ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಕೈದಿ ಸಾವಿಗೆ ಕಾರಣ ಬಹಿರಂಗ

|
Google Oneindia Kannada News

ಬೆಂಗಳೂರು, ಮೇ 20: ಇತ್ತೀಚೆಗಷ್ಟೇ ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಕೈದಿ ಮೃತಪಟ್ಟಿದ್ದರು. ಆದರೆ ಸಾವಿಗೆ ಕಾರಣ ಏನೆಂಬುದು ಬಹಿರಂಗವಾಗಿರಲಿಲ್ಲ. ಆತ ಹಲ್ಲೆಗೊಳಗಾಗಿ ಮೃತಪಟ್ಟಿದ್ದಾನೆ ಎಂಬುದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ದೃಢಪಟ್ಟಿದೆ.

ಈ ಕುರಿತು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಜೈಲು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಯಿ, ತಂಗಿಗೆ ಇಂಜೆಕ್ಷನ್‌ ಕೊಟ್ಟು ಕೊಲೆ ಮಾಡಿ, ಆತ್ಮಹತ್ಯೆಗೆ ಯತ್ನಿಸಿದ ವೈದ್ಯ ತಾಯಿ, ತಂಗಿಗೆ ಇಂಜೆಕ್ಷನ್‌ ಕೊಟ್ಟು ಕೊಲೆ ಮಾಡಿ, ಆತ್ಮಹತ್ಯೆಗೆ ಯತ್ನಿಸಿದ ವೈದ್ಯ

ಹೋಟೆಲ್ ಉದ್ಯೋಗಿಯಾಗಿದ್ದ ಡಿಜೆ ಹಳ್ಳಿ ನಿವಾಸಿ ಫಿರೋಜ್ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಜನವರಿ 9ರಂದು ಡಿಜೆ ಹಳ್ಳಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ.

prisoner was dies after inmates attack in Parappana Agrahara

ಬಲ ಬದಿಯ ಯಕೃತ್ತಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಕಾಯಿಲೆಯಿಂದ ಬಳಲುತ್ತಿದ್ದ ಫಿರೋಜ್ಗೆ ಜೈಲು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆರೋಗ್ಯ ಬಿಗಡಾಯಿಸಿದಾಗ ಫೈರೋಜ್ ರನ್ನು ಜೈಲು ಆಸ್ಪತ್ರೆ ವೈದ್ಯರ ಸೂಚನೆ ಮೇರೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು ಸಂಜೆ ವೇಳೆಗೆ ಆತ ಮೃತಪಟ್ಟಿದ್ದ, ಆತನ ಸಾವಿಗೆ ಜೈಲು ಸಿಬ್ಬಂದಿಯೇ ಕಾರಣ ಎಂದು ಆರೋಪಿಸಲಾಗಿತ್ತು. ಫೈರೋಜ್ ಮೇಲೆ ಹಲ್ಲೆಯಾಗಿತ್ತು ಎಂದು ಮರಣೋತ್ತರ ಪರೀಕ್ಷೆ ಬಳಿಕ ವೈದ್ಯರು ತಿಳಿಸಿದ್ದಾರೆ.ಈಗ ಜೈಲು ಅಧಿಕಾರಿಗಳು ಹಾಗೂ ಸಿಬ್ಬಂದಿಯ ಮೇಲೆ ಕೊಲೆ ಆರೋಪ ಕೇಳಿಬಂದಿದೆ.

English summary
Prisoner Firoz died after his inmate attacked in prison. There is a allegation that he was drug supplier too.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X