ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಜೆಟ್ ಪೂರ್ವ ಸಭೆ:ಬೆಂಗಳೂರು ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಹಣ ನೀಡಲು ಒತ್ತಾಯ

|
Google Oneindia Kannada News

ಬೆಂಗಳೂರು, ಜನವರಿ 19:ಬೆಂಗಳೂರು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಬಜೆಟ್‌ನಲ್ಲಿ ಹೆಚ್ಚಿನ ಹಣ ಮೀಸಲಿಡುವಂತೆ ಕರ್ನಾಟಕ ಸರ್ಕಾರವು ಕೇಂದ್ರಕ್ಕೆ ಮನವಿ ಮಾಡಲಿದೆ.

ಮೆಟ್ರೋ, ಸಬರ್ಬನ್ ರೈಲು, ರಸ್ತೆ ಸೇರಿದಮತೆ ಹಲವು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಹಣ ನೀಡುವಂತೆ ಬಜೆಟ್ ಪೂರ್ವ ಸಭೆಯಲ್ಲಿ ಕೇಳಲಿದೆ.

ಬೆಂಗಳೂರು ಭಾರತೀಯ ಆರ್ಥಿಕತೆಗೆ ದೊಡ್ಡ ಕೊಡುಗೆಯನ್ನು ನೀಡುತ್ತಿದೆ. ನಗರದಲ್ಲಿ ಹೆಚ್ಚು ಬಂಡವಾಳ ಹೂಡಿಕೆಯ ಅಗತ್ಯವಿದೆ. ಈ ಕುರಿತು ಬಸವರಾಜ್ ಬೊಮ್ಮಾಯಿ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಹೇಳಿದ್ದಾರೆ.

Pre Budget Meet: Karnataka Seeks More Funds To Support Bengaluru’s Infrastructure

ಈಗಾಗಲೇ ಬೆಂಗಳೂರಿನ ಅಭಿವೃದ್ಧಿಗೆ ಕೇಂದ್ರ ಸಹಕರಿಸುತ್ತಿದೆ. ತ್ಯಾಜ್ಯ ನಿರ್ವಹಣೆ ಸೇರಿದಂತೆ ಹಲವು ಯೋಜನೆಗಳಿಗೆ ಸಹಕಾರದ ಅಗತ್ಯವಿದೆ.

ಬರಪೀಡಿತ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಮತರ ಮತ್ತು ತುಮಕೂರಿಗೆ ಕುಡಿಯುವ ನೀರನ್ನು ಒದಗಿಸುವುದರಿಂದ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯ ಶೇ.90ರಷ್ಟು ವೆಚ್ಚವನ್ನು ರಾಷ್ಟ್ರೀಯ ಯೋಜನೆಯೆಂದು ಪರಿಗಣಿಸಬೇಕು ಎಂದು ಒತ್ತಾಯಿಸಿದರು.

15ನೇ ಹಣಕಾಸು ಆಯೋಗವು 2020-21ರ ವರದಿಯಲ್ಲಿ ಕರ್ನಾಟಕಕ್ಕೆ 5495 ಕೋಟಿ ರೂ,ಗಳ ವಿಶೇಷ ಅನುದಾನವನ್ನು ಶಿಫಾರಸು ಮಾಡಿದೆ.

Recommended Video

karkala , nippani , ಬೆಳಗಾವಿ ಮಹಾರಾಷ್ಟ್ರ ಗೆ ಸೇರಬೇಕಂತೆ !! | Oneindia Kannada

ಫೆಬ್ರವರಿ 1 ರಂದು ಕೇಂದ್ರ ಬಜೆಟ್ ನಡೆಯಲಿದೆ, ಹಾಗಾಗಿ ಬಜೆಟ್ ಪೂರ್ವ ಸಭೆಯನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ನೇತೃತ್ವದಲ್ಲಿ ನಡೆಸಲಾಯಿತು. ಕರ್ನಾಟಕದಿಂದ ಬಸವರಾಜ್ ಬೊಮ್ಮಾಯಿ ಸಭೆಯಲ್ಲಿ ಪಾಲ್ಗೊಂಡಿದ್ದರು.

English summary
Karnataka has sought more funds from the Centre for investments in Bengaluru’s infrastructure projects such as metro rail, sub-urban rail, road transport etc.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X