ಏ.19 ರಿಂದ 24ರವರೆಗೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಬೆಂಗಳೂರು, ಏಪ್ರಿಲ್ 17: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಏಪ್ರಿಲ್ 19ರಿಂದ ಏಪ್ರಿಲ್ 24ರವರೆಗೆ ವಿದ್ಯುತ್ ವ್ಯತ್ಯಯವಾಗಲಿರುವುದಾಗಿ ತಿಳಿದುಬಂದಿದೆ. ಮುಂದಿನ ವಾರ ಖೋಡೇಸ್, ಸಾರಕ್ಕಿ, ಎಲಿಟಾ, ಆರ್ಬಿಐ ಸಬ್ ಸ್ಟೇಷನ್ ಅಡಿಯಲ್ಲಿ ಬರುವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿರುವುದಾಗಿ ಬೆಸ್ಕಾಂ ಮಾಹಿತಿ ನೀಡಿದೆ.
ಕೋಣನಕುಂಟೆ, ಪುಟ್ಟೇನಹಳ್ಳಿ, ಜೆಪಿ ನಗರ ವ್ಯಾಪ್ತಿಯಲ್ಲಿ ಕೇಬಲ್ ಹಾಗೂ ಮೂಲಸೌಲಭ್ಯ ಕಾಮಗಾರಿಗಳು ನಡೆಯುವ ಕಾರಣ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೂ ಮುಂದಿನ ವಾರವಿಡೀ ವಿದ್ಯುತ್ ವ್ಯತ್ಯಯವಾಗುವುದಾಗಿ ತಿಳಿಸಿದೆ.
ಆರ್ಬಿಐ ಲೇಔಟ್, ಶ್ರೀನಿಧಿ ಲೇಔಟ್, ಜೆಪಿ ನಗರ ಆರನೇ ಹಂತ, ಸಾರಕ್ಕಿ ತೋಟ, ರೋಸ್ ಗಾರ್ಡನ್ ಸಿಂಧೂರ್ ಕಲ್ಯಾಣ ಮಂಟಪದ ಸಮೀಪ ಹಾಗೂ ಸಿದ್ದೇಶ್ವರ ಥಿಯೇಟರ್ ಸುತ್ತಮುತ್ತ ಏಪ್ರಿಲ್ 19ರಿಂದ ಏಪ್ರಿಲ್ 22ರವರೆಗೂ ವಿದ್ಯುತ್ ವ್ಯತ್ಯಯವಾಗಲಿದೆ.

ಸಾರಕ್ಕಿ ಕೆರೆ, ಆಂಥೋನಿ ಕೈಗಾರಿಕಾ ಪ್ರದೇಶ, ಸಿಎಸ್ ಶಾಲೆ ರಸ್ತೆ, ರಾಜೀವ್ ಗಾಂಧಿ ರಸ್ತೆ, ಚುಂಚಘಟ್ಟ ಮುಖ್ಯ ರಸ್ತೆ ಹಾಗೂ ಗಣಪತಿಪುರದಲ್ಲಿ ಏಪ್ರಿಲ್ 20ರವರೆಗೂ ವಿದ್ಯುತ್ ವ್ಯತ್ಯಯವಾಗಲಿದೆ. ತಿಪ್ಪಸಂದ್ರ, ಆರ್ಬಿಎಲ್ ಲೇಔಟ್, ಬಿಸಿಎಂಸಿ ಲೇಔಟ್, ಚನ್ನಮ್ಮ ಗಾರ್ಡನ್ ಪ್ರದೇಶಗಳಲ್ಲಿ ಏಪ್ರಿಲ್ 21 ಹಾಗೂ ಏಪ್ರಿಲ್ 23ರಂದು ವಿದ್ಯುತ್ ವ್ಯತ್ಯಯವಾಗಲಿದೆ.
ಕೇಬಲ್ ಕಾಮಗಾರಿ ಕಾರಣ ಏಪ್ರಿಲ್ 20ರಂದು ಬೆಳಿಗ್ಗೆ 10 ರಿಂದ ಸಂಜೆ 6.30ರವರೆಗೆ ಜೆಪಿ ನಗರ ಐದನೇ ಹಂತ, ವಿನಾಯಕ ನಗರ, ನಂಜುಂಡೇಶ್ವರ ಲೇಔಟ್ನಲ್ಲಿ ಹಾಗೂ ಏಪ್ರಿಲ್ 22ರಂದು ಪಾಂಡುರಂಗ ನಗರದ ಸುತ್ತಮುತ್ತ ಹಾಗೂ ಬಿಜೆ ರಸ್ತೆಯಲ್ಲಿ, ಏಪ್ರಿಲ್ 23 ಹಾಗೂ ಏಪ್ರಿಲ್ 24ರಂದು ಜೆಪಿ ನಗರ 5ನೇ ಹಂತ, ವಿನಾಯಕ ನಗರ, ನಂಜುಂಡೇಶ್ವರ ಲೇಔಟ್ ಹಾಗೂ ಎಸ್ಟೀಮ್ ಪಾರ್ಕ್ ರೋಡ್ನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
-
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್












Click it and Unblock the Notifications