Bengluru Power Cut: ಭಾನುವಾರ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ-ಮಾಹಿತಿ ಇಲ್ಲಿದೆ

Bengluru Power Cut: ಕಂಬ, ಲೈನ್‌ ಅಳವಡಿಕೆ ಸೇರಿದಂತೆ ಇನ್ನಿತರೆ ವಿದ್ಯುತ್‌ಗೆ ಸಂಬಂಸಿಂತೆ ಕಾಮಗಾರಿ ನಡೆವಂತಹ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್‌ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ರಾಜ್ಯ ರಾಜಧಾನಿ ಬೆಂಗಳೂರಿನ ಈ ಪ್ರದೇಶಗಳಲ್ಲಿ ಸೆಪ್ಟೆಂಬರ್‌ 29ರಂದು ವಿದ್ಯುತ್‌ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಕರೆಂಟ್‌ ಇರಲ್ಲ ಎಂದು ಇಲ್ಲಿ ತಿಳಿಯಿರಿ.

66/11ಕೆ.ವಿ ಕಂಠೀರವ ಸ್ಟೇಷನ್‌ನಲ್ಲಿ ತುರ್ತುನಿರ್ವಹಣಾ ಕಾರ್ಯಗಳನ್ನು ನಿರ್ವಹಿಸುವ ಹಿನ್ನೆಲೆ ಸೆಪ್ಟೆಂಬರ್ 29ರಂದು ಅಂದರೆ ಭಾನುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಇಲ್ಲಿದೆ ನೀಡಲಾದ ಸ್ಥಳಗಳಲ್ಲಿ ವಿದ್ಯುತ್‌ ವ್ಯತ್ಯಯ ಆಗಲಿದೆ.

Power Cut in many parts of Bengaluru on September 29 2024 know details

ಕಬ್ಬನ್‌ಪೇಟೆ 5ನೇ ಕ್ರಾಸ್, 6ನೇ ಕ್ರಾಸ್, 3ನೇ ಕ್ರಾಸ್, 4ನೇ ಕ್ರಾಸ್, ಚೌಲಗಲ್ಲಿ, ಎ.ಬಿ.ಸಿ.ಡಿ. ಗಲ್ಲಿ, ಆರ್.ಬಿ.ಐ., ನೃಪತುಂಗ ರಸ್ತೆ, ಯು.ವಿ.ಸಿ.ಇ. ಅಗ್ರಿಕಲ್ಚರ್ ಆಫೀಸ್, ಸರ್ಕಾರಿ ಕಲಾ ಕಾಲೇಜು, ಮಾರ್ಥಾಸ್ ಹಾಸ್ಪಿಟಲ್, ಸುಂಕಲ್‌ಪೇಟೆ, ನಗರತ್ ಪೇಟೆ ಮುಖ್ಯರಸ್ತೆ, ಕೆ.ಎ.ಎಸ್. ಲೇನ್, 'ಸಿ' ಲೇನ್, 'ಎ'ಲೇನ್, 'ಡಿ' ಲೇನ್, ಪಿ.ಆರ್.ಎಸ್.ಲೇನ್, 13ನೇ ಕ್ರಾಸ್, 14ನೇ, 15ನೇ ಕ್ರಾಸ್ ಕಬ್ಬನ್‌ಪೇಟೆ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಆಗಲಿದೆ.

ಕೆ.ಜಿ.ರಸ್ತೆ ಭಾಗ, ಓಟಿಸಿ ರಸ್ತೆ, ಶಾರದಾ ಥಿಯೇಟರ್ ಹಿಂಭಾಗ, ಎಸ್.ಪಿ ರಸ್ತೆ, ಎಸ್.ಜೆ.ಪಿ ರಸ್ತೆ, ಧರ್ಮರಾಯಸ್ವಾಮಿ ದೇವಸ್ಥಾನದ ರಸ್ತೆ, ಆದರ್ಶ ಶಾಂಗ್ರಿಲ್ಲ ಮತ್ತು ಯು.ಬಿ ಸಿಟಿ ಮತ್ತು ವಿಟ್ಟಲ್ ಮಲ್ಯ ರೋಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಲ್ಲಿ ವಿದ್ಯುತ್‌ ವ್ಯತ್ಯಯ ಆಗಲಿದೆ.

ಮಧ್ಯಾಹ್ನ 3:30ರ ವರೆಗೆ ವಿದ್ಯುತ್‌ ವ್ಯತ್ಯಯ: 220/66/11ಕೆವಿ ಎಸ್‌ಆರ್‌ಎಸ್ ಪೀಣ್ಯ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ಪೀಣ್ಯ ವಿಭಾಗದ ಎನ್4, ಎನ್5. ಎನ್7 ಉಪ ವಿಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಳಗ್ಗೆ 9:30 ರಿಂದ ಮಧ್ಯಾಹ್ನ 3:30ರ ವರೆಗೆವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ. ಪೀಣ್ಯ 10ನೇ ಮುಖ್ಯರಸ್ತೆ, 11ನೇ ಮುಖ್ಯರಸ್ತೆ, ಉಡುಪಿ ಹೋಟೆಲ್ ಸುತ್ತಮುತ್ತ, ಐಆರ್ ಪಾಲಿಟೆಕ್ನಿಕ್ ರಸ್ತೆ, ಲಕ್ಷ್ಮೀದೇವಿ ನಗರ.

ಲಗ್ಗೆರೆ ಹಳೆ ಗ್ರಾಮ, ಲವ ಕುಶಾ ನಗರ, ರಾಗೀವ್ ಗಾಂಧಿ ನಗರ, ಚೌಡೇಶ್ವರಿ ನಗರ 6ನೇ, 7ನೇ, 8ನೇ, 9ನೇ ಕ್ರಾಸ್, 1ನೇ ಹಂತ ಪಿಐಎ 7ನೇ ಕ್ರಾಸ್, 1ನೇ ಹಂತ ಪಿಯುಎ, ಟಿವಿಎಸ್ ಕ್ರಾಸ್ ರಸ್ತೆ ಬಳಿ, ಇಸ್ರೋ 1ನೇ, 2ನೇ ಕ್ರಾಸ್, 1ನೇ ಹಂತದ ಪಿಐಎ ಏರಿಯಾ ಮತ್ತು ಯಶವಂತಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ.

ಮಲ್ಲೇಶ್ವರ, ಎಂಡಿ ಬ್ಲಾಕ್, ವೈಯಾಲಿಕಾವಲ್, ಈಜುಕೊಳ ವಿಸ್ತರಣೆ, ಕೋದಂಡರಾಮಪುರ, ರಂಗನಾಥಪುರ, ಬಿಎಚ್‌ಇಎಲ್, ಐಐಎಸ್‌ಸಿ ಬ್ರೈನ್ ಸೆಂಟರ್, ಅಂಬೇಡ್ಕರ್ ನಗರ, ಯಶವಂತಪುರ ಪೈಪ್‌ಲೈನ್ ರಸ್ತೆ, ಎಲ್‌ಎನ್ ಕಾಲೋನಿ, ಸುಬೇದ್ರಪಾಳ್ಯ, ದಿವಾನರ ಪಾಳ್ಯ, ಕೆಎನ್ ವಿಸ್ತರಣೆ, ಯಶವಂತಪುರ 1ನೇ ಮುಖ್ಯರಸ್ತೆಯಲ್ಲಿ ಕರೆಂಟ್‌ ಇರುವುದಿಲ್ಲ. ಸಾರ್ವಜನಿಕರು ಹೆಚ್ಚಿನ ಮಾಹಿತಿಗಾಗಿ ಬೆ.ವಿ.ಕಂ. ಸಹಾಯವಾಣಿ ಸಂಖ್ಯೆ 1912ಕ್ಕೆ ಸಂಪರ್ಕಸಬಹುದಾಗಿದೆ ಎಂದು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+