ರಾಷ್ಟ್ರಪತಿ ಕೋವಿಂದ್ ಬೆಂಗಳೂರಿಗೆ ಆಗಮನ, ಸಿಎಂರಿಂದ ಸ್ವಾಗತ
ಬೆಂಗಳೂರು, ಅಕ್ಟೋಬರ್ 06: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬೆಂಗಳೂರಿಗೆ ಆಗಮಿಸಿದ್ದಾರೆ. ಮೂರು ದಿನಗಳ ಕರ್ನಾಟಕ ಭೇಟಿಗಾಗಿ ಕೋವಿಂದ್ ಅವರು ಇಂದು ಬೆಂಗಳೂರಿನ ಎಚ್‌ಎಎಲ್‌ನ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ಇಂದಿನಿಂದ ರಾಷ್ಟ್ರಪತಿ ರಾಮನಾಥ್ ಕೋವಿಂದ್ 4 ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದು, ಏರ್ ಪೋರ್ಟ್ ನಿಂದ ನೇರವಾಗಿ ರಾಜಭವನಕ್ಕೆ ಆಗಮಿಸಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ಅಗಮಿಸಿದ ರಾಷ್ಟ್ರಪತಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದ್ದಾರೆ. ಸಂಜೆ 7 ಗಂಟೆಗೆ ರಾಜಭವನದಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳ ಜೊತೆ ಹೈ ಟೀ ಕಾರ್ಯಕ್ರಮ ನಡೆಯಲಿದ್ದು, ಇಂದು ರಾತ್ರಿ ರಾಜಭವನದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ ರಾಷ್ಟ್ರಪತಿ ಕೋವಿಂದ್.
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯಕ್ಕೆ ಸ್ವಾಗತಿಸಿದ್ದು, ಅಲ್ಲಿಂದ ರಾಜಭವನಕ್ಕೆ ಅಗಮಿಸಿರುವ ಅವರು ಇಂದು ಸಂಜೆ 7 ಗಂಟೆಗೆ ರಾಜಭವನದಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳ ಜೊತೆ ಹೈ ಟೀ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಆಗಮಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ವಿವಿಧ ಕಾರ್ಯಕ್ರಮಗಳ ಬಳಿಕ ಇಂದು ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕರ್ನಾಟಕ ಪ್ರವಾಸಕ್ಕೆ ಆಗಮಿಸಿದ್ದು, ನಾಳೆ ಬಿಳಿಗಿರಿ ರಂಗನ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನಲೆಯಲ್ಲಿ ಬಿಳಿಗಿರಿ ರಂಗನ ಬೆಟ್ಟಕ್ಕೆ ಇಂದು ಮತ್ತು ನಾಳೆ ಭಕ್ತರ ಪ್ರವೇಶ ನಿಷೇಧಿಸಲಾಗಿದೆ.
ಈ ವೇಳೆ ರಾಷ್ಟ್ರಪತಿಗಳು ಚಾಮರಾಜನಗರದಲ್ಲಿ 450 ಬೆಡ್ಗಳ ಆಸ್ಪತ್ರೆಯನ್ನು ಉದ್ಘಾಟನೆ ಮಾಡಲಿದ್ದಾರೆ. ರಾಷ್ಟ್ರಪತಿಗಳು ಆಗಮಿಸುತ್ತಿರುವುದರಿಂದ ಚಾಮರಾಜನಗರ ಮೆಡಿಕಲ್ ಕಾಲೇಜು ಮತ್ತು ಬಿಳಿಗಿರಿ ರಂಗನ ಬೆಟ್ಟ ಸಮೀಪ ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದೆ.
ಚಾಮರಾಜನಗರ ಜಿಲ್ಲಾಡಳಿತ ಅಕ್ಟೋಬರ್ 7ರಂದು ವಡ್ಡಗೆರೆ ಹೆಲಿಪ್ಯಾಡ್, ಬಿಳಿಗಿರಿ ರಂಗನ ಬೆಟ್ಟ, ಚಾಮರಾಜನಗರ ವೈದ್ಯಕೀಯ ಕಾಲೇಜು ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ.
15 ಕಿ. ಮೀ. ವ್ಯಾಪ್ತಿಯಲ್ಲಿ ಮಾನವ ರಹಿತ ಏರ್ ಕ್ರಾಫ್ಟ್ ಬಳಕೆ, ಏರ್ ಬಲೂನ್ ಹಾರಾಟ, ಬ್ಯಾನರ್, ಬಂಟಿಂಗ್ಸ್ ಹಾಕುವಂತಿಲ್ಲ ಎಂದು ಜಿಲ್ಲಾಡಳಿತ ಹೇಳಿದೆ. ರಾಷ್ಟ್ರಪತಿಗಳ ಭದ್ರತಾ ಸಿಬ್ಬಂದಿ ಜಿಲ್ಲಾ ಪೊಲೀಸರಿಗೂ ಹಲವು ಸೂಚನೆಗಳನ್ನು ನೀಡಿದ್ದಾರೆ.
ಬಿಳಿಗಿರಿ ರಂಗನ ಬೆಟ್ಟದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ರಾಷ್ಟ್ರಪತಿಗಳ ಜೊತೆ ಪಾಲ್ಗೊಳ್ಳಲಿದ್ದಾರೆ.
Recommended Video
ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ರಾಜ್ಯ ಪ್ರವಾಸ ಇಂದಿನಿಂದ ಆರಂಭವಾಗಿದ್ದು, ನಾಳೆ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ನಾಳೆ ಬೆಳಗ್ಗೆ 9.30ಗಂಟೆಗೆ ಮೈಸೂರಿಗೆ ರಾಷ್ಟ್ರಪತಿಗಳು ಬೆಂಗಳೂರಿನಿಂದ ತೆರಳಲಿದ್ದಾರೆ.












Click it and Unblock the Notifications