ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಿಂದ ಹೊಸ ವರ್ಷ ಶುರು ಮಾಡಿದ್ದಕ್ಕೆ ಮೋದಿ ಕೊಟ್ಟ ಕಾರಣ...

|
Google Oneindia Kannada News

ಬೆಂಗಳೂರು, ಜನವರಿ 3: ಪ್ರಧಾನಿ ನರೇಂದ್ರ ಮೋದಿ ಅವರು 2020 ರ ಹೊಸ ವರ್ಷದ ಕಾರ್ಯಕ್ರಮಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ನಾವಿನ್ಯತೆ ಕಾರ್ಯಕ್ರಮದಿಂದ ಆರಂಭ ಮಾಡಿರುವುದಕ್ಕೆ ಸ್ವತಂ ಮೋದಿ ಅವರೇ ಸಂತಸ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಅವರು ವಿಶೇಷ ಕಾರಣವನ್ನೂ ನೀಡಿದ್ದಾರೆ.

ಟ್ವಿಟ್ಟರ್‌ನಲ್ಲಿ ಟಾಪ್ ಟ್ರೆಂಡ್ ಆಯಿತು #GobackModi ..!ಟ್ವಿಟ್ಟರ್‌ನಲ್ಲಿ ಟಾಪ್ ಟ್ರೆಂಡ್ ಆಯಿತು #GobackModi ..!

ವಿಜ್ಞಾನ ತಂತ್ರಜ್ಞಾನದ ತವರು, ಸಿಲಿಕಾನ್ ಸಿಟಿ ಬೆಂಗಳೂರಿನೊಂದಿಗೆ 2020ರ ಮೊದಲ ಕಾರ್ಯಕ್ರಮವನ್ನು ಆರಂಭ ಮಾಡಿರುವುದಕ್ಕೆ ಬಹಳ ಸಂತೋಷವಾಗುತ್ತಿದೆ ಎಂದು ಮೋದಿ ಸಂತಸ ಹಂಚಿಕೊಂಡಿದ್ದಾರೆ. ಈ ಕುರಿತು ಅವರು ಟ್ವೀಟ್ ಮಾಡಿದ್ದು, 'ಹೊಸ ವರ್ಷ ಮತ್ತು ಹೊಸ ದಶಕದ ಆರಂಭದಲ್ಲಿ ನನ್ನ ಮೊದಲ ಕಾರ್ಯಕ್ರಮಗಳಲ್ಲಿ ಒಂದು ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆಗೆ, ಸಂಬಂಧಿಸಿದೆ ಎಂದು ನನಗೆ ವಿಶೇಷವಾಗಿ ಸಂತೋಷವಾಗಿದೆ. ವಿಜ್ಞಾನ ಮತ್ತು ನಾವೀನ್ಯತೆಗೆ ಸಂಬಂಧಿಸಿರುವ ನಗರವಾದ ಬೆಂಗಳೂರಿನಲ್ಲಿ ಈ ಕಾರ್ಯಕ್ರಮ ನಡೆಯುತ್ತಿರುವುದು ನನ್ನ ಸಂತೋಷವನ್ನು ಇಮ್ಮಡಿಗೊಳಿಸಿದೆ' ಎಂದು ಟ್ವೀಟ್ ಮಾಡಿ ವಿಜ್ಞಾನದಲ್ಲಿ ಬೆಂಗಳೂರ ಎಷ್ಟು ಪ್ರಾಮುಖ್ಯತೆ ಪಡೆದಿದೆ ಎಂಬುದನ್ನು ಎತ್ತಿ ತೋರಿಸಿದ್ದಾರೆ.

Prime Minister Narendra Modi Appreciate To Bengaluru For Science And Technology

ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಭಾರತೀಯ ವಿಜ್ಞಾನ ಕಾಂಗ್ರೆಸ್ ಐದು ದಿನ ಹಮ್ಮಿಕೊಂಡಿರುವ 107 ನೇ ಸಮ್ಮೇಳನಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಚಾಲನೆ ನೀಡಿದರು. ಈ ವೇಳೆ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಂಗಳೂರು ಕೊಡುಗೆಯನ್ನು ಅವರು ವೀಶೇಷವಾಗಿ ಸ್ಮರಿಸಿದರು.

English summary
Prime Minister Narendra Modi Appreciate To Bengaluru For Science And Technology. He twitted.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X