ಖಾಸಗಿ ಬಸ್‌, ಆಟೋ, ಟ್ಯಾಕ್ಸಿ ಚಾಲಕರ ಮುಷ್ಕರ ವಾಪಸ್‌: ಫಲಿಸಿದ ಸಾರಿಗೆ ಸಚಿವರ ಸಂಧಾನ

ಬೆಂಗಳೂರು, ಜುಲೈ 24: ಬೆಂಗಳೂರಿನ ಶಾಂತಿನಗರದ ಸಾರಿಗೆ ಇಲಾಖೆ ಕೇಂದ್ರ ಕಚೇರಿಯಲ್ಲಿ ನಡೆದ ಸಾರಿಗೆ ಸಚಿವ ಸಚಿವ ರಾಮಲಿಂಗ ‌ರೆಡ್ಡಿ ಅವರ ಜೊತೆ ಖಾಸಗಿ ಸಾರಿಗೆ ಒಕ್ಕಟದ ಸಭೆಯ ಬಳಿಕ ಜುಲೈ 27ರಂದು ಕರೆ ನೀಡಿದ್ದ ಖಾಸಗಿ ಬಸ್ಸುಗಳು, ಆಟೋ ಮತ್ತು ಟ್ಯಾಕ್ಸಿ ಬಂದ್ ವಾಪಸ್ಸು ಪಡೆಯಲಾಗಿದೆ.

ಸಭೆ ಬಳಿಕ ಮಾತನಾಡಿದ ಒಕ್ಕೂಟ ಮುಖಂಡ ನಟರಾಜ ಶರ್ಮ, ನಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಈ ಬಗ್ಗೆ ಸರ್ಕಾರ ಕೂಡ ಸೂಕ್ತ ರೀತಿಯಲ್ಲಿ ನಡೆದುಕೊಳ್ಳವುದಾಗಿ ಹೇಳಿರುವ ಹಿನ್ನೆಲೆಯಲ್ಲಿ ಜುಲೈ 27 ರಂದು ಕರೆ ನೀಡಿದ್ದ ಖಾಸಗಿ ಬಸ್ಸುಗಳು, ಆಟೋ ಮತ್ತು ಟ್ಯಾಕ್ಸಿ ಬಂದ್ ವಾಪಸ್ಸು ಪಡೆಯಲಾಗಿದೆ. ಇದೇ ವೇಳೆ ಸರ್ಕಾರಕ್ಕೆ ಆಗಸ್ಟ್‌ 10 ತನಕ ಡೆಡ್‌ ಲೈನ್ ನೀಡಲಾಗಿದೆ. ಅಧಿಕಾರಿಗಳ ವರದಿ ಆಧಾರಿಸಿ ಮುಂದಿನ ಕ್ರಮವನ್ನು ಕೈಗೊಳ್ಳಲಾಗುವುದು ಎಂದುಸಚಿವರು ನೀಡಿದ್ದಾರೆ ಎಂದು ಅವರು ಹೇಳಿದರು.

private bus, auto, taxi drivers strike Return: Transport Ministers meeting resulted

ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆ ಜಾರಿ ನಂತರ ಖಾಸಗಿ ಬಸ್, ಆಟೋ ಟ್ಯಾಕ್ಸಿ ಮಾಲೀಕರಿಗೆ ಭಾರೀ ಹೊಡೆತ ನೀಡಿದೆ. ಹೀಗಾಗಿ ಯೋಜನೆ ಸ್ಥಗಿತಕ್ಕೆ ಖಾಸಗಿ ಸಾರಿಗೆ ಒಕ್ಕೂಟ ಆಗ್ರಹಿಸುತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಆಟೋ ಚಾಲಕರ ಸಮಸ್ಯೆ ಬೇರೆ ಇದೆ, ಟ್ಯಾಕ್ಸಿ ಸಮಸ್ಯೆಯೂ ಇದೆ. ಶಕ್ತಿಯೋಜನೆ ಕುರಿತು ನಾನೊಬ್ಬನೆ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಬೇಕು ಎಂದರು.

ಸಭೆಯಲ್ಲಿ ರ‍್ಯಾಪಿಡೋ ಸೇವೆ ಸ್ಥಗಿತಕ್ಕೆ ಒಕ್ಕೂಟವು ಮನವಿ ಮಾಡಿತ್ತು. ಈ ಬಗ್ಗೆ ಭರವಸೆ ನೀಡಿದ ರಾಮಲಿಂಗಾರೆಡ್ಡಿ, ರ್ಯಾಪಿಡೋ ಬೈಕ್ ಟ್ಯಾಕ್ಸಿಗೆ ನಿರ್ಬಂಧ ಹೇರುವುದು ನನ್ನ ಜವಾಬ್ದಾರಿ. ರ‍್ಯಾಪಿಡೋ ಬೈಕ್ ಟ್ಯಾಕ್ಸಿಯನ್ನು ಖಂಡಿತಾ ನಿಷೇಧ ಮಾಡುತ್ತೇವೆ ಎಂದರು.

ಇದೇ ವೇಳೆ ಅವರು 50,000 ಓಲಾ, ಉಬರ್ ಕ್ಯಾಬ್​ಗಳ ಪೈಕಿ 25,000 ಕ್ಯಾಬ್​ ಕಪ್ಪು ಪಟ್ಟಿಗೆ ಸೇರಿವೆ. ಕಪ್ಪುಪಟ್ಟಿಗೆ ಸೇರಿಸಿರುವ ಚಾಲಕರ ಪಟ್ಟಿ ಕೈಬಿಡುವಂತೆ ಸಚಿವರಿಗೆ ಮನವಿ ಮಾಡಿಕೊಳ್ಳಲಾಗಿದ್ದು, ಈ ಬಗ್ಗೆ ಕೂಡ ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಇದಲ್ಲದೇ ಚಾಲಕರ ನಿಗಮ ಮಾಡಲು ಮನವಿ ಮಾಡಲಾಗಿದ್ದು, ಚಾಲಕರ ಅಂಕಿ ಅಂಶ ಒಂದೇ ಸ್ಥಳದಲ್ಲಿ ಸಿಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗ ‌ರೆಡ್ಡಿ ಅವರು ಚಾಲಕರಿಗೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+