Bengaluru Power Cut: ಬೆಂಗಳೂರಿನ ಈ ಭಾಗಗಳಲ್ಲಿ ಅಕ್ಟೋಬರ್‌ 28ರಂದು ಕರೆಂಟ್‌ ಕಟ್‌

Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಅಕ್ಟೋಬರ್‌ 28ರಂದು ಬೆಂಗಳೂರಿನ ಈ ಭಾಗಗಳಲ್ಲಿ ಕರೆಂಟ್‌ ಕಟ್‌ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಹಾಗೂ ಕಾರಣ ಏನು ಎಂದು ತಿಳಿಯಿರಿ.

ಕೆಪಿಟಿಸಿಎಲ್ ವತಿಯಿಂದ ತುರ್ತುನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆ ಅಕ್ಟೋಬರ್‌ 28ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ತಿಳಿಯಿರಿ.

Power Cut in Bengaluru s These Areas on October 28 Know details

ಈ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಪುಟ್ಟೇನಹಳ್ಳಿ ಉಪಕೇಂದ್ರ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಗ್ಗೆ 11ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?: ವೆಂಕಟಾಲ, ಪಾಲನಹಳ್ಳಿ, ಕಟ್ಟಿಗೇನಹಳ್ಳಿ, ಸೆಂಚುರಿ ಲೇಔಟ್, ಅನಂತಪುರ ಗೇಟ್, ಏರ್ ಫೋರ್ಸ್, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರವೆಂಕಟಾಲ, ಪಾಲನಹಳ್ಳಿ, ಕಟ್ಟಿಗೇನಹಳ್ಳಿ, ರಾಮ್ಕಿ ಉತ್ತರ-1, ಮಾರುತಿ ನಗರ, ಪ್ರೆಸ್ಟೀಜ್ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್‌ ಕಟ್ ಆಗಲಿದೆ ಎಂದು ತಿಳಿಸಿದೆ.

ಮಾರುತಿ ನಗರ, ಮಾರುತಿ ರಾಯಲ್ ಗಾರ್. ಕಟ್ಟಿಗೇನಹಳ್ಳಿ, ಮಾರುತಿ ನಗರ, ಕೋಗಿಲು, ಪೂಜಾ ಮಹಾಲಕ್ಷ್ಮಿ ಐಒ, ಸಪ್ತಗಿರಿ ಐಒ, ಪ್ರಕೃತಿ ನಗರ, ಶ್ರೀನಿವಾಸಪುರ, ಅಯ್ಯಪ್ಪ ಎನ್ಕ್ಲೇವ್, ಎಸ್‌ಎನ್‌ ಹಳ್ಳಿ, ಮೈಲಪನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಇನ್ನು ಐಟಿ ವ್ಯವಸ್ಥೆಯ ತುರ್ತು ನಿರ್ವಹಣೆ ಕಾರ್ಯ ಹಿನ್ನೆಲೆ ಈ ಆನ್‌ಲೈನ್‌ ಸೇವೆಗಳಾದ ವಿದ್ಯುತ್‌ ಬಿಲ್‌ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಹಾಗೂ ಹೊಸ ಸಂಪರ್ಕ ಸೇರಿದಂತೆ ಆನ್‌ ಲೈನ್‌ ಆಧರಿತ ಸೇವೆಗಳು ಅಕ್ಟೋಬರ್ 27ರ ರಾತ್ರಿ 8 ಗಂಟೆಯಿಂದ ಅಕ್ಟೋಬರ್ 28ರ ಬೆಳಗ್ಗೆ 11 ಗಂಟೆಯವರೆಗೆ ನಗರ ಪ್ರದೇಶಗಳಲ್ಲಿ ಲಭ್ಯ ಇರುವುದಿಲ್ಲ ಎಂದು ತಿಳಿಸಿದೆ.

ಎಲ್ಲಾ ಐದು ವಿದ್ಯುತ್‌ ಸರಬರಾಜು ಕಂಪನಿಗಳ ಈ ಕೆಳಕಂಡ ನಗರ ಉಪ ವಿಭಾಗದ ಗ್ರಾಹಕರಿಗೆ https://www.bescom.co.in, www.hescom.co.in, www.gescomglb.org, www.mescom.org.in ಮತ್ತು .cescmysore.in, ಪೋರ್ಟ್‌ಗಳ ಮೂಲಕ ಮಾಡುವ ಆನ್‌ಲೈನ್‌ ಸೇವೆಗಳಾದ ಬಿಲ್ ಪಾವತಿ, ಹೊಸ ಸಂಪರ್ಕ ಲಭ್ಯ ಇರುವುದಿಲ್ಲ. ಹಾಗೆಯೇ ವಿದ್ಯುತ್ ಬಿಲ್ ಪಾವತಿಗಾಗಿ ಬಳಸುವ ಬೆಸ್ಕಾಂ ಮಿತ್ರ ಆಪ್, ಬೆಂಗಳೂರು ಒನ್, ಕರ್ನಾಟಕ ಒನ್ ಸೇರಿದಂತೆ ಮೊದಲಾದ ಥರ್ಡ್ ಪಾರ್ಟಿ ಪಾವತಿ ವಿಧಾನಗಳಲ್ಲಿ ಆನ್‌ಲೈನ್ ಸೇವೆ ಲಭ್ಯವಿರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+