ಇಂದು ಬೆಂಗಳೂರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮನ
Recommended Video

ಬೆಂಗಳೂರು, ಅಕ್ಟೋಬರ್ 24 : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ರಾಷ್ಟ್ರಪತಿಯಾದ ಬಳಿಕ ಮೊದಲ ಬಾರಿಗೆ ಅವರು ಎರಡು ದಿನಗಳ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ.
ಮಂಗಳವಾರ ಮಧ್ಯಾಹ್ನ 3.45ಕ್ಕೆ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮಿಸಲಿದ್ದಾರೆ. ಅಲ್ಲಿಂದ ನೇರವಾಗಿ ರಾಜಭವನಕ್ಕೆ ತೆರಳಲಿದ್ದಾರೆ.

ರಾಜಭವನದಲ್ಲಿ ರಾತ್ರಿ 8 ಗಂಟೆಗೆ ಔತಣಕೂಟ ಏರ್ಪಡಿಸಲಾಗಿದ್ದು ಅದರಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಇಂದು ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ರಾಷ್ಟ್ರಪತಿಗಳ ಭೇಟಿ ಹಿನ್ನಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಬುಧವಾರ ವಿಧಾನಸೌಧದ ವಜ್ರಮಹೋತ್ಸವದ ಅಂಗವಾಗಿ ವಿಶೇಷ ಜಂಟಿ ಅಧಿವೇಶನ ನಡೆಯಲಿದೆ. ರಾಷ್ಟ್ರಪತಿಗಳು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ.
ಬುಧವಾರ ಬೆಳಗ್ಗೆ 11 ಗಂಟೆಗೆ ವಿಧಾನಮಂಡಲ ಜಂಟಿ ಅಧಿವೇಶ ಆರಂಭವಾಗಲಿದ್ದು, ರಾಷ್ಟ್ರಪತಿಗಳು ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಬಳಿಕ ವಿಧಾನ ಪರಿಷತ್ ಸಭಾಂಗಣ ವೀಕ್ಷಿಸಲಿದ್ದಾರೆ. ವಿಧಾನಸೌಧ ಹಾಗೂ ವಿಕಾಸಸೌಧದ ನಡುವಿನ ಗಾಂಧಿ ಪ್ರತಿಮೆ ಮುಂದೆ ಉಭಯ ಸದನಗಳ ಶಾಸಕರು, ರಾಷ್ಟ್ರಪತಿ ಜೊತೆ ಗ್ರೂಪ್ ಫೋಟೊ ತೆಗೆಸಿಕೊಳ್ಳಲಿದ್ದಾರೆ.












Click it and Unblock the Notifications