Bengaluru Power Cut: ಬೆಂಗಳೂರಿನ ಈ ಭಾಗಗಳಲ್ಲಿ ನವೆಂಬರ್ 23ರ ವರೆಗೆ ವಿದ್ಯುತ್ ವ್ಯತ್ಯಯ
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ನವೆಂಬರ್ 23ರ ವರೆಗೆ ಬೆಂಗಳೂರಿನ ಈ ಭಾಗಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಹಾಗೂ ಕಾರಣ ಏನು ಎಂದು ತಿಳಿಯಿರಿ.
ಕೆಪಿಟಿಸಿಎಲ್ ವತಿಯಿಂದ ತುರ್ತುನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆ ನವೆಂಬರ್ 23ರ ವರೆಗೆ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ತಿಳಿಯಿರಿ.

ಸೋಲದೇವನಹಳ್ಳಿ ಉಪಕೇಂದ್ರ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ ಜಾಲಹಳ್ಳಿ ವಿಭಾಗದ ಎನ್- 9 ಉಪ ವಿಭಾಗದ ಹಲವೆಡೆ ನವೆಂಬರ್ 23ರ ವರೆಗೆ ಬೆಳಗ್ಗೆ 10.30ರಿಂದ ರಾತ್ರಿ 8.30 ಗಂಟೆಯವರೆಗೆ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಕಟ್?: ತರಬನಹಳ್ಳಿ, ಹುರುಳಿಚಿಕ್ಕನಹಳ್ಳಿ, ಟಿಬಿ ಕ್ರಾಸ್, ಹೆಸರಘಟ್ಟ, ಬಿಳಿಜಾಜಿ, ದ್ವಾರಕನಗರ, ಚಿಕ್ಕಬಾಣಾವರ, ಮಾರುತಿ ನಗರ, ಗಣಪತಿ ನಗರ, ಶಾಂತಿನಗರ, ಬ್ರದರ್ಸ್ ಕಾಲೋನಿ, ಕೃಷ್ಣಾ ಕಾಲೇಜು ರಸ್ತೆ, ರಾಘವೇಂದ್ರ ಲೇಔಟ್, ಸಾಸುವೆಘಟ್ಟ, ಬಜ್ಜಪ್ಪ ಲೇಔಟ್, ಶಿವಕುಮಾರ ಸ್ವಾಮೀಜಿ ಲೇಔಟ್, ಗುಡ್ಡದಹಳ್ಳಿ, ದಾಸೇನಹಳ್ಳಿ, ತೋಟಗೆರೆ ಬಸವಣ್ಣ ದೇವಸ್ಥಾನ, ಹೊಸಹಳ್ಳಿ ಪಾಳ್ಯ, ಸಿಡಿಪಿಒ, ಡ್ಯಾನಿಶ್ ಫಾರ್ಮ್, ಕೆಎಂಎಫ್, ಪಶುಸಂಗೋಪನೆ, ಗುಣಿ ಅಗ್ರಹರ್, ಸೋಮಶೀತಿಹಳ್ಳಿ, ಗಾಣಿಗರಹಳ್ಳಿ, ಪೈಪ್‌ಲೈನ್ ರೋಡ್, ಕೆರೆಗುಡ್ಡಹಳ್ಳಿ.
ಹುರುಳಿಚಿಕ್ಕನಹಳ್ಳಿ, ಕೆ.ಟಿ.ಪುರ, ಐಐಎಚ್‌ಆರ್, ಐವರಕೊಂಡಪುರ, ಸೀತಕೆಂಪನಹಳ್ಳಿ, ಲಿಂಗನಹಳ್ಳಿ, ಮಾದಪ್ಪನಹಳ್ಳಿ, ಕಾಳೇನಹಳ್ಳಿ ಶಿವಕೋಟೆ ಗ್ರಾಮ, ಮಾವಳ್ಳಿಪುರ, ಕೊಂಡಶೆಟ್ಟಿಹಳ್ಳಿ, ಕುರುಬರಹಳ್ಳಿ, ಕುರುಬರಹಳ್ಳಿ ಪಾಕೇಗೌಡನಪಾಳ್ಯ, ರಾಘವೇಂದ್ರ ಧಾಮ, ಬೈಲಕೆರೆ, ಆಚಾರ್ಯ ಕಾಲೇಜು ಮುಖ್ಯರಸ್ತೆ, ಅಚ್ಯುತ್ ನಗರ, ಸೋಲದೇವನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.
ನಾಳೆ ಎಲ್ಲೆಲ್ಲಿ ಕರೆಂಟ್ ಕಟ್?: 66/11 ಕೆವಿ ರಾಜನಕುಂಟೆ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದ ಹಲವೆಡೆ ನವೆಂಬರ್ 21ರ ಶುಕ್ರವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.
ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ದೇವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್‌ಪುರ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಲು, ಸೊನ್ನೇನಹಳ್ಳಿ, ಸೆಂಚುರಿ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ. ಸಾವರ್ಜಜನಿಕರು ಸಹಹರಿಸಬೇಕು ಎಂದು ಮನವಿ ಮಾಡಿದೆ. ಇನ್ನೂ ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆಯೋ ಅಂತಹ ಪ್ರದೇಶಗಳ ನಿವಾಸಿಗಳು ಮುಂಜಾಗ್ರತಾ ಕ್ರಮವಾಗಿ ಮೊಬೈಲ್, ಲ್ಯಾಪ್‌ಟಾಪ್, ಬ್ಯಾಟರಿ ಸೇರಿದಂತೆ ಇನ್ನಿತರೆ ಚಾರ್ಜಿಂಗ್ ಸಾಧನಗಳನ್ನು ಮುಂಚಿತವಾಗಿ ಚಾರ್ಜ್ ಮಾಡಿಟ್ಟುಕೊಳ್ಳುವುದು ಅಂತಾ ಸಲಹೆಯನ್ನೂ ಕೂಡ ನೀಡಿದೆ.












Click it and Unblock the Notifications