ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾಜಿ ಪ್ರಧಾನಿ ದೇವೇಗೌಡರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ

|
Google Oneindia Kannada News

Recommended Video

ಮಾಜಿ ಪ್ರಧಾನಿ ದೇವೇಗೌಡರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ | Oneindia Kannada

ಬೆಂಗಳೂರು, ಅಕ್ಟೋಬರ್ 23: ರಾಜ್ಯ ಸರ್ಕಾರದ ಪ್ರತಿಷ್ಠಿತ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರನ್ನು ಆಯ್ಕೆ ಮಾಡಿದೆ.

ಈ ಕುರಿತು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಮಾಜಿ ಪ್ರಧಾನಿ ದೇವೇಗೌಡರಿಗೆ ಪತ್ರ ಬರೆದಿದ್ದು ಅಕ್ಟೋಬರ್ 24ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲು ಆಗಮಿಸುವಂತೆ ಆಹ್ವಾನ ನೀಡಿದ್ದಾರೆ.

Prestigious Maharshi Valmiki award for former PM Devegowda

ಉಪಚುನಾವಣೆ ಬಿಟ್ಟು ಲಂಡನ್‌ಗೆ ಹಾರುತ್ತಿದ್ದಾರೆ ದೇವೇಗೌಡರು ಉಪಚುನಾವಣೆ ಬಿಟ್ಟು ಲಂಡನ್‌ಗೆ ಹಾರುತ್ತಿದ್ದಾರೆ ದೇವೇಗೌಡರು

ಪ್ರಶಸ್ತಿಯು 5ಲಕ್ಷ ನಗದು, ಚಿನ್ನದ ಫಲಕವನ್ನು ಒಳಗೊಂಡಿದೆ. ರಾಜ್ಯ ಸರ್ಕಾರ ನೀಡುವ ಎರಡನೇ ಪ್ರಶಸ್ತಿ ಇದಾಗಿದೆ. ಕಳೆದ ವರ್ಷ ಅಕ್ಟೋಬರ್ 5ರಂದು ಬೆಂಗಳೂರಿನ ವಿಧಾನಸೌಧದ ಮುಂಭಾಗದ ಬೃಹತ್ ಮೆಟ್ಟಿಲು ಮೇಲೆ ನಡೆದ ಸಮಾರಂಭದಲ್ಲಿ ನಡೆದಿತ್ತು.

Prestigious Maharshi Valmiki award for former PM Devegowda

ವ್ಯಕ್ತಿಚಿತ್ರ: ಕರ್ನಾಟಕದ 'ಕಿಂಗ್ ಮೇಕರ್' ದೇವೇಗೌಡವ್ಯಕ್ತಿಚಿತ್ರ: ಕರ್ನಾಟಕದ 'ಕಿಂಗ್ ಮೇಕರ್' ದೇವೇಗೌಡ

ಮಾಜಿ ಸಚಿವ ವೀರಣ್ಣ ಅವರಿಗೆ ನೀಡಲಾಗಿತ್ತು. 2017-18ನೇ ಸಾಲಿನ ಪ್ರಶಸ್ತಿಯನ್ನು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರಿಗೆ ನೀಡಲಾಗುತ್ತಿದೆ. ಶೋಷಿತ ಸಮುದಾಯಗಳ ಏಳಿಗೆಗಾಗಿ ಶ್ರಮಿಸಿರುವ ವ್ಯಕ್ತಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಅಕ್ಟೋಬರ್ 24ರಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

English summary
State government has decided to conferred former prime minister H.D.Devegowda with prestigious Maharishi Valmiki award for his meritorious service to the upliftment of scheduled tribe community.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X