ಹಾಸನ ಪೆನ್‌ಡ್ರೈವ್ ಕೇಸ್: ಸಿಬಿಐ ತನಿಖೆಗೆ ನೀಡುವ ಬಗ್ಗೆ ಜಿ.ಪರಮೇಶ್ವರ ಮಹತ್ವದ ಹೇಳಿಕೆ
ಬೆಂಗಳೂರು, ಮೇ 08: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಕಲೆಯನ್ನು ಸಿಬಿಐಗೆ ವಹಿಸುವ ಅಗತ್ಯತೆ ಕುರಿತು ಬುಧವಾರ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಮಾತನಾಡಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಗೃಹ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದವರು. ಎಸ್ಐಟಿ ಯಾವ ರೀತಿ ಕಾರ್ಯನಿರ್ವಹಿಸುತ್ತದೆ ಎಂಬುದು ಅವರಿಗೆ ಗೊತ್ತಿದೆ.

ನಮ್ಮ ಪೊಲೀಸರು ಸಮರ್ಥರಿದ್ದಾರೆ. ತನಿಖೆ ಯಾವ ರೀತಿ ಮುಂದುವರಿದಿದೆ ಎಂಬುದನ್ನು ಜನ ಸಮುದಾಯ ಗಮನಿಸುತ್ತಿದೆ. ಕೆಲವು ರಾಜಕೀಯ ಹೇಳಿಕೆಗಳನ್ನು ಹೊರತುಪಡಿಸಿದರೆ, ತನಿಖೆ ಸರಿಯಾದ ದಾರಿಯಲ್ಲಿ ಹೋಗುತ್ತಿದೆ. ಸಿಬಿಐಗೆ ವಹಿಸುವ ಅಗತ್ಯವಿಲ್ಲ ಎಂದು ಗೃಃ ಸಚಿವರ ಸ್ಪಷ್ಟಪಡಿಸಿದರು.
ಜನರು ಸಿಬಿಐ ಗೆ ಕೊಟ್ಟಿದ್ದನ್ನು ಒಪ್ಪಿಲ್ಲ
2008-2013ರವರೆಗೆ ಅಂದಿನ ಸರ್ಕಾರ ಯಾವುದೇ ಒಂದು ಪ್ರಕರಣವನ್ನು ಸಿಬಿಐಗೆ ವಹಿಸಿಲ್ಲ. ಕೆಲವು ಪ್ರಕರಣಗಳಲ್ಲಿ ಸಿಬಿಐ ಕೊಟ್ಟ ವರದಿಯನ್ನು ಜನರು ಒಪ್ಪಿಲ್ಲ. ಅಂತಹ ಪ್ರಕರಣಗಳ ಸಿಬಿಐ ಕಾರ್ಯವೈಖರಿಯನ್ನು ಟೀಕಿಸಿದ್ದನ್ನು ನೋಡಿದ್ದೇವೆ. ಸಿಬಿಐ ಅಂದ ತಕ್ಷಣ ಏನೋ ಆಗಿ ಬಿಡುತ್ತದೆ ಎಂಬ ಪರಿಕಲ್ಪನೆ ಬೇಡ ಎಂದರು.
ಪ್ರಕರಣವನ್ನು ಎಸ್ಐಟಿಯವರು ಗಂಭೀರವಾಗಿ ತನಿಖೆ ಮಾಡುತ್ತಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿದ್ದಾರೆ ಎಂಬುದು ಎಲ್ಲರಿಗು ಗೊತ್ತಿದೆ. ಅವರನ್ನು ಕರೆತರಲು ಬ್ಲೂ ಕಾರ್ನರ್ ನೋಟಿಸ್ ಹೊರಡಿಸಲಾಗಿದೆ. ಇಂಟರ್ ಪೋಲ್‌ನವರು 197 ದೇಶಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿಸಿದರು.
ಮಾಜಿ ಸಂಸದರ ವಿಚಾರಣೆ ನಿರ್ಧಾರ
ಹಾಸನದಲ್ಲಿ ಪೆನ್‌ಡ್ರೈವ್ ಹಂಚಿಕೆ ಹಾಗೂ ಬಹಿರಂಗದ ಬಗ್ಗೆಯೂ ತನಿಖೆಯಾಗಲಿದೆ. ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರನ್ನು ವಿಚಾರಣೆ ನಡೆಸುವ ನಿರ್ಧಾರ ಎಸ್ಐಟಿ ಮಾಡಲಿದೆ. ಪ್ರಕರಣದಲ್ಲಿ ಕೆಲವರನ್ನು ವಿಚಾರಣೆ ಮಾಡಲಾಗುತ್ತಿಲ್ಲ ಎಂದು ಆರೋಪಿಸಲಾಗುತ್ತಿದೆ. ಕಾನೂನಿನ ಚೌಕಟ್ಟಿನಲ್ಲಿ ಯಾವಾಗ ವಿಚಾರಣೆ ನಡೆಸಬೇಕು, ಯಾವಾಗ ಬಂಧಿಸಬೇಕು ಎಂಬುದು ನಮ್ಮ ಕೈಯಲ್ಲಿ ಇಲ್ಲ. ಎಸ್ಐಟಿ ನಿರ್ಧರಿಸಲಿದೆ ಎಂದು ಹೇಳಿದರು.

ಟೆಕ್ನಿಕಲ್ ಆಗಿ ಕಾನೂನಿನ ಪ್ರಕಾರ ಬಂಧಿಸಲು ನಿಖರವಾದ ಸಾಕ್ಷ್ಯಗಳಿರಬೇಕು. ಕಾರು ಚಾಲಕ ಕಾರ್ತಿಕ್ ಗೌಡ, ಬಿಜೆಪಿಯ ದೇವರಾಜೇಗೌಡ ಅವರನ್ನ ವಕೀಲರಾಗಿ ಮಾಡಿಕೊಂಡಿದ್ದಾರೆ. ನಿಖರವಾದ ಸಾಕ್ಷ್ಯ ಇಲ್ಲದೆ ದೇವರಾಜೇಗೌಡ ಅಥವಾ ಕಾರ್ತಿಕ್‌ನನ್ನು ಬಂಧಿಸಲು ಸಾಧ್ಯವಾಗುವುದಿಲ್ಲ. ಅವರ ಹೇಳಿಕೆಯನ್ನು ಎಸ್ಐಟಿ ಪಡೆದುಕೊಂಡಿದೆ. ಹೇಳಿಕೆಯನ್ನು ಪುನರ್ ಪರಿಶೀಲಿಸುತ್ತಾರೆ. ಪ್ರಕರಣದ ಸಂತ್ರಸ್ತರಿಗೆ ಹೊರತುಪಡಿಸಿ, ಇಂತವರಿಗೆಲ್ಲ ರಕ್ಷಣೆ ಕೊಡುವುದಿಲ್ಲ. ಬಂಧಿಸಲು ಬೇಕಾದ ಅಗತ್ಯ ಸಾಕ್ಷ್ಯಗಳು ಸಿಕ್ಕ ಕೂಡಲೇ ಬಂಧನವಾಗಲಿದೆ ಎಂದು ಅವರು ವಿವರಿಸಿದರು.
ಹೀಗೇಯೇ ತನಿಖೆ ಮಾಡಿ ಎನ್ನಲಾಗಲ್ಲ
ಎಸ್ಐಟಿ ಅಧಿಕಾರಿಗಳಿಗೆ ಪ್ರಕರಣದ ತನಿಖೆಯನ್ನು ಹೀಗೆಯೇ ಮಾಡಿ ಅಂತ ಹೇಳಲು ಸಾಧ್ಯವಿಲ್ಲ. ಮುಖ್ಯಮಂತ್ರಿಯವರಿಗೆ, ಗೃಹ ಸಚಿವರಿಗೆ ಪ್ರಕರಣದ ಮಾಹಿತಿ ಇರಬೇಕಲ್ಲವೇ? ಹೀಗಾಗಿ ಅಧಿಕಾರಿಗಳನ್ನು ಕರೆದು ಮಾಹಿತಿ ಪಡೆಯಲಾಗಿದೆ ಎಂದರು.
ಎಚ್‌ಡಿಕೆ ಅಧಿಕಾರದಲ್ಲಿರುವ ಆಸೆ ಪಟ್ಟಿದ್ದರು
ನಮಗೆ ಬೆನ್ನು ಮೂಳೆ ಇರುವುದರಿಂದಲೇ ರಾಜ್ಯದ ಜನ 135 ಸೀಟುಗಳನ್ನು ಗೆಲ್ಲಿಸಿ ಅಧಿಕಾರ ಕೊಟ್ಟಿದ್ದಾರೆ ಎಂದು ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು. ಕುಮಾರಸ್ವಾಮಿ ಅವರು ತಾವೇ ಅಧಿಕಾರದಲ್ಲಿ ಕೂರಬೇಕು ಎಂಬ ಆಸೆ ಇತ್ತು. ಪಾಪ ಅದು ಅವರಿಗೆ ಆಗಲಿಲ್ಲ. ನಾವು ಅಧಿಕಾರದಲ್ಲಿದ್ದೇವೆ ಎಂದು ಕುಮಾರಸ್ವಾಮಿ ಅವರು ಸಂತೋಷಪಡಬೇಕು ಎಂದರು.
-
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ











Click it and Unblock the Notifications