Bengaluru Power Cut: ಮಂಗಳವಾರ ಬೆಂಗಳೂರಿನ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ
Bengaluru Power Cut: ಲೈನ್ ಅಳವಡಿಕೆ, ಟಿಎಲ್ ಸೇರಿದಂತೆ ವಿದ್ಯತ್‌ಗೆ ಸಂಬಂಧಿಸಿದಂತೆ ಇನ್ನಿತರೆ ಕಾಮಗಾರಿ ನಡೆಯುವ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಮಂಗಳವಾರ (ಸೆಪ್ಟೆಂಬರ್ 17) ಬೆಂಗಳೂರಿನ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಎಂದು ಇಲ್ಲಿ ತಿಳಿಯಿರಿ.
ಮಂಗಳವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ 220/66/11 ಕೆ.ವಿ ಹೆಬ್ಬಾಳ ಸ್ವೀಕರಣಾ ಕೇಂದ್ರದಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ಕೈಗೊಳ್ಳಲಾಗುತ್ತಿದೆ. ಈ ವೇಳೆ ಸ್ವೀಕರಣಾ ಕೇಂದ್ರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

ವಿದ್ಯುತ್ ವ್ಯತ್ಯಯ ಎಲ್ಲೆಲ್ಲಿ.?: ಮಂಗಳವಾರ ಜಯಮಹಲ್ ವಿಸ್ತರಣೆ, ನಂದಿ ದುರ್ಗಾ, ದೂರದರ್ಶನ, ಜಯಮಹಲ್ ರಸ್ತೆ, ಮುನಿರೆಡ್ಡಿ ಪಾಳ್ಯ, ಜೆ.ಸಿ.ನಗರ, ಮಾರಪ್ಪ ಗಾರ್ಡನ್, ಚಿನಪ್ಪ ಗಾರ್ಡನ್, ಎನ್.ಡಿ.ರಸ್ತೆ ಏರ್‌ಟೆಲ್ ಸಮೀಪದ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.
ಕವಿಪ್ರನಿನಿ ಬೃಹತ್ ಕಾಮಗಾರಿ ವಿಭಾಗದವರು ಸೆಪ್ಟೆಂಬರ್ 18ರಿಂದ ಅಕ್ಟೋಬರ್ 1ರವರೆಗೆ ಚಿಂತಾಮಣಿ-ತಳಗವಾರ ಮಾರ್ಗದಲ್ಲಿ ಹಲವು ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ. ಆದ್ದರಿಂದ 66 /11 ಕೆವಿ 66/ 11 ಕೆವಿ ಚೀಮಂಗಲ, ವೇಮಗಲ್, ಕ್ಯಾಲನೂರು, ತಲಗುಂದ ಮತ್ತು ತಳಗವಾರ ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲಾಕೃಷಿ ವಿದ್ಯುತ್ ಮಾರ್ಗಗಳ 3 ಫೇಸ್ ವಿದ್ಯುತ್ ಅನ್ನು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯೊಳಗೆ ಪೂರೈಸಲಾಗುವುದು. ಗ್ರಾಹಕರು ಹೆಚ್ಚಿನ ಮಾಹಿತಿಗಾಗಿ 1912ಕ್ಕೆ ಸಂಪರ್ಕಿಸಬಹುದು ಎಂದು ಬೆಸ್ಕಾಂ ತಿಳಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 2 ಬೆಸ್ಕಾಂ ವಿಭಾಗದ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು, ಮುಂಗಾರು ಅವಧಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ವಿದ್ಯುತ್ ಕಂಬಗಳು, ಟ್ರಾನ್ಸ್‌ಫಾರ್ಮರ್‌ಗಳು ಹಾನಿಗೊಳಗಾಗಿವೆ. ಏಪ್ರಿಲ್ 1ರಿಂದ ಮೇ 31 ಪೂರ್ವ ಮುಂಗಾರಿನ ಅವಧಿಯಲ್ಲಿ ಜಿಲ್ಲೆಯ 2 ವಿಭಾಗಗಳಲ್ಲಿ ಒಟ್ಟು 326 ವಿದ್ಯುತ್ ಕಂಬಗಳು ಹಾನಿಗೊಳಗಾಗಿವೆ.
ಜೊತೆಗೆ 82 ಟ್ರಾನ್ಸ್‌ಫಾರ್ಮ್‌ಗಳಿಗೂ ಹಾನಿಯಾಗಿದೆ. ನಂತರ ಜೂನ್ 1ರಿಂದ ಆಗಸ್ಟ್ ಅಂತ್ಯದವರೆಗಿನ ಮುಂಗಾರು ಅವಧಿಯಲ್ಲಿ 121 ವಿದ್ಯುತ್ ಕಂಬಗಳು ಹಾನಿಯಾಗುವ ಮೂಲಕ ಒಟ್ಟು 447 ಕಂಬಗಳು ಹಾನಿಗೊಂಡಿವೆ. ಮುಂಗಾರು ಅವಧಿಯಲ್ಲಿಯೇ ಒಟ್ಟು 45 ಟ್ರಾನ್ಸ್‌ಫಾರ್ಮರ್‌ಗಳು ಕೂಡ ಹಾನಿಗೊಳಗಾಗಿವೆ ಎಂದು ಬೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.












Click it and Unblock the Notifications