ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಂದು ಹೊಸಕೋಟೆ ಕಾಂಗ್ರೆಸ್ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ

|
Google Oneindia Kannada News

ಬೆಂಗಳೂರು, ನವೆಂಬರ್ 16: ಹೊಸಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಡಿಸೆಂಬರ್ 05 ರಂದು ಉಪ ಚುನಾವಣೆ ಘೋಷಣೆಯಾಗಿದ್ದು, ಇಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮಾವತಿ ಸುರೇಶ್ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಿಗ್ಗೆಯೇ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ತೆರಳಿ ದೇವರ ವಿಗ್ರಹದ ಬಳಿ ನಾಮಪತ್ರವನ್ನಿಟ್ಟು ವಿಶೇಷ ಪೂಜೆ ಸಲ್ಲಿಸಿದ ಪದ್ಮಾವತಿ ನಂತರ ಅವಿಮುಕ್ತೇಶ್ವರನಿಗೆ ಪೂಜೆ ಸಲ್ಲಿಸಲಿದ್ದಾರೆ. ಇವರಿಗೆ ಪತಿ ಭೈರತಿ ಸುರೇಶ್ ಸಾಥ್ ನೀಡಿದ್ದಾರೆ.

ಹೊಸಕೋಟೆ ಉಪ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಅಂತಿಮ?ಹೊಸಕೋಟೆ ಉಪ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಅಂತಿಮ?

ಈ ಉಪ ಚುನಾವಣೆಯಲ್ಲಿ ರಾಜ್ಯದ ಗಮನ ಸೆಳೆದಿರುವ ಕ್ಷೇತ್ರಗಳಲ್ಲಿ ಹೊಸಕೋಟೆಯೂ ಒಂದು. ಮೆರವಣಿಗೆ ಮೂಲಕ ಇಂದು ತಾಲ್ಲೂಕು ಕಚೇರಿಗೆ ಸಾವಿರಾರು ಕಾರ್ಯಕರ್ತರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಅನರ್ಹ ಶಾಸಕ ಎಂಟಿಬಿ ನಾಗರಾಜ್ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಈ ಹಿಂದೆ ಸದನದಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಎಂಟಿಬಿ ವಿರುದ್ಧ ಅವರನ್ನು ಚುನಾವಣಾ ಆಖಾಡದಲ್ಲಿ ನೋಡಿಕೊಳ್ಳುತ್ತೇನೆ ಎಂದು ಗುಡುಗಿದ್ದರು. ಶಿವಕುಮಾರ್ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟರೆ ಚುನಾವಣಾ ಕಣ ಇನ್ನಷ್ಟು ರಂಗೇರಲಿದೆ.

Presentation Of Nomination Papers From Hoskote Congress Candidate Today

ಇದೇ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿ ಶರತ್ ಬಚ್ಚೇಗೌಡ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದು, ಎಂಟಿಬಿಗೆ ತಲೆನೋವು ತರಿಸಿದೆ. ಹೊಸಕೋಟೆ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡಲಿದ್ದು, ಮತದಾರ ಯಾರಿಗೆ ಮಣೆ ಹಾಕಲಿದ್ದಾರೆ ಎಂದು ಫಲಿತಾಂಶದವರೆಗೂ ಕಾಯಬೇಕು.

English summary
The By Election For The Hoskote Assembly Constituency Was Announced On December 5, Congress Candidate Padmavati Suresh Will File Her Nomination Today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X