Breaking: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಎನ್‌ಐಎ ತನಿಖೆಗೆ; ಬಸವರಾಜ ಬೊಮ್ಮಾಯಿ
ಬೆಂಗಳೂರು, ಜುಲೈ 29: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಪ್ರಕರಣದಲ್ಲಿ ಅಂತರಾಜ್ಯಗಳ ವಿಚಾರ ಇರುವ ಹಿನ್ನೆಲೆ ಈ ತೀರ್ಮಾನ ಕೈಗೊಳ್ಳಲಾಗಿದೆ.
ಈ ಹಿಂದೆ ಕೂಡ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸುವ ಬಗ್ಗೆ ವದಂತಿಗಳಿದ್ದವು. ಈಗ ಸರಕಾರ ಅದಕ್ಕೆ ಅಧಿಕೃತ ಮುದ್ರೆ ಹಾಕಿದೆ. ಪ್ರಾಅಥಮಿಕ ತನಿಖೆಯ ಮಾಹಿತಿ ಆಧಾರದಲ್ಲಿ ಎನ್‌ಐಎಗೆ ವಹಿಸುವುದಾಗಿ ಸಿಎಂ ತಿಳಿಸಿದ್ದರು.
ಕೇರಳ ಗಡಿಯಲ್ಲಿ ಸಿಸಿ ಕ್ಯಾಮೆರ ಅಳವಡಿಕೆ ಬಗ್ಗೆಯೂ ತೀರ್ಮಾನ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ರಾಷ್ಟ್ರೀಯ ತನಿಖಾ ದಳದ ಘಟಕವನ್ನು(ಎನ್‌ಐಎ) ಆರಂಭಿಸುವಂತೆ ಕೇಂದ್ರ ಸರ್ಕಾರವನ್ನು ಕೋರಿದ್ದೇವೆ. ವಿಶೇಷವಾಗಿ ಮಂಗಳೂರು ಭಾಗದಲ್ಲಿ ಎನ್ಐಎ ಘಟಕವನ್ನು ಹೊಂದುವ ಅಗತ್ಯ ಇದೆ ಎಂದು ಇಂದು ಬೆಳಗ್ಗೆ ಮುಖ್ಯಮಂತ್ರಿ ಹೇಳಿದ್ದರು.
#BREAKIBG #BJP Yuva Morcha leader #PraveenNettaru case handed over to NIA announces @CMofKarnataka . pic.twitter.com/AxxVSuZwC0
— Imran Khan (@KeypadGuerilla) July 29, 2022
'ಪ್ರವೀಣ್ ಹತ್ಯೆ ವ್ಯವಸ್ಥಿತವಾಗಿ ಆಗಿದೆ ಹಾಗೂ ಇದೊಂದು ಅಂತರರಾಜ್ಯ ವಿಚಾರವಾಗಿದೆ. ಡಿಜಿ, ಐಜಿ ಅವರ ಬಳಿ ಚರ್ಚಿಸಲಾಗಿದ್ದು, ಅದರ ಸಂಪೂರ್ಣ ಮಾಹಿತಿಯನ್ನು ಪಡೆಯಲು ಸೂಚಿಸಲಾಗಿದೆ. ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದ್ದು, ಮಾಹಿತಿ ಪಡೆದ ನಂತರ ಗೃಹ ಇಲಾಖೆ ಪತ್ರ ಬರೆಯಲಿದೆ. ಕೇರಳ ಗಡಿಯಲ್ಲಿ ಎರಡು ರಾಜ್ಯಗಳ ಸಂಪರ್ಕಿಸುವ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿ, ಚೆಕ್ ಪೋಸ್ಟ್ ಗಳನ್ನು ಹಾಕಲಾಗುವುದು. ಸೂಕ್ಷ್ಮ ಊರುಗಳಲ್ಲಿ ತಾತ್ಕಾಲಿಕ ಪೋಲಿಸ್ ಕ್ಯಾಂಪ್‍ಗಳು, ಹಲವಾರು ಖಾಲಿ ಹುದ್ದೆಗಳನ್ನು ತುಂಬಲು ಕ್ರಮ ತೆಗೆದುಕೊಳ್ಳಬೇಕು, ರಾತ್ರಿ ಗಸ್ತನ್ನು ಹೆಚ್ಚಿಸಬೇಕು ಹಾಗೂ ಕೆ.ಎಸ್.ಆರ್.ಪಿಯ ಮತ್ತೊಂದು ತುಕಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಗೆ ನಿಯೋಜಿಸಲು ಸೂಚಿಸಲಾಗಿದೆ' ಎಂದರು.
ಮುಂದುವರೆದು 'ನಿನ್ನೆ ಸೂರತ್ಕಲ್‍ನಲ್ಲಿ ನಡೆದ ಹತ್ಯೆಯ ಬಗ್ಗೆಯೂ ತೀವ್ರಗತಿಯಲ್ಲಿ ತನಿಖೆಯಾಗಿ, ತಪ್ಪಿತಸ್ಥರನ್ನು ಬಂಧಿಸಬೇಕು. ಅದಕ್ಕೂ ಕೂಡ ತಂಡಗಳನ್ನು ರಚಿಸಿ ತನಿಖೆ ಪ್ರಾರಂಭ ಮಾಡಬೇಕೆಂದು ತೀರ್ಮಾನ ಮಾಡಲಾಗಿದೆ ಎಂದರು. ಜಿಲ್ಲಾ ಮಟ್ಟದಲ್ಲಿ ಧಾರ್ಮಿಕ ಮುಖಂಡರನ್ನ ಕರೆದು ಶಾಂತಿ ಸಭೆಗಳನ್ನು ಮಾಡುವ ನಡೆಸಲಾಗುವುದು' ಎಂದು ಮುಖ್ಯಮಂತ್ರಿಗಳು ತಿಳಿಸಿದರು.
'ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ, ಈಗಾಗಲೆ ಪೊಲೀಸ್ ತಂಡಗಳು ತನಿಖೆ ಪ್ರಾರಂಭಿಸಿವೆ. ಆರೋಪಿಗಳು ರಾಜ್ಯದ ಗಡಿ ದಾಟಿರಬಹುದು. ಈ ಎಲ್ಲಾ ಆಯಾಮದಲ್ಲಿ ತನಿಖೆ ಮಾಡಲಾಗುತ್ತಿದೆ. ಕೆಲವರನ್ನು ವಶಕ್ಕೆ ತೆಗೆದುಕೊಂಡು, ಅವರಿಂದ ಪಡೆದ ಮಾಹಿತಿಯಿಂದ ತನಿಖೆ ಮುಂದುವರೆಯಲಿದೆ. ಅತಿ ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು ಎಂಬ ವಿಶ್ವಾಸವಿದೆ. ಎಡಿಜಿಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ' ಎಂದು ಗುರುವಾರ ತಿಳಿಸಿದ್ದರು.












Click it and Unblock the Notifications