Bengaluru Power Cut: ಬೆಂಗಳೂರಿನ ಈ ಭಾಗಗಳಲ್ಲಿ ಸೆಪ್ಟೆಂಬರ್ 23ರ ಮಂಗಳವಾರ ಬೆಳಗ್ಗೆ 11 ಗಂಟೆಯಿಂದ ವಿದ್ಯುತ್ ವ್ಯತ್ಯಯ
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಸೆಪ್ಟೆಂಬರ್ 23ರ ಮಂಗಳವಾರ ಬೆಂಗಳೂರಿನ ಈ ಭಾಗಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಹಾಗೂ ಕಾರಣ ಏನು ಎಂದು ತಿಳಿಯಿರಿ.
ಕೆಪಿಟಿಸಿಎಲ್ ವತಿಯಿಂದ 66/11 ಕೆ.ವಿ ತುರ್ತುನಿರ್ವಹಣಾ ಕಾರ್ಯ ಹಿನ್ನೆಲೆ ಸೆಪ್ಟೆಂಬರ್ 23ರ ಮಂಗಳವಾರ ಬೆಳಗ್ಗೆ 11ರಿಂದ ಸಂಜೆ 4 ಗಂಟೆವರೆಗೆ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಮಟಾಗಲಿದೆ ಎಂದು ತಿಳಿಸಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ತಿಳಿಯಿರಿ.

ಮಂಗಳವಾರ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ 66/11ಕೆ.ವಿ. ಯಲ್ಲಾರ್ ಬಂಡೆ ಉಪಕೇಂದ್ರದ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಗ್ಗೆ 11ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.
ಕಾವಲೆಬೈರಸಂದ್ರ, ಎಲ್‌ಆರ್ ಬಂಡೆ ಮುಖ್ಯರಸ್ತೆ, ಗಾಂಧಿನಗರ, ಚಿನ್ನಣ್ಣ ಲೇಔಟ್, ಅಂಬೇಡ್ಕರ್ ಲೇಔಟ್, ಅನ್ವರ್ ಲೇಔಟ್, ಕಾವೇರಿ ನಗರ, ಅಂಬೇಡ್ಕರ್ ವೈದ್ಯಕೀಯ ಕಾಲೇಜು, ಸುಲ್ತಾನ್ ಪಾಳ್ಯ, ರಂಕಾನಗರ, ಕನಕನಗರ, ಕೆಎಚ್‌ಬಿ ಮುಖ್ಯರಸ್ತೆ, ಭುವನೇಶ್ವರಿ ನಗರ, ಮಠಾಧೀಶ ಸಭಾಂಗಣ, ಮಠಾಧೀಶ ಸಭಾಂಗಣ ನಗರ.
ವಿ ನಾಗೇನಹಳ್ಳಿ, ಪೆರಿಯಾರ್ ನಗರ, ಪೆರಿಯಾರ್ ವೃತ್ತ, ಶಂಪುರ, ಕುಶಾಲ್ ನಗರ, ಮೋದಿ ರಸ್ತೆ, ಮೋದಿ ಉದ್ಯಾನ, ದೊಡ್ಡಣ್ಣ ನಗರ, ಮುನಿವೀರಪ್ಪ ಲೇಔಟ್, ಸಕ್ಕರೆ ಮಂಡಿ, ಉಪ್ಪಿನ ಮಂಡಿ, ಮುನೇಶ್ವರ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ತಿಳಿಸಿದೆ.
ಇನ್ನು ವಿದ್ಯುತ್ ವ್ಯತ್ಯಯ ಆಗುವಂತಹ ಪ್ರದೇಶಗಳಲ್ಲಿನ ನಿವಾನಿಗಳು ವಿದ್ಯುತ್‌ಗೆ ಸಂಬಂಧಿಸಿದ ಉಪಕರಣಗಳು ಅದರಲ್ಲೂ ಮೊಬೈಲ್, ಬ್ಯಾಟರಿ, ಲ್ಯಾಪ್‌ಟಾಪ್ ಅನ್ನು ಮುಂಚಿತವಾಗಿ ಚಾರ್ಜ್ ಮಾಡಿಟ್ಟುಕೊಳ್ಳಿ ಎಂದು ಮುಂಜಾಗ್ರತಾ ಕ್ರಮವಾಗಿ ಸಲಹೆಯನ್ನು ಕೂಡ ನೀಡಿದೆ.
ಶನಿವಾರ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?: ಪದ್ಮನಾಭನಗರ ಉಪಕೇಂದ್ರದಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ. ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ಸೆಪ್ಟೆಂಬರ್ 20ರ ಶನಿವಾರ ಸಂಜೆ 6 ಗಂಟೆವರೆಗೆ ನಗರದ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.
ಶೊಭಾ ಸಿಟಿ, ಚೊಕ್ಕನಹಳ್ಳಿ, ಡೋಮಿನೊ ಪಿಜ್ಜಾ ಇನ್ ಪ್ಯಾರಡೈಸ್, ನೂರ್ ನಗರ, ಎಕ್ಸ್ ಸರ್ವಿಸ್ಮೆನ್ ಲೇಔಟ್, ಪೊಲೀಸ್ ಕ್ವಾಟ್ರಸ್, ಆರ್‌ಕೆ ಹೆಗ್ಡೆ ನಗರ, ಶಬರಿ ನಗರ, ಹೊಸ ಶಾಂತಿ ನಗರ, ಕೆಂಪೇಗೌಡ ಲೇಔಟ್, ನಾಗೇನಹಳ್ಳಿ ಗ್ರಾಮ, ಎಸ್ತರ್ ಹರ್ಮೋನಿಕ್ ಲೇಔಟ್, ಬಾಲಾಜಿ ಲೇಔಟ್, ನಾಗೇನಹಳ್ಳಿ ಜಿಮ್, ಸ್ಲಂ ಬರ್ಡ್ ಮತ್ತು ಬೆಂಚ್ ರಾಯಲ್‌ವುಡ್, ಅರ್ಕಾವತಿ ಲೇಔಟ್ ಥಣಿಸಂದ್ರದಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ತಿಳಿಸಿದೆ.
ಆರ್‌ಕೆ ಹೆಗಡೆ ನಗರ, ಬೆಳ್ಳಹಳ್ಳಿ ಗ್ರಾಮ, ತಿರುಮೇನಹಳ್ಳಿ ಗ್ರಾಮ, ಮಿತ್ತಗಾನಹಳ್ಳಿ ಮತ್ತು ಕೋಗಿಲು ಗ್ರಾಮ, ಬೆಲಹಳ್ಳಿ, ವಿಧಾನಸೌಧ ಲೇಔಟ್, ಕರ್ನಾಟಕ ಕಾಲೇಜು, ಭಾರತೀಯ ಸಿ.ಟಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.












Click it and Unblock the Notifications