Bengaluru Power Cut: ಬೆಂಗಳೂರಿನಲ್ಲಿ ಅಕ್ಟೋಬರ್ 16ರ ಗುರುವಾರ ಕರೆಂಟ್ ಕಟ್
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಅಕ್ಟೋಬರ್ 16ರ ಗುರುವಾರ ಬೆಂಗಳೂರಿನ ಈ ಭಾಗಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಹಾಗೂ ಕಾರಣ ಏನು ಎಂದು ತಿಳಿಯಿರಿ.
ಕೆಪಿಟಿಸಿಎಲ್ ವತಿಯಿಂದ ತುರ್ತುನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆ ಅಕ್ಟೋಬರ್ 16ರ ಗುರುವಾರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ತಿಳಿಯಿರಿ.

ಎಲ್ಲೆಲ್ಲಿ ಕರೆಂಟ್ ಕಟ್?: ತುರ್ತುನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆ ಅಕ್ಟೋಬರ್ 16ರಂದು ಬೆಂಗಳೂರಿನ ಬಾಲಾಜಿ ಲೇಔಟ್, ಹೊಸಹಳ್ಳಿ, ನಾಗಣ್ಣಪಾಳ್ಯ, ಎಸ್‌ಎಸ್ ಪಾಳ್ಯ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇದಕ್ಕೆ ಗ್ರಾಹಕರು ಸಹರಿಸಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ.
ರಾಜ್ಯದ ಹಲವೆಡೆ ವಿದ್ಯುತ್ ವ್ಯತ್ಯಯ: ರಾಜ್ಯದ ಕೆಲವು ಇನ್ನಿತರ ಭಾಗಗಳಲ್ಲಿಯೂ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ. ತುಮಕೂರು ಜಿಲ್ಲೆಯ ಶಿರಾ ನಗರ ಪ್ರದೇಶದಲ್ಲಿ ಬೆಸ್ಕಾಂ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳಲಿದೆ. ಈ ಹಿನ್ನೆಲೆ ಯಲಿಯೂರು ಮತ್ತು ಭುವನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ತಿಳಿಸಿದೆ. ಅಲ್ಲದೆ, ಶಿವಾಜಿನಗರ, ಸಂತೇಪೇಟೆ (ಕೆಎಸ್‌ಆರ್‌ಟಿಸಿ ಡಿಪೋ ಹಿಂದೆ), ಗುಡಿಮಾರನಹಟ್ಟಿ, ಎಂಬಿ 3 ಲೇಔಟ್ ಪ್ರದೇಶಗಳಲ್ಲಿ ವಿದ್ಯತ್ ಪೂರೆಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಬೆಂಗಳೂರಿನ ಕುಂಕುರು ಬೆಸ್ಕಾಂ ನಗರ ಉಪವಿಭಾಗದಲ್ಲಿ, ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಕಡಿತಗೊಳ್ಳಲಿದೆ. ಇದರ ಮಧ್ಯೆ, ತುಮಕೂರಿನ ಶಿರಾ ನಗರ ವ್ಯಾಪ್ತಿಯಲ್ಲಿ, ಬೆಳಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಅಲ್ಲದೆ, ಯಾವೆಲ್ಲಾ ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆಯೋ ಅಲ್ಲಿನ ನಿವಾಸಿಗಳು ಮುಂಜಾಗ್ರತಾ ಕ್ರಮವಾಗಿ ಮೊಬೈಲ್, ಲ್ಯಾಪ್‌ಟ್ಯಾಪ್, ಬ್ಯಾಟರಿ ಸೇರಿದಂತೆ ಇನ್ನಿತರೆ ಚಾರ್ಜಿಂಗ್ ಸಾಧಾನಗಳನ್ನು ಮುಂಚಿತವಾಗಿ ಚಾರ್ಜ್ ಮಾಡಿಕೊಳ್ಳುವುದು ಉತ್ತಮ ಅಂತಲೂ ಸಲಹೆ ನೀಡಿದೆ.
ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನ ನಿವಾಸಿಗಳು ವಿದ್ಯುತ್ ವ್ಯತ್ಯಯದಿಂದ ಬೇಸತ್ತು ಹೋಗಿದ್ದಾರೆ. ಇನ್ನೂ ಬೆಸ್ಕಾಂ ಬೇರೆ ಯಾವುದೇ ದಾರಿ ಇಲ್ಲದೆ, ತುರ್ತು ನಿರ್ವಹಣಾ ಸಂದರ್ಭಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ಪೂರೈಕೆ ವ್ಯತ್ಯಯ ಮಾಡುತ್ತಲಿರುತ್ತದೆ. ಲೈನ್ ಅಳವಡಿಕೆ, ಟ್ರಾನ್ಸ್‌ಫರ್ಮರ್‌ಗಳ ಬದಲಾವಣೆ ಮಾಡುವಂತಹ ಸಮಯದಲ್ಲಿ ವಿದ್ಯುತ್ ವ್ಯತ್ಯಯ ಮಾಡಲೇಬೇಕಾಗುತ್ತದೆ. ಬೆಸ್ಕಾಂ ವಿದ್ಯುತ್ ಕಡಿತದ ಒಂದು ದಿನದ ಮುಂಚೆಯೇ ಮುಂಜಾಗ್ರತಾ ಕ್ರಮವಾಗಿ ಗ್ರಾಹಕರಿಗೆ ಚಾರ್ಜಿಂಗ್ ಸಾಧನಗಳನ್ನು ಚಾರ್ಜ್ ಮಾಡಿಟ್ಟುಕೊಳ್ಳುವಂತೆ ಸೂಚನೆ ನೀಡುತ್ತಲೇ ಬಂದಿದೆ.












Click it and Unblock the Notifications