Bengaluru Power Cut: ಬೆಂಗಳೂರಿನ ಈ ಭಾಗಗಳಲ್ಲಿ ಅಕ್ಟೋಬರ್ 31ರವರೆಗೂ ಕರೆಂಟ್ ಕಟ್
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಅಕ್ಟೋಬರ್ 31ರ ವರೆಗೂ ಬೆಂಗಳೂರಿನ ಈ ಭಾಗಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಹಾಗೂ ಕಾರಣ ಏನು ಎಂದು ತಿಳಿಯಿರಿ.
ಕೆಪಿಟಿಸಿಎಲ್ ವತಿಯಿಂದ ತುರ್ತುನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆ ಅಕ್ಟೋಬರ್ 31ರ ವರೆಗೂ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ತಿಳಿಯಿರಿ.

ಉಪವಿಭಾಗ 1ರಲ್ಲಿ ಫೀಡರ್ ನಿರ್ವಹಣಾ ಕಾರ್ಯವನ್ನು ಕೈಗೊಳ್ಳಲಾಗುತ್ತಿದ್ದು, ಅಕ್ಟೋಬರ್ 31ರ ವರೆಗೆ ಹಲವಾರು ಸ್ಥಳಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಈ ಅವಧಿಯಲ್ಲಿ ಸಾರ್ವಜನಿಕರು ಸಹಕರಿಸುವಂತೆ ವಿದ್ಯುತ್ ಸರಬರಾಜು ಕಂಪನಿಯು ಮನವಿ ಮಾಡಿದೆ.
ಎಲ್ಲೆಲ್ಲಿ ಕರೆಂಟ್ ಕಟ್?: ಅಕ್ಟೋಬರ್ 15, 17, 19, 21, 23, 25, 27, 29 ಮತ್ತು 31ರಂದು ಹನುಮಂತಪುರ, ಅನ್ನೆತೋಟ, ಜಗನ್ನಾಥಪುರ, ನಿರ್ವಾಣಿ ಲೇಔಟ್, ಅಗ್ನಿಬನ್ನಿರಾಯ ನಗರ, ಬಿಎ ಗುಡಿಪಾಳ್ಯ, ಮತ್ತು ಅಂಬೇಡ್ಕರ್ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದ ಎಂದು ಬೆಸ್ಕಾ ತಿಳಿಸಿದೆ.
ಅಕ್ಟೋಬರ್ 16, 18, 24, 26, 28 ಮತ್ತು 30ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿಗೇಟ್, ಕುಂಟಮ್ಮಂತೋಟ, ದಿಬ್ಬೂರು, ಬಿಎಚ್ ಪಾಳ್ಯ, ಪಿಎನ್‌ಆರ್ ಪಾಳ್ಯ, ಕುಪ್ಪೂರು, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿ ರಸ್ತೆ, ಪಿಎನ್‌ಆರ್ ಪಾಳ್ಯ, ಕುಪ್ಪೂರು ಮತ್ತು ಹೊಸಹಳ್ಳಿ ಭಾಗಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ತಿಳಿಸಿದೆ.
ಈಗಾಗಲೇ ನಗರದಲ್ಲು ಕೆಲವು ಭಾಗಗಳಲ್ಲಿ ಕಳೆದ ಎರಡು ತಿಂಗಳಿನಿಂದ ವಿದ್ಯುತ್ ಕಡಿತದ ಸಮಸ್ಯೆ ಎದುರಿಸುತ್ತಿವೆ. ಅದರಲ್ಲೂ ವಾರಾಂತ್ಯಗಳಲ್ಲೇ ಹೆಚ್ಚಾಗಿ ಈ ಸಮಸ್ಯೆಯಾಗುತ್ತಿದೆ ಎನ್ನುವ ಆರೋಪಗಳು ಕೇಳಿಬಂದಿವೆ. ಆದರೂ ಏನು ಮಾಡುವುದಕ್ಕೆ ಆಗುವುದಿಲ್ಲ ತುರ್ತು ನಿರ್ವಹಣಾ ಕಾರ್ಯಗಳನ್ನುನ ಕೈಗೊಳ್ಳುವ ವೇಳೆ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ವ್ಯತ್ಯಯ ಮಾಡಲೇಬೇಕಾಗುತ್ತದೆ. ಯಾಕಂದ್ರೆ, ವಿದ್ಯುತ್ ಸರಬರಾಜಿನಲ್ಲಿ ಯಾವುದೇ ತೊಂದರೆ ಆಗಬಾರದೆಂದು.
ಇನ್ನೂ ಯಾವೆಲ್ಲಾ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುತ್ತದೆಯೋ ಅಂತಹ ಪ್ರದೇಶಗಳ ನಿವಾಸಿಗಳು ಮುಂಜಾಗ್ರತಾ ಕ್ರಮವಾಗಿ ಮೊಬೈಲ್, ಬ್ಯಾಟರಿ, ಲ್ಯಾಪ್‌ಟ್ಯಾಪ್ ಸೇರಿದಂತೆ ಇನ್ನಿತರ ಚಾರ್ಜಿಂಗ್ ಸಾಧನಗಳನ್ನು ಮುಂಚಿತವಾಗಿ ಚಾರ್ಜ್ ಮಾಡಿಟ್ಟುಕೊಳ್ಳುವುದು ಉತ್ತಮ ಎಂದು ಸಲಹೆ ನೀಡುತ್ತಲೇ ಬಂದಿದೆ. ಈ ಸಲಹೆಯನ್ನು ವಿದ್ಯುತ್ ಪೂರೈಕೆ ವ್ಯತ್ಯಯದ ಒಂದು ದಿನದ ಮುಂಚೆಯೇ ನೀಡುತ್ತಿದೆ.
ಅಕ್ಟೋಬರ್ 14ರಂದು ಎಲ್ಲೆಲ್ಲಿ ಪವರ್ ಕಟ್?: ಇನ್ನು ನಾಗರಘಟ್ಟ ಮತ್ತು ನರಸಿಕಟ್ಟೆ ಉಪಕೇಂದ್ರಗಳಲ್ಲಿ ಲಿಂಕ್ ಲೈನ್ ಕೆಲಸ ನಡೆಯುತ್ತಿರುವ ಹಿನ್ನೆಲೆ ನಗರದ ಹಲವು ಪ್ರದೇಶದಲ್ಲಿ 8 ಗಂಟೆಗಳ ಕಾಲ ವಿದ್ಯುತ್ ಕಡಿತಗೊಳ್ಳಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ನಾಗರಘಟ್ಟ ಮತ್ತು ನರಸಿಕಟ್ಟೆ ಉಪಕೇಂದ್ರಗಳಲ್ಲಿ ತುರ್ತುನಿರ್ವಹಣಾ ಕಾರ್ಯ ನಡೆಯಲಿದೆ. ಈ ಹಿನ್ನೆಲೆ ಅಕ್ಟೋಬರ್ 14ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ತಿಪಟೂರು ತಾಲೂಕಿನ ಕೆರೆಗೋಡಿ ಉಪಸ್ಥಾವರದ ನಾಗರಘಟ್ಟ ಮತ್ತು ನರಸಿಕಟ್ಟೆ ಪ್ರದೇಶಗಳಲ್ಲಿ ಲಿಂಕ್ ಲೈನ್ ಕಾಮಗಾರಿಯನ್ನು ಬೆಸ್ಕಾಂ ಕೈಗೊಂಡಿದೆ. ಆದ್ದರಿಂದ ಈ ಪ್ರದೇಶದಲ್ಲಿ ಕರೆಂಟ್ ಇರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ. ಅಲ್ಲದೇ ಹೆಡಗರಹಳ್ಳಿ, ಬೆಳಗರಹಳ್ಳಿ, ಕನ್ನುಘಟ್ಟ, ನಾಗರಘಟ್ಟ, ಎನ್.ಮೇಲನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಮನವಿ ಮಾಡಿದೆ.












Click it and Unblock the Notifications