಪುರ, ಅನ್ನೆತೋಟ, ಜಗನ್ನಾಥಪುರ, ನಿರ್ವಾಣಿ ಲೇಔಟ್, ಅಗ್ನಿಬನ್ನಿರಾಯ ನಗರ, ಬಿಎ ಗುಡಿಪಾಳ್ಯ, ಮತ್ತು ಅಂಬೇಡ್ಕರ್ ನಗರ. ಅಕ್ಟೋಬರ್ 14, 16, 18, 24, 26, 28 ಮತ್ತು 30ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿಗೇಟ್, ಕುಂಟಮ್ಮಂತೋಟ, ದಿಬ್ಬೂರು, ಬಿಎಚ್ ಪಾಳ್ಯ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿ ರಸ್ತೆ, ಪಿಎನ್‌ಆರ್ ಪಾಳ್ಯ, ಕುಪ್ಪೂರು ಮತ್ತು ಹೊಸಹಳ್ಳಿ ಭಾಗಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಅಕ್ಟೋಬರ್ 12ರಂದು ಎಲ್ಲೆಲ್ಲಿ ಕರೆಂಟ್ ಕಟ್?: ತುರ್ತು ನಿರ್ವಹಣೆ ಕಾರ್ಯ ಹಿನ್ನೆಲೆ ಅಕ್ಟೋಬರ್ 12ರ ಭಾನುವಾರ ಬೆಸ್ಕಾಂ ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ 7-8 ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿತ್ತು. 66/11 ಕೆವಿ ಉಪಕೇಂದ್ರದ ಅಡಿಯಲ್ಲಿ ಈ ಕಾಮಗಾರಿ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿತ್ತು.
ಅಕ್ಟೋಬರ್ 12ರಂದು 66/11 ಕೆವಿ ಉಪಕೇಂದ್ರದ ಅಡಿಯಲ್ಲಿರುವ ಎಫ್ 5 ಶ್ರೀನಿವಾಸಪುರ ಮಾರ್ಗದ ಎಬಿ ಕೇಬಲ್‌ನ ನಿರ್ವಹಣಾ ಕಾರ್ಯವನ್ನು ಕೈಗೊಳ್ಳಲಾಗಿದೆ. ಈ ಹಿನ್ನೆಲೆ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ 17 ಕೊಲ್ಲೂರು ಮತ್ತು ಎಫ್ 8 ಕೊಟಪಲ್ಲಿ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿತ್ತು. ಈ ಅವಧಿಯಲ್ಲಿ ಗ್ರಾಹಕರು ಸಹಕರಿಸಬೇಕೆಂದು ಬೆಸ್ಕಾಂ ಮನವಿ ಮಾಡಿತ್ತು.












Click it and Unblock the Notifications