• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ತೇಜಸ್ವಿನಿ ಮನೆ ಆತಿಥ್ಯ ಸ್ವೀಕರಿಸಿದ ದೇಶದ ಪ್ರಥಮ ಪ್ರಜೆ

|

ಬೆಂಗಳೂರು, ಅಕ್ಟೋಬರ್ 12: ಇತ್ತೀಚೆಗಷ್ಟೇ ನಿಧನರಾಗಿರುವ ಕೇಂದ್ರ ಸಚಿವ ದಿ. ಅನಂತ್ ಕುಮಾರ್ ಅವರ ನಿವಾಸಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶನಿವಾರ ಭೇಟಿ ನೀಡಿ ಆತಿಥ್ಯ ಸ್ವೀಕರಿಸಿದ್ದಾರೆ.

ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ತುಂಬು ಹೃದಯದಿಂದ ರಾಷ್ಟ್ರಪತಿಯನ್ನು ಬರಮಾಡಿಕೊಂಡರು. ಅನಂತ್ ಕುಮಾರ್ ಕುಟುಂಬ ಸದಸ್ಯರು ಹಾಜರಿದ್ದರು. ಮೂರು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಬೆಳಗ್ಗೆ ರಾಜಭವನದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

10ರಂದು ರಾಷ್ಟ್ರಪತಿಗಳಿಂದ ಜೆಸಿ ಒಡೆಯರ್‌ ಕೃತಿ ಬಿಡುಗಡೆ ಮಾಡಿದ್ದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಗಳಾದ ಗೋವಿಂದ ಕಾರಜೋಳ ಹಾಗೂ ಡಾ ಸಿ.ಎನ್. ಅಶ್ವತ್ಥನಾರಾಯಣ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್ ಉಪಸ್ಥಿತರಿದ್ದರು.

ಅಕ್ಟೋಬರ್ 10ರಂದು ಮೈಸೂರಿಗೆ ಆಗಮಿಸಿದ್ದ ಕೋವಿಂದ್, ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಬೆಂಗಳೂರಿಗೆ ಆಗಮಿಸಿದ್ದು ಇಂದು ಸಿಎಂ ಅವರನ್ನು ಭೇಟಿಯಾದರು. ಇಂದು ಸಂಜೆಯೊಳಗೆ ರಾಷ್ಟ್ರಪತಿಗಳು ದೆಹಲಿಗೆ ವಾಪಾಸ್ಸಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

English summary
President Ramnath Kovind Visited Late Ananth kumar Residence Today(October 12).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X