Power Cut: ಕೋರಮಂಗಲ ಸೇರಿದಂತೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ​

ಬೆಂಗಳೂರು, ಆಗಸ್ಟ್​​ 30: ಬೆಂಗಳೂರಿನಲ್ಲಿ ಇತ್ತೀಚಿಗೆ ವಿದ್ಯುತ್‌ ವ್ಯತ್ಯಯ ಹೆಚ್ಚಾಗುತ್ತಿದ್ದು, ಇಂದು ಕೂಡ ಕೆಲವು ಪ್ರದೇಶದಲ್ಲಿ ವಿದ್ಯುತ್ ಸಮಸ್ಯೆ ಎದುರಾಗಲಿದೆ. ಕರ್ನಾಟಕ ವಿದ್ಯುತ್​ ಸರಬರಾಜು ನಿಗಮ ನಿಯಮಿತ ಲೈನ್‌ ತುರ್ತು ದುರಸ್ತಿ ಹಾಗೂ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಇಂದು( ಆಗಸ್ಟ್‌ 30) ಶುಕ್ರವಾರ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯವಾಗಲಿದೆ. ಈ ಬಗ್ಗೆ ನಮ್ಮ ಬೆಸ್ಕಾಂ ಪ್ರದೇಶ ಹಾಗೂ ಸಮಯದ ವಿವರದೊಂದಿದೆ ಮಾಹಿತಿ ಹಂಚಿಕೊಂಡಿದೆ.

ಕರ್ನಾಟಕ ವಿದ್ಯುತ್​ ಸರಬರಾಜು ನಿಗಮ ನಿಯಮಿತ ತುರ್ತು ದುರಸ್ತಿ ಕಾರ್ಯ ಕೈಗೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಲವು ಪ್ರದೇಶದಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ಅಂದರೆ ಕನಿಷ್ಠ ಏಳು ಗಂಟೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತ ಪ್ರಕಟಣೆ ಮೂಲಕ ತಿಳಿಸಿದೆ.

Power Outage Today In These Areas Of Bengaluru And Ramanagara

ಕ.ವಿ.ಪ್ರ.ನಿ.ನಿ ಲೈನ್‌ ದುರಸ್ತಿ/ ನಿರ್ವಹಣಾ ಕಾಮಗಾರಿ ಸಲುವಾಗಿ ಆಗಸ್ಟ್‌ 30 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ ಉಂಟಾಗಲಿದೆ. ವಿದ್ಯುತ್ ಅಡಚಣೆಗಾಗಿ ವಿಷಾದಿಸುತ್ತೇವೆ. ಹೆಚ್ಚಿನ ಮಾಹಿತಿ ಅಥವಾ ದೂರುಗಳಿಗೆ ಬೆಸ್ಕಾಂ ಸಹಾಯವಾಣಿ 1912 ಅಥವಾ http://bescom.karnataka.gov.in ಸಂಪರ್ಕಿಸಿ ಎಂದು ತಿಳಿಸಿರುವ ಬೆಸ್ಕಾಂ ಈ ಕೆಳಗಿನ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯ ಎಂದು ತಿಳಿಸಿದೆ.

ನಗರದ ಹೆಚ್‌ಎಸ್‌ಆರ್‌ ಲೇಔಟ್ ಮತ್ತು ಕೋರಮಂಗಲ ವಿಭಾಗದ ಬೆಳ್ಳಂದೂರು, ರಾಝ್, ದೇವರಬೀಸನಹಳ್ಳಿ, ಕರಿಯಮ್ಮನಪಾಳ್ಯ, ಅಕ್ಮೆ ಪ್ರಾಜೆಕ್ಟ್ಸ್, ಅನುಪಮಾ, ಟೋಟಲ್ ಮಾಲ್, ಶೋಭಾ ಐರಿಸ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್​ ವ್ಯತ್ಯಯವಾಗಲಿದೆ. ಕೋರಮಂಗಲದ ಗುಂಜೂರು ಪಾಳ್ಯದಲ್ಲಿ ಮಾತ್ರ ಬೆಳಗ್ಗೆ 11 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಇನ್ನು ರಾಮನಗರ ವೃತ್ತಿ ವಿಭಾಗದ ಭೂಹಳ್ಳಿ, ದ್ಯಾವಪಟ್ಟಣ, ಸಿಂಗರಾಜಿಪುರ, ಬ್ಯಾಡರ ಹಳ್ಳಿ, ಹುಲುವಾಡಿಯಲ್ಲಿ ಬೆಳಗ್ಗೆ 10 ಗಂಟೆಯಿಂದ 12:30ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಅಲ್ಲದೇ ದಾವಣಗೆರೆ ಜಿಲ್ಲೆಯ ಕೆಲವು ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್​ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತ ಪ್ರಕಟಣೆಯಲ್ಲಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+