ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಪ್ರಕಾಶ್ ರೈ ನಾಮಪತ್ರ ಸಲ್ಲಿಕೆ

ಬೆಂಗಳೂರು, ಮಾರ್ಚ್ 22: ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಪ್ರಕಾಶ್ ರೈ ಅವರು ಪಕ್ಷೇತರರಾಗಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಬಿಬಿಎಂಪಿ ಕಚೇರಿಯಲ್ಲಿ ಪ್ರಕಾಶ್ ರೈ ಅವರು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನಾ ಮಸೀದಿ, ಚರ್ಚ್‌ ಹಾಗೂ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದರು.

ಬೆಂಗಳೂರು ಕೇಂದ್ರ (ಸೆಂಟ್ರಲ್) ಕ್ಷೇತ್ರದಿಂದ ಅವರು ಚುನಾವಣೆಗೆ ಪಕ್ಷೇತರರಾಗಿ ಸ್ಪರ್ಧಿಸುತ್ತಿದ್ದು, ಹಲವು ದಿನಗಳ ಮುಂಚೆಯಿಂದಲೇ ಅವರು ಪ್ರಚಾರ ಆರಂಭಿಸಿದ್ದಾರೆ.

Prakash raj filled nomination as Bengaluru central independent candidate

ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಅವರು ಬಿಜೆಪಿಯ ಪಿ.ಸಿ.ಮೋಹನ್ ಅವರನ್ನು ಎದುರಿಸಲಿದ್ದಾರೆ. ಕಾಂಗ್ರೆಸ್‌ನ ಅಭ್ಯರ್ಥಿ ಇನ್ನೂ ಅಂತಿಮವಾಗಿಲ್ಲ.

ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ

ಪ್ರಕಾಶ್ ರೈ ಅವರು ಕಾಂಗ್ರೆಸ್‌ನ ಬೆಂಬಲವನ್ನು ಕೇಳಿದ್ದರು, ಬೆಂಗಳೂರು ಸೆಂಟ್ರಲ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಕದೆ ತಮಗೆ ಬೆಂಬಲ ನೀಡಬೇಕೆಂಬ ಮನವಿಯನ್ನು ಅವರು ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರ ಮುಂದಿಟ್ಟಿದ್ದರು ಆದರೆ ಪ್ರಕಾಶ್ ರೈ ಬೇಡಿಕೆಗೆ ಕಾಂಗ್ರೆಸ್ ಒಪ್ಪಿರಲಿಲ್ಲ.

ಮೋದಿ ಅವರನ್ನು ವಿರೋಧಿಸುತ್ತಲೇ ಬರುತ್ತಿರುವ ಪ್ರಕಾಶ್ ರೈ ಅವರಿಗೆ ರಾಜ್ಯದ ಎಡ ಚಿಂತನೆಗಳ ಹಲವರು ಬೆಂಬಲ ಸೂಚಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+