ಜೆಡಿಎಸ್ ವರಿಷ್ಠ ದೇವೇಗೌಡರಿಗೆ ಕರೆ ಮಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್
ಬೆಂಗಳೂರು, ಮೇ 18: ಅಧಿಕಾರ ಗದ್ದುಗೆ ಏರುವ ಸರ್ಕಸ್ ಕರ್ನಾಟಕದಲ್ಲಿ ಮುಂದುವರೆದಿದೆ. ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಬಹುಮತ ಸಾಬೀತುಪಡಿಸುವ ನಿಟ್ಟಿನಲ್ಲಿ ಕಸರತ್ತು ನಡೆದಿದೆ.
ಈ ನಡುವೆ ಕಾಂಗ್ರೆಸ್ ಹಾಗೂ ಜೆಡಿಎಸ್ ತನ್ನ ಶಾಸಕರನ್ನು ಹಿಡಿದಿಟ್ಟುಕೊಂಡಿದೆ. ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹಾಗೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಾತುಕತೆ ನಡೆಸಿದ್ದಾರೆ.
ಎಚ್ ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಹಾರೈಕೆ ಮಾಡಿದ ರಾಹುಲ್ ಗಾಂಧಿ ಅವರು, ಕರ್ನಾಟಕದ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಇಬ್ಬರು ಚರ್ಚೆ ನಡೆಸಿದ್ದಾರೆ.

ಸುಪ್ರೀಂಕೋರ್ಟ್ ನಲ್ಲಿ ಬಂದಿರುವ ಆದೇಶ, ಕಾಂಗ್ರೆಸ್ -ಜೆಡಿಎಸ್ ಶಾಸಕರ ಭದ್ರತೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಕೇಂದ್ರದ ಬಿಜೆಪಿ ಸರ್ಕಾರ ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು, ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಖರೀದಿಸಲು ಮುಂದಾಗಿದೆ. ಶಾಸಕರ ಭದ್ರತೆ ಮುಖ್ಯವಾಗಿದೆ. ಈ ಬಗ್ಗೆ ಯಾವ ರೀತಿ ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ರಾಹುಲ್ ತಿಳಿದುಕೊಂಡಿದ್ದು, ಈ ಬಗ್ಗೆ ಗುಲಾಂ ನಬಿ ಆಜಾದ್, ಸಿದ್ದರಾಮಯ್ಯ ಅವರಿಗೆ ಸೂಚನೆಗಳನ್ನು ಕಾಂಗ್ರೆಸ್ ಹೈಕಮಾಂಡ್ ನೀಡಿದೆ.
ಶಾಸಕರನ್ನು ಕಾಯುತ್ತಿರುವ ಡಿಕೆ ಶಿವಕುಮಾರ್ ಬ್ರದರ್ಸ್ ನಾಳೆ ದಿನ ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂಬುದು ಈಗಾಗಲೇ ನಿರ್ಧಾರವಾಗಿದೆ.












Click it and Unblock the Notifications