Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಸೆಪ್ಟೆಂಬರ್ 28ರ ಭಾನುವಾರ ವಿದ್ಯುತ್ ವ್ಯತ್ಯಯ
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ಹಾಗೂ ಭಾರೀ ಮಳೆಯಾದಂತಹ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ. ಹಾಗೆಯೇ ಇದೀಗ ಸೆಪ್ಟೆಂಬರ್ 28ರ ಭಾನುವಾರ ನಗರದ ಈ ಭಾಗಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಹಾಗಾದ್ರೆ, ಎಲ್ಲೆಲ್ಲಿ ಹಾಗೂ ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ ಸೆಪ್ಟೆಂಬರ್ 28ರ ಭಾನುವಾರ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಹಾಗಾದ್ರೆ ಎಲ್ಲೆಲ್ಲಿ ಹಾಗೂ ಎಷ್ಟು ಗಂಟೆಯವರೆಗೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ಕಣ್ಣಾಡಿಸಿ.

66/11 ಕೆವಿ ವಿಜಯನಗರ ವಿದ್ಯುತ್ ಕೇಂದ್ರ, 220/66/11 ಕೆವಿ ಎಸ್ಆರ್‌ಎಸ್ ಪೀಣ್ಯ ಉಪಕೇಂದ್ರ ವ್ಯಾಪ್ತಿಯಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತದೆ. ಈ ಹಿನ್ನೆಲೆ ಭಾನುವಾರ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬಸ್ಕಾಂ ತಿಳಿಸಿದೆ.
ಭಾನುವಾರ ಎಲ್ಲೆಲ್ಲಿ ಕರೆಂಟ್ ಕಟ್?: ಬಸವೇಶ್ವರನಗರ, ವಿಜಯನಗರ, ಗೋವಿಂದರಾಜನಗರ, ಕಾಮಾಕ್ಷಿಪಾಳ್ಯ, ಆರ್.ಪಿ.ಸಿ.ಲೇಔಟ್, ಪ್ರಶಾಂತನಗರ, ಎಂ.ಸಿ.ಲೇಔಟ್, ಮಾರೇನಹಳ್ಳಿ, ಹೊಸಹಳ್ಳಿ, ತಿಮ್ಮೇನಹಳ್ಳಿ, ವಿನಾಯಕ ಲೇಔಟ್, ಕಾವೇರಿಪುರ, ರಂಗನಾಥಪುರ, ಸಿಂಡಿಕೇಟ್ ಬ್ಯಾಂಕ್ ಕಾಲೋನಿ, ನಾಗರಬಾವಿ, ಸಿದ್ದಯ್ಯ ಪುರಾಣಿಕ್ ರೋಡ್, ಕೆ.ಎಚ್.ಬಿ.ಕಾಲೋನಿ, ಮಾಗಡಿ ಮೈನೆ ರೋಡ್.
ಎಚ್.ಜಿ.ಆರ್. ಲೇಔಟ್, ಅಗ್ರಹಾರ ದಾಸರಹಳ್ಳಿ, ಪೀಣ್ಯ 10ನೇ ಮುಖ್ಯರಸ್ತೆ, 11ನೇ ಮುಖ್ಯರಸ್ತೆ, ಉಡುಪಿ ಹೋಟೆಲ್ ಸುತ್ತಮುತ್ತ, ಐಆರ್ ಪಾಲಿಟೆಕ್ನಿಕ್ ರಸ್ತೆ, ಲಕ್ಷ್ಮೀದೇವಿ ನಗರ, ಲಗ್ಗೆರೆ ಹಳೆ ಗ್ರಾಮ, ಲವಕುಶ ನಗರ, ರಾಗೀವ್ ಗಾಂಧಿ ನಗರ, ಚೌಡೇಶ್ವರಿ ನಗರ 6ನೇ, 7ನೇ, 8ನೇ, 9ನೇ ಕ್ರಾಸ್, 1ನೇ ಹಂತ ಪಿಐಎ 7ನೇ ಕ್ರಾಸ್, 1ನೇ ಹಂತ ಪಿಯುಎ.
ಟಿವಿಎಸ್ ಕ್ರಾಸ್ ರಸ್ತೆ ಬಳಿ, ಇಸ್ರೋ 1ನೇ, 2ನೇ ಕ್ರಾಸ್, 1ನೇ ಹಂತದ ಪಿಐಎ ಏರಿಯಾ ಮತ್ತು ಯಶ್ವತ್ಥಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಅಲ್ಲದೆ, ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆಯೋ ಅಂತಹ ಪ್ರದೇಶಗಳ ನಿವಾಸಿಗಳು ಮುಂಜಾಗ್ರತಾ ಕ್ರಮವಾಗಿ ಮೊಬೈಲ್, ಲ್ಯಾಪ್‌ಟ್ಯಾಪ್, ಬ್ಯಾಟರಿ ಸೇರಿದಂತೆ ಇನ್ನಿತರೆ ವಿದ್ಯುತ್‌ಗೆ ಸಂಬಂಧಿಸಿದ ಉಪಕರಣಗಳನ್ನು ಚಾರ್ಜ್ ಮಾಡಿಟ್ಟುಕೊಳ್ಳಿ ಎಂದು ಸೂಚನೆ ನೀಡಿದೆ.












Click it and Unblock the Notifications