ನವೆಂಬರ್‌ನಲ್ಲಿ ಬೆಂಗಳೂರು ವಿಮಾನ ನಿಲ್ದಾಣದ 2ನೇ ಟರ್ಮಿನಲ್ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಬೆಂಗಳೂರು, ಅಕ್ಟೋಬರ್ 18: ಕೋವಿಡ್ ಕಾರಣದಿಂದ ವಿಳಂಬವಾಗಿದ್ದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್ (T2) ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸುವ ಸಾಧ್ಯತೆ ಇದೆ.

ಬೆಂಗಳೂರಿನ ಹೊರವಲಯ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ)ದ 2ನೇ ಟರ್ಮಿನಲ್ (T2) ಅನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿಕೊಳ್ಳಲಾಗಿದೆ. ಆದರೆ ಈ ಬಗ್ಗೆ ಪ್ರಧಾನಮಂತ್ರಿಗಳ ಕಚೇರಿಯಿಂದ ಯಾವುದೇ ಪ್ರತ್ಯುತ್ತರ ಬಂದಿಲ್ಲ ಎಂದು ಕೆಐಎ ಮೂಲಗಳು ತಿಳಿಸಿವೆ.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್ (T2) ಅನ್ನು ಎರಡು ಹಂತಗಳಲ್ಲಿ ಒಟ್ಟು 13,000 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಇದರಲ್ಲಿ ಮೊದಲ ಹಂತದ ಟರ್ಮಿನಲ್‌ ಅನ್ನು ಪ್ರಧಾನಿಗಳ ಕೈಯಲ್ಲಿ ಉದ್ಘಾಟಿಸಲು ಕೆಐಎ ಚಿಂತನೆ ನಡೆಸಿದೆ. ಎರಡನೇ ಹಂತದ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Prime Minister Narendra Modi will likely to inaugurate Bengaluru KIA 2nd terminal soon

ಅಲ್ಲದೇ ಈಗಾಗಲೇ ನವೆಂಬರ್ ಎರಡನೇ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ದೇವನಹಳ್ಳಿಗೆ ಆಗಮಿಸಲಿದ್ದಾರೆ. ಅಂದು ನಾಡಪ್ರಭು ಕೆಂಪೇಗೌಡರ ಕಂಚಿನ ಬೃಹತ್ ಪ್ರತಿಮೆ ಹಾಗೂ ಥೀಮ್ ಪಾರ್ಕ್ ಅನ್ನು ಅವರು ಉದ್ಘಾಟಿಸಲಿದ್ದಾರೆ. ಆದರೆ T2 ಉದ್ಘಾಟನೆ ಸಂಬಂಧ ಯಾವುದು ಇನ್ನು ಅಂತಿಮವಾಗಿಲ್ಲ.

25 ಮಿಲಿಯನ್ ಪ್ರಯಾಣಿಕರ ಸಾಮರ್ಥ್ಯದ ಟಿ2

ಮೊದಲ ಹಂತವು ಟರ್ಮಿನಲ್‌ ವಾರ್ಷಿಕವಾಗಿ 25 ಮಿಲಿಯನ್ ಪ್ರಯಾಣಿಕರ ಸಾಮರ್ಥ್ಯವನ್ನು ಹೊಂದಿದೆ. ಎರಡನೇ ಹಂತ ಟರ್ಮಿನಲ್ ವರ್ಷಕ್ಕೆ 20 ಮಿಲಿಯನ್ ಪ್ರಯಾಣಿಕರ ಸಾಮರ್ಥ್ಯವನ್ನು ಒಳಗೊಳ್ಳುವಂತೆ ನಿರ್ಮಿಸಲಾಗಿದೆ. ಈ ಟರ್ಮಿನಲ್ ಕಾಮಗಾರಿ 2018ರಲ್ಲಿ ಪ್ರಾರಂಭವಾಯಿತು. ಆದರೆ ಕೋವಿಡ್ ಕಾರಣದಿಂದ ಹಲವು ಬಾರಿ ಗಡುವು ಪಡೆದರೂ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಇದೀಗ ಟರ್ಮಿನಲ್‌ನ ಮೊದಲ ಹಂತ ಬಹುತೇಕ ಪೂರ್ಣಗೊಂಡಿದ್ದು, ಉದ್ಘಾಟನೆಗೆ ಸಿದ್ಧವಾಗಿದೆ.

ಕರ್ನಾಟಕ ಸರ್ಕಾರವು ಬೆಂಗಳೂರಿನ ಸಂಸ್ಥಾಪಕ ನಾಡಪ್ರಭು ಕೆಂಪೇಗೌಡರ ಸ್ಮರಣಾರ್ಥ ಸಮರ್ಪಿತವಾದ ವಿಮಾನ ನಿಲ್ದಾಣದ ಆವರಣದಲ್ಲಿ ವಿಶಾಲ ಪ್ರದೇಶದಲ್ಲಿ ಬೃಹತ್ ಥಿಮ್ ಪಾರ್ಕ್ ನಿರ್ಮಿಸುತ್ತಿದೆ. ಅದರ ಸಮೀಪವೇ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಬೃಹತ್ ಪ್ರತಿಮೆ ನಿರ್ಮಿಸಿದ್ದು, ಅದನ್ನ ನವೆಂಬರ್ 11ರಂದು ಉದ್ಘಾಟಿಸಲು ಪ್ರಧಾನಿಗಳನ್ನು ಆಹ್ವಾನಿಸಲಾಗಿದೆ.

ಮೂಲಗಳ ಪ್ರಕಾರ ಒಟ್ಟು ಅಂದಾಜು 85 ಕೋಟಿ ವೆಚ್ಚದಲ್ಲಿ ಹೆರಿಟೇಜ್ ಪಾರ್ಕ್ (ಥೀಮ್ ಪಾರ್ಕ್) ನಿರ್ಮಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+