ಬೆಂಗಳೂರಿನಲ್ಲಿ ಹೊತ್ತಿ ಉರಿದ 40 ಮಂದಿ ಪ್ರಯಾಣಿಕರಿದ್ದ ಖಾಸಗಿ ಬಸ್

ಬೆಂಗಳೂರು, ಮೇ 9: 40 ಮಂದಿ ಪ್ರಯಾಣಿಸುತ್ತಿದ್ದ ಖಾಸಗಿ ಬಸ್‌ ಹೊತ್ತಿ ಉರಿದು ಅದೃಷ್ಟವಶಾತ್ ಪ್ರಯಾಣಿಕರು ಪಾರಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬಸ್ ಹೋಗುತ್ತಿರುವಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕನ ಸಮಯಪ್ರಜ್ಞೆಯಿಂದ ನಲವತ್ತು ಮಂದಿ ಜೀವ ಉಳಿದಿದೆ.ಶರ್ಮಾ ಟ್ರಾವೆಲ್ಸ್ ಬಸ್ ಬೆಂಕಿಗಾಹುತಿಯಾಗಿದೆ.

ಬೆಳಗಿನ ಜಾವ ಸುಮಾರು 4 ಗಂಟೆಗೆ ಕರ್ನಾಟಕ - ತಮಿಳುನಾಡು ಗಡಿ ಶೂಲಗಿರಿ ಸಮೀಪ ಬಸ್ಸಿನ ಹಿಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಸ್ ಎಂಜಿನ್ ಬಳಿ ಬೆಂಕಿ ಕಾಣಿಸಿಕೊಂಡ ಕೂಡಲೇ ಇದನ್ನು ಅಕ್ಕಪಕ್ಕದ ವಾಹನ ಸವಾರರು ನೋಡಿದ್ದು, ತಕ್ಷಣ ಬಸ್ ಚಾಲಕನಿಗೆ ತಿಳಿಸಿದ್ದಾರೆ.

Private Bus catches fire and all passengers are safe

ಕೂಡಲೇ ಪ್ರಯಾಣಿಕರನ್ನು ಚಾಲಕ ಬಸ್ಸಿನಿಂದ ಕೆಳಗಿಳಿಸಿದ್ದಾನೆ. ಈ ಮೂಲಕ ಚಾಲಕನ ಸಮಯ ಪ್ರಜ್ಞೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಬಸ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.

ಸ್ಥಳಕ್ಕೆ ಅಗನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಲಗೇಜು ಇನ್ನಿತರೆ ವಸ್ತುಗಳು ಬೆಂಕಿಗಾಹುತಿಯಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+