Prakash Rai: ಎಚ್‌ಡಿ ಕುಮಾರಸ್ವಾಮಿ ದಾರಿ ತಪ್ಪಿದ ಮಗ: ಪ್ರಕಾಶ್ ರೈ

ಬೆಂಗಳೂರು, ಏಪ್ರಿಲ್ 15: ಕಾಂಗ್ರೆಸ್ ಟೀಕಿಸುವ ಭರದಲ್ಲಿ ಹೆಣ್ಣುಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಹಾಗು ಮಂಡ್ಯ ಕ್ಷೇತ್ರ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ನಟ ಪ್ರಕಾಶ್ ರೈ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಜಿಲ್ಲಾ ಶ್ರಮಿಕನಗರ ನಿವಾಸಿಗಳ ಒಕ್ಕೂಟದ ವತಿಯಿಂದ ಜರುಗಿದ ಕಾರ್ಮಿಕ ಸ್ವಾಭಿಮಾನಿ ಗೆಲುವಿನ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಡ್ಯದ ಮಗ ಯಾರು, ಕಳ್ಳನನ್ನ ಮಗ ಯಾರು ಎಂದು ಲೋಕಸಭಾ ಚುನಾವಣೆಯಲ್ಲಿ ಮಂಡ್ಯದ ಜನರು ನಿರ್ಧರಿಸುತ್ತಾರೆ. ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರೇ ದಾರಿ ತಪ್ಪಿದ ಮಗ ಎಂದು ಅವರು ಟೀಕಿಸಿದರು.

Prakash Rai Reacted about HD Kumaraswamy Abuse Remark on Womens

ಇವರಿಗೆ ಮಾನ, ಮರಿಯಾದೇ ಇಲ್ಲವೇ?

ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರವಾದ ಮಾತನಾಡುವುದು ಸರಿಯಲ್ಲ. ಅವಹೇಳನಕಾರಿ ಹೇಳಿಕೆ ಕೊಟ್ಟ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರೇ ದಾರಿ ತಪ್ಪಿದ ಮಗ. ಹೆಣ್ಮಕ್ಕಳ ಬಗ್ಗೆ ಹಗರುವಾಗಿ ಮಾತನಾಡಿರುವ ಇವರಿಗೆ ಮಾನ ಮರಿಯಾದೆ ಇಲ್ಲವೇ ಎಂದು ಪ್ರಶ್ನಿಸಿದರು.

ಸುಮಲತಾ ಅಂಬರೀಶ್ ಬಗ್ಗೆಯೂ ಮಾತನಾಡಿದ್ದ ಎಚ್‌ಡಿಕೆ

ಈ ಹಿಂದೆ 2019ರ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರನ್ನು 'ಗಂಡ ಸತ್ತ ಮುಂಡೆ' ಎಂದು ನಿಂದಿಸಿದ್ದರು. ಹೀಗಾಗಿಯೇ ಅವರ ಪಕ್ಷವನ್ನು ಮಂಡ್ಯ ಜನರು, ಮಹಿಳೆಯರು ಸೇರಿ ಸೋಲಿಸಿ ಅವರನ್ನು ಮನೆಗೆ ಕಳಿಸಿದ್ದರು. ಈ ಬಾರಿಯ ಚುನಾವಣೆಯಲ್ಲೂ ಅಂತದ್ದೆ ಕೆಲಸವನ್ನು ಕುಮಾರಸ್ವಾಮಿ ಮಾಡುತ್ತಿದ್ದಾರೆ. ಪುನಃ ಮಹಿಳೆಯರು ಎಚ್ಚೆತ್ತುಕೊಳ್ಳಬೇಕಿದೆ ಎಂದು ಅವರು ಹೇಳಿದರು.

Prakash Rai Reacted about HD Kumaraswamy Abuse Remark on Womens

ಮಂಡ್ಯದಲ್ಲಿ ಜೆಡಿಎಸ್ ವಿರುದ್ಧ ಪಕ್ಷೇತರವಾಗಿ ನಟಿ, ಸಂಸದೇ ಸುಮಲತಾ ಅಂಬರೀಶ್ ಅವರು ಪಕ್ಷೇತರವಾಗಿ ಸ್ಪರ್ಧಿಸಿದ್ದರು. ಅಂದಿನ ಚುನಾವನೆಯಲ್ಲೂ ಇದೇ ಎಚ್‌ಡಿ ಕುಮಾರಸ್ವಾಮಿ ಅವರು ಕೆಟ್ಟದಾಗಿ ಮಾತನಾಡಿದ್ದರು. ಅಂದು ಚುನಾವಣೆಯಲ್ಲಿ ಸೋಲು ಅನುಭವಿಸದರೂ ಇವರಿಗೆ ಬುದ್ಧಿ ಬಂದಿಲ್ಲ.

ಮಂಡ್ಯದ ಜನರು ತೀರ್ಮಾನಿಸುತ್ತಾರೆ

ಈ ಬಾರಿಯ ಚುನಾವಣೆಯಲ್ಲೂ ಮಹಿಳೆಯ ಬಗ್ಗೆ ಹಗುರವಾಗಿ ಮಾತನಾಡುವ ಕೆಲಸ ಮಾಡುತ್ತಿದ್ದಾರೆ. ಲೋಕಸಭಾ ಚುನಾವಣೆಯ ಸರಿಯಾದ ಮಗ ಯಾರೆಂಬುದನ್ನು ಮಂಡ್ಯದ ಜನರು ತೀರ್ಮಾನಿಸಬೇಕು ಎಂದು ಅವರು ಕರೆ ನೀಡಿದರು. ಎಚ್‌ಡಿ ಕುಮಾರಸ್ವಾಮಿಯವರ ಪ್ರಕಾಶ್ ರೈ ಅವರು ಆಕ್ರೋಶ ವ್ಯಕ್ತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+