Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಸೆಪ್ಟೆಂಬರ್ 16ಹಾಗೂ 17ರಂದು ಕರೆಂಟ್ ಕಟ್

Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಸೆಪ್ಟೆಂಬರ್ 16ಹಾಗೂ 17ರಂದು ನಗರದ ಹಲವು ಭಾಗಗಳಲ್ಲಿ ಕರೆಂಟ್‌ ಕಟ್‌ ಆಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಹಾಗಾದ್ರೆ, ಎಲ್ಲೆಲ್ಲಿ? ಕಾರಣ ಏನು ಹಾಗೂ ಸಮಯಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ ಸೆಪ್ಟೆಂಬರ್ 16ರ ಮಂಗಳವಾರ ಹಾಗೂ ಸೆಪ್ಟೆಂಬರ್ 17ರ ಬುಧವಾರ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಹಾಗಾದ್ರೆ ಎಲ್ಲೆಲ್ಲಿ ಹಾಗೂ ಎಷ್ಟು ಗಂಟೆಯವರೆಗೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ಕಣ್ಣಾಡಿಸಿ.

Power Cut in Bengaluru s These Areas on September 16 and 17 Know details

ಮಂಗಳವಾರ ಎಲ್ಲೆಲ್ಲಿ ಕರೆಂಟ್‌ ಕಟ್‌?: ಆಡುಗೋಡಿ ಉಪಕೇಂದ್ರ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 16ರ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಕರೆಂಟ್‌ ಇರುವುದಿಲ್ಲ. ಆಡುಗೋಡಿ, ಸಲಾಪುರಿಯಾ ಟವರ್, ಬಿಗ್ ಬಜಾರ್, ಆಕ್ಸೆಂಚರ್, ಕೆ.ಎಂ.ಎಪ್, ನಂಜಪ್ಪ ಲೇಔಟ್, ನ್ಯೂ ಮೈಕೋ ರಸ್ತೆ, ಚಿಕ್ಕಲಕ್ಷ್ಮೀ ಲೇಔಟ್, ಮಹಲಿಂಗೇಶ್ವರ ಬಡಾವಣೆ, ಡೈರಿ ಸರ್ಕಲ್‌ ಫೋರಾಮ್ ಮಾಲ್, ರಂಗದಾಸಪ್ಪ ಲೇಔಟ್.

ಲಕ್ಕಸಂದ್ರ, ವಿಲ್ಸನ್ ಗಾರ್ಡನ್, ಚಿನ್ನಯ್ಯನ್ನ ಪಾಳ್ಯ, ಚಂದ್ರಪ್ಪ ನಗರ, ನಿಮ್ಯಾನ್ಸ್ ಅಡ್ಮಿನಿಸ್ಟ್ರೇಟಿವ್ ಬ್ಲಾಕ್, ಬಂಡೆ ಸ್ಲಮ್, ಸುಣ್ಣದಕಲ್ಲು, ಬೃಂದಾವನ ಸ್ಲಮ್, ಲಾಲ್‌ಜಿ ನಗರ, ಶಾಮಣ್ಣ ಗಾರ್ಡನ್, ಎನ್‌ಡಿಆರ್‌ಐ, ಪೊಲಿಸ್ ವಸತಿ ಗೃಹಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

ಬುಧವಾರ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?: 66/11 ಕೆವಿ ರಾಜನಕುಂಟೆ ಉಪಕೇಂದ್ರ ವ್ಯಾಪ್ತಿಯಲ್ಲಿ ಬುಧವಾರ ಬೆಳಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ದೇವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಇಟಗಲ್ಪುರ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಲು, ಸೊನ್ನೇನಹಳ್ಳಿ, ಸೆಂಚುರ್ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್‌ ಕಟ್‌ ಆಗಲಿದೆ ಎಂದು ತಿಳಿಸಿದೆ.

ಇನ್ನು ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆಯೋ ಪ್ರದೇಶಗಳ ನಿವಾಸಿಗಳು ಮುಂಜಾಗ್ರತಾ ಕ್ರಮವಾಗಿ ವಿದ್ಯುತ್‌ಗೆ ಸಂಬಂಧಿತ ಉಪಕರಣಗಳಾದ ಮೊಬೈಲ್‌, ಲ್ಯಾಪ್‌ಟಾಪ್‌, ಟ್ಯಾಬ್‌, ಬ್ಯಾಟರಿ ಇತ್ಯಾದಿಗಳನ್ನು ಮುಂಚಿತವಾಗಿ ಚಾರ್ಜ್‌ ಮಾಡಿಟ್ಟುಕೊಳ್ಳುವುದು ಒಳಿತು ಎಂದು ಸಲಹೆ ನೀಡಿದೆ. ಹೆಚ್ಚಿನ ಮಾಹಿತಿಹಾಗಿ ಬೆಸ್ಕಾಂ ಸಹಾಯವಾಣಿಗೆ ಕರೆ ಮಾಡಬಹುದು ಎಂದು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+