ಚಿಕ್ಕೋಡಿ ಜಿಲ್ಲೆಯಾಗಿ ಘೋಷಿಸುವಂತೆ ಸಿಎಂಗೆ ಮನವಿ

ಬೆಂಗಳೂರು, ಮಾರ್ಚ್ 07: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಕಂದಾಯ ವಿಭಾಗವನ್ನು ಜಿಲ್ಲೆಯಾಗಿ ಘೋಷಿಸುವಂತೆ ಸಂಸದ ಪ್ರಕಾಶ್ ಹುಕ್ಕೇರಿ ನೇತೃತ್ವದಲ್ಲಿ ಮಠಾಧೀಶರನ್ನು ಒಳಗೊಂಡ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.

ಚಿಕ್ಕೋಡಿಗೆ ಜಿಲ್ಲಾ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ವಕೀಲರ ಸಂಘದಿಂದ ಹಿಡಿದು ಮಠಾಧೀಶರು, ಸಂಸದರು ಕೂಡ ಮನವಿ ಮಾಡುತ್ತಿದ್ದಾರೆ. ಅಧಿಕಾರ ವಿಕೇಂದ್ರಿಕರಣದ ಮೂಲಕ ಗಡಿಭಾಗದ ಸಮಗ್ರ ಅಭಿವೃದ್ಧಿಯ ಸದುದ್ದೇಶದೊಂದಿಗೆ ವಿಶಾಲ ಕಾರ್ಯವ್ಯಾಪ್ತಿ ಹೊಂದಿರುವ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹಿಸಿ ಎರಡು ದಶಕಗಳಿಂದಲೂ ಹೋರಾಟ ನಡೆಯುತ್ತಿದೆ.

ಚಿಕ್ಕೋಡಿ ಸ್ವತಂತ್ರ ಶೈಕ್ಷಣಿಕ ಜಿಲ್ಲೆಯಾಗಿದ್ದು, ಆರೋಗ್ಯ, ಅಬಕಾರಿ, ಲೋಕೋಪಯೋಗಿ, ಕಂದಾಯ, ಪಂಚಾಯತ್ ರಾಜ್ ಇಲಾಖೆ, ಸಹಕಾರ ಇಲಾಖೆಯ ಉಪನಿಬಂಧಕರ ಕಚೇರಿ, ಸಾರಿಗೆ ಇಲಾಖೆ, ವಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಭಾಗೀಯ ಕಚೇರಿ, ಪರಿಸರ ಮತ್ತು ನೈಮರ್ಲೀಕರಣ ಮಂಡಳಿ, ಜಿಲ್ಲಾ ನ್ಯಾಯಾಲಯ ಸೇರಿದಂತೆ ಹಲವು ವಿಭಾಗೀಯ ಕಚೇರಿಗಳನ್ನೂ ಹೊಂದಿದೆ. ಆದರೂ, ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ಜಿಲ್ಲಾ ರಚನೆ ವಿಳಂಬವಾಗುತ್ತಿದೆ ಎಂಬ ಅಸಮಾಧಾನ ಜನರಲ್ಲಿದೆ.

Pressure on Siddaramaiah for Chikkodi as new district

ಇದೀಗ ಈ ಅಸಮಧಾನ ಹೋಗಲಾಡಿಸಲು ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಘೋಷಿಸಬೇಕು ಎಂದು ಸಂಸದ ಪ್ರಕಾಶ್ ಹುಕ್ಕೇರಿ ಮನವಿ ಮಾಡಿದ್ದಾರೆ.

ಜಿಲ್ಲೆಯ ಪ್ರತಿನಿಧಿಗಳು ಹಾಗೂ ಮುಖಂಡರು ಸಭೆ ಕರೆದು ಸಮಾಲೋಚಿಸಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+