Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಸೆಪ್ಟೆಂಬರ್ 9 ಮತ್ತು 10ರಂದು ಕರೆಂಟ್ ಕಟ್
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳು ಹಾಗೂ ಮಳೆಯಾಗುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಸೆಪ್ಟೆಂಬರ್ 9 ಮತ್ತು 10ರಂದು ನಗರದ ಹಲವು ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಹಾಗೂ ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ ನಗರದ ಈ ಕೆಳಕಂಡ ಪ್ರದೇಶಗಳಲ್ಲಿ ಸೆಪ್ಟೆಂಬರ್ 9 ಮತ್ತು 10ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಅಲ್ಲದೆ, ವಿದ್ಯುತ್ ಕಡಿತಗೊಳ್ಳುವ ಪ್ರದೇಶದ ನಿವಾಸಿಗಳಿಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಸೂಚನೆಗಳನ್ನು ಕೂಡ ನೀಡಿದೆ.

ಬಾಣಸವಾಡಿ 66/11 ಕೆ.ವಿ.ಉಪಕೇಂದ್ರದಲ್ಲಿ ತುರ್ತು ನಿರ್ವಹಣೆ ಕೈಗೊಳ್ಳುವ ಹಿನ್ನೆಲೆ ಸೆಪ್ಟೆಂಬರ್ 9 ಮತ್ತು 10ರ ಬೆಳಗ್ಗೆ 10ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಲವು ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಕಟ್?: ಹೊರಮಾವು, ಪಿ ಆಂಡ್ ಟಿ ಲೇಔಟ್, ನಿಸರ್ಗ ಕಾಲೊನಿ, ನಂದನಂ ಕಾಲೋನಿ, ಆಶೀರ್ವಾದ್ ಕಾಲೊನಿ, ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್‌ಗ್ರೋವ್, ದೇವ ಮತ ಶಾಲೆ, ಅಮರ್ ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೊನಿ, ಎಚ್‌ಆರ್‌ಬಿಆರ್ ಲೇಔಟ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, ಹೆಣ್ಣೂರು ಗ್ರಾಮ, ಚೆಳ್ಳಿಕೆರೆ, ಮೇಗನ ಪಾಳ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ತಿಳಿಸಿದೆ.
ಅಲ್ಲದೆ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರಪಾಳ್ಯ, ಜಾನಕೀರಾಮ್ ಲೇಔಟ್, ಬಿಡಿಎಸ್ ಗಾರ್ಡನ್, ಸತ್ಯ ಎನ್‌ಕ್ಲೇವ್, ಪ್ರಕೃತಿ ಲೇಔಟ್ ಹೊಯ್ಸಳ ನಗರ, ಬೃಂದಾವನ ಲೇಔಟ್, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥ ನಗರ ರಸ್ತೆ, ಯಾಸಿನ್‌ನಗರ, ಎನ್‌ಆರ್‌ಐ ಲೇಔಟ್, ಪುಣ್ಯಭೂಮಿ ಲೇಔಟ್, ಸಮದ್ ಲೇಔಟ್, ಕುಳ್ಳಪ್ಪ ಸರ್ಕಲ್, ರಾಜ್‌ಕುಮಾರ್ ಪಾರ್ಕ್, ಸಂಗೊಳ್ಳಿ ರಾಯಣ್ಣ ರಸ್ತೆ, ರಾಮಯ್ಯ ಲೇಔಟ್, ದೊಡ್ಡ ಬಾಣಸವಾಡಿ, ರಾಮಮೂರ್ತಿ ನಗರ ಮುಖ್ಯರಸ್ತೆ, ಕೃಷ್ಣರೆಡ್ಡಿ ಲೇಔಟ್.
ಗೋಪಾಲರೆಡ್ಡಿ ಲೇಔಟ್, ಚಿಕ್ಕ ಬಾಣಸವಾಡಿ, ಸುಬ್ಬಯ್ಯನಪಾಳ್ಯ, ಗ್ರೀನ್ ಪಾರ್ಕ್ ಲೇಔಟ್, ಫ್ಲವರ್ ಗಾರ್ಡನ್, ದಿವ್ಯ ಉನ್ನತಿ ಲೇಔಟ್, ಪ್ರಕೃತಿ ಟೌನ್‌ಶಿಪ್, ಬೈರತಿ, ಕ್ಯಾಲಸನಹಳ್ಳಿ ಗ್ರಾಮ, ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗಂ ಎನ್‌ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿ ಕ್ರಾಸ್, ಬಾಬೂಸಾ ಪಾಳ್ಯ, ಬ್ಯಾಂಕ್ ಅವೆನ್ಯೂ ಲೇಔಟ್.
ನಂಜಪ್ಪ ಗಾರ್ಡನ್, ಸಿಎನ್‌ಆರ್ ಲೇಔಟ್, ಆರ್.ಎಸ್.ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಹನುಮಂತಪ್ಪ ರಸ್ತೆ, ಕಲ್ಕೆರೆ, ಮುನೇಗೌಡರ ರಸ್ತೆ, ಸಮೃದ್ಧಿ ಲೇಔಟ್, ಜಯಂತಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಅಲ್ಲದೆ, ಮೊಬೈಲ್, ಲ್ಯಾಪ್‌ಟಾಪ್ ಸೇರಿದಂತೆ ಇನ್ನಿತರೆ ವಿದ್ಯುತ್ ಉಪಕರಣಗಳನ್ನು ಮುಂಚಿತವಾಗಿ ಚಾರ್ಜ್ ಮಾಡಿಟ್ಟುಕೊಳ್ಳಬೇಕು ಎಂದು ಸೂಚನೆ ನೀಡಿದೆ.












Click it and Unblock the Notifications