ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಸರಾ ಹಬ್ಬ: ಪ್ರಯಾಣಿಕರಿಂದ ಹೆಚ್ಚು ಹಣ ವಸೂಲಿ ಮಾಡಿದರೆ ಪರ್ಮಿಟ್ ರದ್ದು: ಶ್ರೀರಾಮುಲು ಎಚ್ಚರಿಕೆ

|
Google Oneindia Kannada News

ಬೆಂಗಳೂರು, ಸೆಪ್ಟಂಬರ್ 30: ''ದಸರಾ ಹಬ್ಬದ ಸಂದರ್ಭದಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಕಡೆಗಳಿಂದ ತಮ್ಮ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಖಾಸಗಿ ಬಸ್ ಮಾಲೀಕರು ನಿಗದಿತ ದರ ಮಾತ್ರವೇ ಪಡೆಯಬೇಕು. ಇಲ್ಲವಾದರೆ ಪರ್ಮಿಟ್ ತಕ್ಷಣದಿಂದಲೇ ರದ್ದು ಪಡಿಸುತ್ತೇವೆ'' ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.

ಶುಕ್ರವಾರ ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಚಿವ ಶ್ರೀರಾಮುಲು ಅವರು, ಸಾರ್ವಜನಿಕರಿಂದ ಹೆಚ್ಚಿನ ದೂರುಗಳು ಬಂದ ಹಿನ್ನಲೆಯಲ್ಲಿ ದರ ಹೆಚ್ಚು ಮಾಡುವ ಖಾಸಗಿ ಬಸ್‍ಗಳ ವಿರುದ್ಧ ಕಾರ್ಯಾಚರಣೆ ನಡೆಸಲು ಸಾರಿಗೆ ಇಲಾಖೆ ಅಧಿಕಾರಿಗಳ ಹತ್ತು ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿದೆ. ರಾಜ್ಯಾದ್ಯಂತ ಈ ತಂಡ ತಪಾಸಣೆ ಕಾರ್ಯಚರಣೆ ನಡೆಸಲಿದೆ.ಇದರಲ್ಲಿ ಯಾವುದೇ ಕಾರಣಕ್ಕೂ ರಾಜೀ ಇಲ್ಲ ಎಂದು ತಿಳಿಸಿದ್ದಾರೆ.

ದಸರಾ ಹಬ್ಬ: 2,000 ವಿಶೇಷ KSRTC ಬಸ್‌ ನಿಯೋಜನೆ, ಟಿಕೆಟ್ ಬುಕ್ಕಿಂಗ್‌ನಲ್ಲಿ ಶೇ.5-10 ರಿಯಾಯಿತಿ!ದಸರಾ ಹಬ್ಬ: 2,000 ವಿಶೇಷ KSRTC ಬಸ್‌ ನಿಯೋಜನೆ, ಟಿಕೆಟ್ ಬುಕ್ಕಿಂಗ್‌ನಲ್ಲಿ ಶೇ.5-10 ರಿಯಾಯಿತಿ!

ಒಂದು ವೇಳೆ ಹೆಚ್ಚು ಟಿಕೆಟ್ ದರ ಕೇಳಿದರೆ ಪ್ರಯಾಣಿಕರು ಸಹಾಯವಾಣಿಗೆ ಕರೆ ಮಾಡಿ ಬಸ್ ನಂಬರ್, ಮಾರ್ಗ ತಿಳಿಸಿ ದೂರು ನೀಡಿದರೆ ಕ್ರಮ ತೆಗೆದುಕೊಳ್ಳಲಾಗುವುದು. ಇದಕ್ಕಾಗಿ ಸಾರಿಗೆ ಇಲಾಖೆಯು ಸಹಾಯವಾಣಿ ಆರಂಭಿಸಿದ್ದು ಪ್ರಯಾಣಿಕರು (94498 63429/ 94498 63426) ಈ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಸಚಿವರು ಪ್ರಯಾಣಿಕರಲ್ಲಿ ಮನವಿ ಮಾಡಿದರು.

ಬೆಂಗಳೂರಿನಲ್ಲೇ ಅಧಿಕ ದೂರುಗಳು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ದೂರುಗಳು ಹೆಚ್ಚಾಗಿ ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರಿಂದ ಹಬ್ಬದ ನೆಪಮಾಡಿಕೊಂಡು ಬೇಕಾಬಿಟ್ಟಿ ಪ್ರಯಾಣದ ದರ ವಸೂಲಿಗೆ ಕಡಿವಾಣ ಹಾಕಲು ವಿಶೇಷ ತಂಡಗಳನ್ನು ನಿಯೋಜಿಸಲಾಗಿದೆ. ಈ ತಂಡದ ಸದಸ್ಯರು ಕಲಾಸಿಪಾಳ್ಯ ಬಸ್ ನಿಲ್ದಾಣ, ಮೆಜೆಸ್ಟಿಕ್ ಮತ್ತು ಸುತ್ತಲಿನ ಪ್ರದೇಶ, ಶಾಂತಿನಗರ, ಮೈಸೂರು ರಸ್ತೆ ಸೇರಿದಂತೆ ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸಲಿದ್ದಾರೆ ಎಂದು ಅವರು ವಿವರಿಸಿದರು.

ದಸರಾ ಹಬ್ಬ: ಖಾಸಗಿ ಬಸ್‌ಗಳಿಂದ ಪ್ರಯಾಣಿಕರಿಗೆ ಶಾಕ್: ಎಷ್ಟೇಷ್ಟು ಹಣ ವಸೂಲಿ? ಇಲ್ಲಿದೆ ಮಾಹಿತಿದಸರಾ ಹಬ್ಬ: ಖಾಸಗಿ ಬಸ್‌ಗಳಿಂದ ಪ್ರಯಾಣಿಕರಿಗೆ ಶಾಕ್: ಎಷ್ಟೇಷ್ಟು ಹಣ ವಸೂಲಿ? ಇಲ್ಲಿದೆ ಮಾಹಿತಿ

ನಿಯಮ ಉಲ್ಲಂಘನೆ ಬಗ್ಗೆ ಅಧಿಕಾರಿಗಳ ತಪಾಸಣೆ

ನಿಯಮ ಉಲ್ಲಂಘನೆ ಬಗ್ಗೆ ಅಧಿಕಾರಿಗಳ ತಪಾಸಣೆ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡಿರುವ ಮಾರ್ಗಸೂಚಿಯಂತೆ ಮೋಟಾರು ವಾಹನ ಕಾಯ್ದೆ ಮತ್ತು ನಿಯಮಗಳ ಉಲ್ಲಂಘನೆ ಕುರಿತು ತಪಾಸಣೆ ನಡೆಸುವಂತೆ ಸೂಚಿಸಲಾಗಿದೆ. ಆಯಾ ರೂಟ್‌‍ಗಳಲ್ಲಿ ನಿಗದಿತ ದರವನ್ನಷ್ಟೇ ಪಡೆಯಬೇಕು ಎಂದು ಖಾಸಗಿ ಬಸ್ ಮಾಲೀಕರಿಗೆ ಸೂಚನೆ ನೀಡಿದ್ದಾರೆ. ಪ್ರಯಾಣಿಕರ ರಕ್ಷಣೆ ನಮ್ಮ ಇಲಾಖೆಯ ಮೊದಲ ಆದ್ಯತೆ. ಕಿರಿಕಿರಿ ಉಂಟು ಮಾಡುವುದು, ಇಲ್ಲವೇ ತೊಂದರೆ ಕೊಟ್ಟು ಹೆಚ್ಚಿನ ದರ ವಸೂಲಿ ಮಾಡಿದರೆ ಸಹಿಸುವುದಿಲ್ಲ. ಹಾಗೊಂದು ವೇಳೆ ನನ್ನ ಗಮನಕ್ಕೆ ಬಂದರೆ ಅಂತಹ ಬಸ್ ಮಾಲಕರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಚಿವರು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಹೆಚ್ಚಿನ ಹಣಕ್ಕೆ ಪೀಡಿಸಿದರೆ ಕಾನೂನು ಕ್ರಮ

ಹೆಚ್ಚಿನ ಹಣಕ್ಕೆ ಪೀಡಿಸಿದರೆ ಕಾನೂನು ಕ್ರಮ

ಖಾಸಗಿ ಬಸ್ ಮಾಲೀಕರು ಪ್ರಯಾಣಿಕರಿಗೆ ತೊಂದರೆ ಕೊಡದೆ, ಯಾವ ಯಾವ ರೂಟ್‌ಗಳಿಗೆ ಎಷ್ಟು ದರ ನಿಗದಪಡಿಸಿದೆಯೋ ಅಷ್ಟು ಹಣವನ್ನು ಮಾತ್ರ ತೆಗೆದುಕೊಳ್ಳಬೇಕು. ಅದನ್ನು ಬಿಟ್ಟು ಹೆಚ್ಚಿನ ಹಣ ವಸೂಲಿ ಮಾಡಿದರೆ, ಇಲ್ಲವೇ ಹೆಚ್ಚಿನ ಹಣ ನೀಡುವಂತೆ ಪ್ರಯಾಣಿಕರನ್ನು ಪೀಡಿಸಿದರೆ ಅಂತಹ ಖಾಸಗಿ ಬಸ್‌ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸುವುದು ಅನಿವಾರ್ಯವಾಗುತ್ತದೆ ಎಂದು ತಿಳಿಸಿದ್ದಾರೆ.

ಪ್ರತಿ ಹಬ್ಬದ ವೇಳೆ ದುಪ್ಪಟ್ಟು ದರ ವಸೂಲಿ

ಪ್ರತಿ ಹಬ್ಬದ ವೇಳೆ ದುಪ್ಪಟ್ಟು ದರ ವಸೂಲಿ

ಪ್ರಯಾಣಿಕರಿಂದ ಪ್ರತಿ ಭಾರಿ ಹಬ್ಬದ ಸನ್ನಿವೇಶದಲ್ಲೂ ಸಹ ಖಾಸಗಿ ಬಸ್‌ಗಳ ದುಪ್ಪಟ್ಟು ದರ ವಸೂಲಿ ಹಾವಳಿ ಕಂಡು ಬರುತ್ತದೆ. ಅದರಲ್ಲೂ ಬೆಂಗಳೂರಿನಿಂದ ಬೆಳಗಾವಿ, ರಾಯಚೂರು, ಕಲಬುರಗಿ, ಹಾವೇರಿ, ಮಂಗಳೂರು, ಶಿವಮೊಗ್ಗ ಸೇರಿದಂತೆ ಹೊರಾ ರಾಜ್ಯಗಳಾದ ಕೇರಳ, ತಮಿಳುನಾಡು ಭಾಗಕ್ಕೂ ಹೋಗುವವರಿಂದ ಅಧಿಕ ದರ ವಸೂಲಿ ಮಾಡಲಾಗುತ್ತದೆ.

ಜನರು ಹಬ್ಬದ ವೇಳೆ ಸರ್ಕಾರಿ ಸ್ವಾಮ್ಯದ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಸೀಟುಗಳು ಕಾಯ್ದಿರಿಸುತ್ತಾರೆ. ಹೀಗಾಗಿ ಬಹುಬೇಗ ಸರ್ಕಾರಿ ಬಸ್‌ಗಳು ಭರ್ತಿಯಾಗುತ್ತವೆ. ಈ ವೇಳೆ ಅನಿವಾರ್ಯವಾಗಿ ಖಾಸಗಿ ಬಸ್‌ಗಳನ್ನು ಅವಲಂಬಿಸಬೇಕಾಗುತ್ತದೆ. ಈ ಪರಿಸ್ಥಿತಿಯನ್ನೇ ವರ್ಷಗಳಿಂದಲೂ ಖಾಸಗಿ ಬಸ್‌ ಮಾಲೀಕರು ಬಂಡವಾಳ ಮಾಡಿಕೊಂಡಿದ್ದಾರೆ. ಆಗಾಗ ಸರ್ಕಾರ ಈ ಕುರಿತು ಕ್ರಮ ಕೈಗೊಳ್ಳುವುದಾಗಿ ಹೇಳುತ್ತಲೇ ಬಂದಿವೆ. ಆದರೂ ದುಪ್ಪಟ್ಟು ಹಣ ವಸೂಲಿ ನಿಂತಿಲ್ಲ ಎನ್ನುತ್ತಾರೆ ಪ್ರಯಾಣಿಕರು.

English summary
Private Bus Permit canceled if passengers are charged too much warned by Karnataka Transport minister B Sriramulu.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X