Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಸೆಪ್ಟೆಂಬರ್ 12ರ ವರೆಗೆ ಕರೆಂಟ್ ಕಟ್
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳು ಹಾಗೂ ಮಳೆಯಾಗುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಸೆಪ್ಟೆಂಬರ್ 6 ಮತ್ತು 12ರಂದು ನಗರದ ಈ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಹಾಗೂ ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ ನಗರದ ಈ ಕೆಳಕಂಡ ಪ್ರದೇಶಗಳಲ್ಲಿ ಸೆಪ್ಟೆಂಬರ್ 6 ಮತ್ತು 12ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಅಲ್ಲದೆ, ವಿದ್ಯುತ್ ಕಡಿತಗೊಳ್ಳುವ ಪ್ರದೇಶದ ನಿವಾಸಿಗಳಿಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಸೂಚನೆಗಳನ್ನು ಕೂಡ ನೀಡಿದೆ.

66/11 ಕೆ.ವಿ. ಬಾಣಸವಾಡಿಯ ಪವರ್ ಸ್ಟೇಷನ್-3ರಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ ಸೆಪ್ಟೆಂಬರ್ 6ರಿಂದ ಸೆಪ್ಟೆಂಬರ್ 12ರ ವರೆಗೆ ಬೆಳಗ್ಗೆ 6ರಿಂದ ರಾತ್ರಿ 10 ಗಂಟೆಯವರೆಗೆ ವಿದ್ಯತ್ ಪೂರೈಕೆಯಲ್ಲಿ ಮಧ್ಯಂತರವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ಎಲ್ಲೆಲ್ಲಿ ಪವರ್ ಕಟ್?: 7ನೇ ಎ ಮತ್ತು 9ನೇ ಮೆನ್, ಎಚ್‌ಆರ್‌ಬಿಆರ್ ಲೇಔಟ್ 2ನೇ ಬ್ಲಾಕ್, ಟಿಎನ್‌ಎಸ್ ಲೇಔಟ್, ರಾಜ್‌ಕುಮಾರ್ ಪಾರ್ಕ್, ಕುಳ್ಳಪ್ಪ ಸರ್ಕಲ್, ಬಂಜಾರಾ ಲೇಔಟ್, ಬಂಜಾರಾ ಆರ್ಕೇಡ್, ಟ್ರಿನಿಟಿ ಎನ್‌ಕ್ಲೇವ್, ಆರ್‌ಕೆಬಿಆರ್ ಎನ್‌ಕ್ಲೇವ್, ಅಗರ ಲೇಕ್, ಮಂಜುನಾಥ್ ನಗರ, ಆಂದ್ರಾ ಕಾಲನಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ರಿಚಸ್ ಗಾರ್ಡನ್, ಎಂ.ಆರ್.ರಿಚಸ್ ಗಾರ್ಡನ್, ವೆಸ್ಟ್ ರಿಚಸ್ ಗಾರ್ಡನ್, ಕಾರೇಕಲ್ ಗುಡ್ಡ, ಎನ್ಆರ್‌ಐ ಲೇಔಟ್ ಫೇಸ್ 1, ದೊಡ್ಡ ಗುಬ್ಬಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ವಿದ್ಯುತ್ ವ್ಯತ್ಯಯ ಆಗುವಂತಹ ಪ್ರದೇಶಗಳ ನಿವಾಸಿಗಳು ಮುಂಜಾಗ್ರತಾ ಕ್ರಮವಾಗಿ ವಿದ್ಯುತ್‌ಗೆ ಸಂಬಂಧಿಸಿದ ಉಪಕರಣಗಳನ್ನು ಚಾರ್ಜ್ ಮಾಡಿಟ್ಟುಕೊಳ್ಳಬೇಕು. ಬ್ಯಾಟರಿ, ಮೊಬೈಲ್, ಲ್ಯಾಪ್‌ಟಾಪ್‌ಗಳಂತಹ ಉಪಕರಣಗಳನ್ನು ಮುಂಚಿತವಾಗಿ ಚಾರ್ಜ್ ಮಾಡಿಟ್ಟುಕೊಳ್ಳುವುದು ಉತ್ತಮ. ಅಲ್ಲದೆ, ಗೀಜರ್, ವಾಷಿಂಗ್ ಮಷಿನ್ ಅವಲಂಬನೆ ತಪ್ಪಿಸಬೇಕು ಅಂತಲೂ ಸೂಚನೆ ನೀಡಿದೆ.












Click it and Unblock the Notifications