Prajwal Revanna Case: 19 ಶಾಸಕರ ಭವಿಷ್ಯ ಬೇಕೋ ತಮ್ಮ ಕುಟುಂಬದ ರೇವಣ್ಣ, ಪ್ರಜ್ವಲ್ ಮುಖ್ಯವೋ?
ಬೆಂಗಳೂರು, ಏಪ್ರಿಲ್. 29: ಹಾಸನದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ರಾಷ್ಟ್ರಾದ್ಯಾಂತ ಸದ್ದು ಮಾಡುತ್ತಿದ್ದು, ರಾಜಕೀಯ ಕೂಡ ಶುರುವಾಗಿದೆ. ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇನ್ನು ಬಾಕಿಯಿದ್ದು, ಬಿಜೆಪಿ- ಜೆಡಿಎಸ್ ಮೈತ್ರಿ ಮೇಲೆ ಪ್ರಭಾವ ಬೀರುವ ಸಂಭವವಿದೆ.
ಇದರ ಬೆನ್ನಲ್ಲೇ ಜೆಡಿಎಸ್ ಪಕ್ಷದಲ್ಲಿಯೇ ಪ್ರಜ್ವಲ್ ರೇವಣ್ಣ ಅವರ ಉದ್ಘಾಟನೆಗೆ ಭಾರಿ ಒತ್ತಡ ಕೇಳಿ ಬಂದಿದೆ. ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರು ಪಕ್ಷದ ವರಿಷ್ಠ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಿಗೆ ಪತ್ರ ಬರೆದು, ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತುಗೊಳಿಸುವಂತೆ ಆಗ್ರಹಿಸಿದ್ದ ಬೆನ್ನಲ್ಲೇ, ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಕೂಡ ಪ್ರಜ್ವಲ್ ಉಚ್ಛಾಟನೆಗೆ ಬೇಡಿಕೆಯಿಟ್ಟಿದ್ದಾರೆ.

19 ಶಾಸಕರ ಭವಿಷ್ಯ ಬೇಕೋ ತಮ್ಮ ಕುಟುಂಬದ ರೇವಣ್ಣ, ಪ್ರಜ್ವಲ್, ಮುಖ್ಯವೋ?
ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಟ್ವೀಟ್ ಮಾಡಿರುವ ಮುಳಬಾಗಲು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಅವರು '19 ಜನ ಶಾಸಕರ ಭವಿಷ್ಯ ಬೇಕೋ ತಮ್ಮ ಕುಟುಂಬದ ರೇವಣ್ಣರವರು.. ಪ್ರಜ್ವಲ್ ಅವರು ಮುಖ್ಯವೋ ತೀರ್ಮಾನಿಸಬೇಕಿದೆ' ಎಂದು ಒತ್ತಡ ಹಾಕಿದ್ದಾರೆ.
"ಇತ್ತಿಚಿನ ದಿನಗಳಲ್ಲಿ ಹಾಸನದ ಲೀಲೆಗಳು ಮಾಧ್ಯಮಗಳಲ್ಲಿ ಪ್ರಜ್ವಲಿಸುತ್ತಿರುವುದು ಪಕ್ಷದ ಸಾಮಾನ್ಯ ಕಾರ್ಯಕ್ರತರಾಗಿ ರಾಜ್ಯದಲ್ಲೆಡೆ ಮುಜುಗರಕ್ಕೆ ಒಳಗಾಗಿರುವುದಲ್ಲದೆ ಪಕ್ಷದ ಹೆಸರು ಹೇಳಲು ಸಹ ಹೇಸಿಗೆ ಅನಿಸುವಂತ ಸ್ಥಿತಿಗೆ ತಲುಪಿದೆ. ಮಾಧ್ಯಮದವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲಾಗದ ದಯನೀಯ ಪರಿಸ್ಥಿತಿ ಮೊದಲ ಬಾರಿಗೆ ಶಾಸಕನಾಗಿರುವ ನನಗೆ ಈ ಕಷ್ಟಕರ ಸನ್ನಿವೇಶಗಳು ಎದುರಾಗುತ್ತಿದ್ದರೆ, ಸಾಮಾನ್ಯ ಕಾರ್ಯಕರ್ತರ ಪರಿಸ್ಥಿತಿಯಾದರೇನು ಯೋಚಿಸಿ..??" ಎಂದು ಪ್ರಶ್ನಿಸಿದ್ದಾರೆ.
ವಿನಂತಿಸಿಕೊಳ್ಳುವುದೇನೆಂದರೆ 19ಜನ ಶಾಸಕರ ಭವಿಷ್ಯ ಬೇಕೋ ತಮ್ಮ ಕುಟುಂಬದ ರೇವಣ್ಣರವರು ಪ್ರಜ್ವಲ್ ರವರು ಮುಖ್ಯವೋ ತೀರ್ಮಾನಿಸಬೇಕಿದೆ. 24ಗಂಟೆಗಳಲ್ಲಿ ಆರೋಪ ಹೊರಿರುವ ರೇವಣ್ಣ ಮತ್ತು ಪ್ರಜ್ವಲ್ ರವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಪಕ್ಷದ ಸಿದ್ಧಂತಗಳನ್ನು ಉಳಿಸಿ ಕಾರ್ಯಕರ್ತರನ್ನು ನಮ್ಮನ್ನು ಮುಜುಗರದಿಂದ ಪಾರು ಮಾಡಲು ಕೋರುತ್ತೇನೆ. pic.twitter.com/mDgDJ2GgHW
— ಸಮೃದ್ಧಿ ಮಂಜುನಾಥ್ | Samruddhi Manjunath (@SamManjuJDS) April 29, 2024
"ಮಾನ್ಯ ವರಿಷ್ಠರು ರಾಷ್ಟ್ರಾಧ್ಯಕ್ಷರು ಎಚ್.ಡಿ.ದೇವೇಗೌಡ ಅಪ್ಪಾಜಿ, ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಣ್ಣ ಅವರು ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕಾದ ಸಮಯವಿದಾಗಿದೆ. ವಿನಂತಿಸಿಕೊಳ್ಳುವುದೇನೆಂದರೆ 19 ಜನ ಶಾಸಕರ ಭವಿಷ್ಯ ಬೇಕೋ ತಮ್ಮ ಕುಟುಂಬದ ರೇವಣ್ಣರವರು ಪ್ರಜ್ವಲ್ ರವರು ಮುಖ್ಯವೋ ತೀರ್ಮಾನಿಸಬೇಕಿದೆ" ಎಂದು ತಿಳಿಸಿದ್ದಾರೆ.
ಜೊತೆಗೆ, " 24 ಗಂಟೆಗಳಲ್ಲಿ ಆರೋಪ ಹೊತ್ತಿರುವ ರೇವಣ್ಣ ಮತ್ತು ಪ್ರಜ್ವಲ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಪಕ್ಷದ ಸಿದ್ಧಾಂತಗಳನ್ನು ಉಳಿಸಿ ಕಾರ್ಯಕರ್ತರನ್ನು ನಮ್ಮನ್ನು ಮುಜುಗರದಿಂದ ಪಾರು ಮಾಡಲು ಕೋರುತ್ತೇನೆ" ಎಂದು 24 ಗಂಟೆಗಳ ಸಮಯಾವಕಾಶ ನೀಡಿದ್ದಾರೆ.
ಪ್ರಜ್ವಲ್ ರೇವಣ್ಣ ಅಮಾನತಿಗೆ ಆಗ್ರಹಿಸಿದ್ದ ಶರಣಗೌಡ ಕಂದಕೂರು
ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಕೂಡ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರಿಗೆ ಪತ್ರ ಬರೆದು ಪ್ರಜ್ವಲ್ ರೇವಣ್ಣ ಅವರ ಅಮಾನತಿಗೆ ಆಗ್ರಹಿಸಿದ್ದಾರೆ. "ಕೆಲದಿನಗಳಿಂದ ರಾಜ್ಯಾದ್ಯಂತ ಹರಿದಾಡುತ್ತಿರುವ ಅಶ್ಲೀಲ ವೀಡಿಯೋ ತುಣುಕುಗಳಿಂದ ಪಕ್ಷಕ್ಕೆ ತೀರಾ ಮುಜುಗರ ಉಂಟಾಗಿದೆ. ಸದರಿ ವೀಡಿಯೋ ದೃಶ್ಯಗಳಲ್ಲಿ ಸಂಸದರಾದ ಪ್ರಜ್ವಲ್ ರೇವಣ್ಣ ಅವರು ಕಾಣಿಸಿಕೊಂಡಿದ್ದಾರೆ. ಸದ್ಯ ಮೇಲ್ನೋಟಕ್ಕೆ ಅವರು ತಪ್ಪಿತಸ್ಥರೆಂದು ಭಾವನೆ ಉಂಟಾಗಿದೆ. ಪ್ರಯುಕ್ತ ಅವರನ್ನು ಕೂಡಲೇ ಪಕ್ಷದಿಂದ ಅಮಾನತು ಮಾಡಲು ತಮ್ಮಲ್ಲಿ ಕೋರುತ್ತೇನೆ" ಎಂದು ಮನವಿ ಮಾಡಿದ್ದಾರೆ.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications