ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರಾಥಮಿಕ-ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ರಿಗೆ ಕೊವಿಡ್-19 ಸೋಂಕು

|
Google Oneindia Kannada News

ಬೆಂಗಳೂರು, ಅಕ್ಟೋಬರ್.05: ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿನ ಅಟ್ಟಹಾಸ ಮಿತಿ ಮೀರುತ್ತಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆ ವೇಳೆ ದೃಢಪಟ್ಟಿದೆ.

ತಮಗೆ ಕೊವಿಡ್-19 ಸೋಂಕು ತಗುಲಿರುವ ಬಗ್ಗೆ ಸ್ವತಃ ಸಚಿವರೇ ಟ್ವಿಟರ್ ಮೂಲಕ ಖಚಿತಪಡಿಸಿದ್ದಾರೆ. ಕೊರೊನಾವೈರಸ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ನಾನು ಇನ್ನು ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಇರುತ್ತೇನೆ" ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಸಂಸದ ಉಮೇಶ್ ಜಾಧವ್‌ಗೆ ಎದೆನೋವು, ಆಸ್ಪತ್ರೆಗೆ ದಾಖಲು ಬಿಜೆಪಿ ಸಂಸದ ಉಮೇಶ್ ಜಾಧವ್‌ಗೆ ಎದೆನೋವು, ಆಸ್ಪತ್ರೆಗೆ ದಾಖಲು

ಇನ್ನು, ಕೊವಿಡ್-19 ಸೋಂಕು ತಗುಲಿರುವ ಬಗ್ಗೆ ವರದಿ ದೃಢಪಟ್ಟಿದ್ದರೂ ಸೋಂಕಿನ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ. ಹೀಗಾಗಿ ಯಾವುದೇ ರೀತಿ ಆತಂಕಪಡುವ ಅಗತ್ಯವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

Primary And Secondary Education Minister Suresh Kumar Tests Positive For Coronavirus

ಸಚಿವರು ಗುಣಮುಖರಾಗಲಿ ಎಂದು ಪ್ರಾರ್ಥನೆ:
"ಸಂಪುಟ ಸಹೋದ್ಯೋಗಿಗಳು, ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಶ್ರೀ ಸುರೇಶ್ ಕುಮಾರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದು ಬೇಸರ ತಂದಿದೆ. ಅವರು ಶೀಘ್ರವಾಗಿ ಗುಣಮುಖರಾಗಿ ತಮ್ಮ ಎಂದಿನ ಕರ್ತವ್ಯಗಳಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಸಚಿವರಿಗೆ ಬೆನ್ನು ಏರಿದ ಕೊವಿಡ್-19:

ಕಳೆದ ವಾರವಷ್ಟೇ ಕೊರೊನಾವೈರಸ್ ಸೋಂಕು ದೃಢಪಟ್ಟ ಹಿನ್ನೆಲೆ ಸಚಿವ ಜೆ.ಸಿ ಮಾಧುಸ್ವಾಮಿ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಅದಕ್ಕೂ ಮೊದಲು ಸಚಿವರ ಕಾರು ಚಾಲಕ ಮತ್ತು ಅಡುಗೆಯವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಖಾತ್ರಿಯಾಗಿತ್ತು. ಇದರ ಬೆನ್ನಲ್ಲೇ ಸಚಿವರಿಗೂ ಸೋಂಕು ತಗುಲಿತ್ತು.

ರಾಜ್ಯದಲ್ಲಿ ಕೊವಿಡ್-19 ಮಹಾಮಾರಿ:

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 640661ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲೇ 10145 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ರಾಜ್ಯದಲ್ಲಿ ಒಂದೇ ದಿನ ಕೊರೊನಾವೈರಸ್ ಸೋಂಕಿಗೆ 67 ಜನರು ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 9286ಕ್ಕೆ ಏರಿಕೆಯಾಗಿದೆ. ಕೊವಿಡ್-19 ಸೋಂಕಿತ ಪ್ರಕರಣ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಕೊರೊನಾವೈರಸ್ ಒಟ್ಟು 640661 ಸೋಂಕಿತ ಪ್ರಕರಣಗಳ ಪೈಕಿ 515782 ಸೋಂಕಿತರು ಗುಣಮುಖರಾಗಿದ್ದಾರೆ. 115574 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ. ಕಳೆದ 24 ಗಂಟೆಗಳಲ್ಲಿ 7287 ಕೊವಿಡ್-19 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

Recommended Video

DKS ಮನೆ ಮೇಲೆ ನಡೆದ ದಾಳಿಯ ಹಿಂದಿದೆಯೇ Congress ಒಳಸಂಚು? | Oneindia Kannada

English summary
Primary And Secondary Education Minister Suresh Kumar Tests Positive For Coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X