ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'330 ರೂಪಾಯಿ ಪಿಪಿಇ ಕಿಟ್ ಖರೀದಿಸಲು 2117 ರೂಪಾಯಿ ಖರ್ಚು'

|
Google Oneindia Kannada News

ಬೆಂಗಳೂರು, ಜುಲೈ.23: ಕೊರೊನಾವೈರಸ್ ವಿರುದ್ಧ ಹೋರಾಡುತ್ತಿರುವ ಕೊರೊನಾ ವಾರಿಯರ್ಸ್ ಗಾಗಿ ಖರೀದಿಸಿದ ಪಿಪಿಇ ಕಿಟ್ ಗಳಲ್ಲೂ ನೂರಾರು ಕೋಟಿ ರೂಪಾಯಿ ಅವ್ಯವಹಾರ ನಡೆಸಿದ್ದಾರೆ ಎಂದು ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಲೆಕ್ಕ ಕೊಡಿ ಅಭಿಯಾನ ಆರಂಭಿಸಿದ್ದು, ಗುರುವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.

'4 ಲಕ್ಷದ ವೆಂಟಿಲೇಟರ್ ಖರೀದಿಗೆ 18 ಲಕ್ಷ ನೀಡಿದ ರಾಜ್ಯ ಸರ್ಕಾರ''4 ಲಕ್ಷದ ವೆಂಟಿಲೇಟರ್ ಖರೀದಿಗೆ 18 ಲಕ್ಷ ನೀಡಿದ ರಾಜ್ಯ ಸರ್ಕಾರ'

ರಾಜ್ಯ ಸರ್ಕಾರದಿಂದ ಪಿಪಿಇ ಕಿಟ್ ಖರೀದಿಯಲ್ಲೂ ಭಾರಿ ಅವ್ಯವಹಾರ ನಡೆದಿದೆ. ಆರೋಗ್ಯ ಇಲಾಖೆ ಪ್ರಕಾರ ಇದುವರೆಗೂ 9.65 ಲಕ್ಷ ಪಿಪಿಇ ಕಿಟ್ ಗಳನ್ನು ಖರೀದಿಸಲಾಗಿದೆ. ಮಹಾರಾಷ್ಟ್ರದ ಪ್ಲಾಸ್ಟ್ ಸರ್ಜಿ ಕಂಪನಿಯಿಂದ 3.50 ಲಕ್ಷ ಪಿಪಿಇ ಕಿಟ್ ಗಳನ್ನು ಖರೀದಿಸಿದ್ದಾರೆ. ಮಾರುಕಟ್ಟೆಯಲ್ಲಿ ಒಂದು ಪಿಪಿಇ ಕಿಟ್ ಬೆಲೆ 330 ರೂಪಾಯಿದ್ದು, ರಾಜ್ಯ ಸರ್ಕಾರವು ಒಂದೊಂದು ಪಿಪಿಇ ಕಿಟ್ ಗೆ 2117 ರೂಪಾಯಿ ನೀಡಿದ್ದಾರೆ.

ಕೋವಿಡ್ ಭ್ರಷ್ಟಾಚಾರ: ನ್ಯಾಯಾಂಗ ತನಿಖೆಗೆ ಸಿದ್ದರಾಮಯ್ಯ ಒತ್ತಾಯಕೋವಿಡ್ ಭ್ರಷ್ಟಾಚಾರ: ನ್ಯಾಯಾಂಗ ತನಿಖೆಗೆ ಸಿದ್ದರಾಮಯ್ಯ ಒತ್ತಾಯ

PPE Kit Scam: Siddaramaiah Demanded A Probe Into Alleged Irregularities In The PPE Kits

ಮೇಕ್ ಇನ್ ಇಂಡಿಯಾ ಮಾತು, ಮೇಡ್ ಇನ್ ಚೀನಾ ಕಿಟ್:

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೇಕ್ ಇನ್ ಇಂಡಿಯಾ ಬಗ್ಗೆ ಉದ್ದುದ್ದ ಭಾಷಣ ಮಾಡುತ್ತಾರೆ. ಅವರೇ ಪಕ್ಷದ ಮುಖ್ಯಮಂತ್ರಿಯ ಅದೇ ಚೀನಾದಿಂದ ಪಿಪಿಇ ಕಿಟ್ ಗಳನ್ನು ಆಮದು ಮಾಡಿಕೊಳ್ಳುವುದಕ್ಕೆ ಅನುಮೋದನೆ ನೀಡುತ್ತಾರೆ. ಕೊರೊನಾವೈರಸ್ ವಿರುದ್ಧ ಹೋರಾಡುವ ಕೊರೊನಾವಾರಿಯರ್ಸ್ ಗಾಗಿ ಚೀನಾದಿಂದಲೇ 3 ಲಕ್ಷ ಪಿಪಿಇ ಕಿಟ್ ಗಳನ್ನು ಖರೀದಿಸಿದ್ದಾರೆ. ಹೀಗೆ ಚೀನಾದಿಂದ ಖರೀದಿಸಿದ 3 ಲಕ್ಷ ಪಿಪಿಇ ಕಿಟ್ ಗಳಿಗೆ 94.22 ಕೋಟಿ ರೂಪಾಯಿ ನೀಡಿದ್ದಾರೆ.

English summary
PPE Kit Scam: Siddaramaiah Demanded A Probe Into Alleged Irregularities In The PPE Kits.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X