ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಷ್ಟ್ರಪತಿ ಚುನಾವಣೆ: ಕರ್ನಾಟಕಕ್ಕೆ ಬಂದ ದ್ರೌಪದಿ ಮುರ್ಮು ಸ್ವಾಗತಿಸಿದ ಸಿಎಂ ಬೊಮ್ಮಾಯಿ

|
Google Oneindia Kannada News

ಬೆಂಗಳೂರು, ಜು. 10: ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಭಾನುವಾರ ಕರ್ನಾಟಕಕ್ಕೆ ಆಗಮಿಸಿದ್ದಾರೆ. ಜು. 18 ರಂದು ರಾಷ್ಟ್ರಪತಿ ಚುನಾವಣೆ ಇರುವ ಹಿನ್ನೆಲೆಯಲ್ಲಿ ದ್ರೌಪದಿ ಮುರ್ಮು ಅವರು ಕರ್ನಾಟಕಕ್ಕೆ ಆಗಮಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಬರಮಾಡಿಕೊಂಡರು.

ಜು. 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಜಾರ್ಖಂಡ್‌ನ ಮಾಜಿ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸಿರುವ ದ್ರೌಪದಿ ಮುರ್ಮು ಅವರು ಬುಡಕಟ್ಟು ಸಮುದಾಯಕ್ಕೆ ಸೇರಿದವರು.

ಹಾಲಿ ರಾಷ್ಟ್ರಪತಿ ರಮಾಕಾಂತ್ ಕೋವಿಂದ್ ಅವರ ಅಧಿಕಾರ ಅವಧಿ ಮುಗಿದ ಹಿನ್ನೆಲೆಯಲ್ಲಿ ಮುರ್ಮು ಅವರನ್ನು ಎನ್‌ಡಿಎ ಮೈತ್ರಿ ಕೂಟದ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಯಿತು. ಇದೀಗ ಹಲವು ರಾಜ್ಯಗಳಿಗೆ ಮುರ್ಮು ಅವರು ಭೇಟಿ ನೀಡುತ್ತಿದ್ದು, ಕರ್ನಾಟಕಕ್ಕೆ ಇದೀಗ ಎಂಟ್ರಿ ಕೊಟ್ಟಿದ್ದಾರೆ.

Presidential poll: Draupadi Murmu visits to Karnataka

ಮೈಸೂರು ಪೇಟ ನೀಡಿ ಸನ್ಮಾನ: ಬೆಂಗಳೂರಿನಲ್ಲಿ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ಮಳೆಯಲ್ಲಿಯೇ ದ್ರೌಪದಿ ಮುರ್ಮು ಅವರಿಗೆ ಮೈಸೂರು ಶಾಲು ಹಾಗೂ ಪೇಟ ಧರಿಸಿ ಸನ್ಮಾನಿಸುವ ಮೂಲಕ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಭೈರತಿ ಬಸವರಾಜು ಮತ್ತಿತರರು ಉಪಸ್ಥಿತರಿದ್ದರು.

Presidential poll: Draupadi Murmu visits to Karnataka

ಮಾಜಿ ಪ್ರಧಾನಿ ದೇವೇಗೌಡ ಭೇಟಿ: ಎನ್‌ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರನ್ನು ಭೇಟಿ ಮಾಡಿ ಬೆಂಬಲ ಕೋರಲಿದ್ದಾರೆ ಎಂದು ಹೇಳಲಾಗುತ್ತಿದೆ.

ಬುಡಕಟ್ಟು ಸಮುದಾಯಕ್ಕೆ ಸೇರಿರುವ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದ ಕೂಡಲೇ ದೇವೇಗೌಡರು ಪ್ರತಿಕ್ರಿಯೆ ನೀಡಿದ್ದರು. ರಾಷ್ಟ್ರಪತಿ ಚುನಾವಣೆಗೆ ಬೆಂಬಲ ಕೋರಿ ಮುರ್ಮು ಅವರು ಮಾಜಿ ಪ್ರಧಾನಿಗಳನ್ನು ಭೇಟಿ ಮಾಡಲಿದ್ದಾರೆ.

English summary
Presidential Election 2022: NDA Candidate Draupadi Murmu Visited to Bengaluru know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X