ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟಿನ್ ಸ್ಥಾಪನೆಗೆ ಮನವಿ
ಬೆಂಗಳೂರು, ಜುಲೈ 28: ಬೆಂಗಳೂರು ಏರ್‌ಪೋರ್ಟ್ ಟ್ಯಾಕ್ಸಿ ಚಾಲಕರಿಗೆ ಅನುಕೂಲವಾಗುವಂತೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 'ಇಂದಿರಾ ಕ್ಯಾಂಟೀನ್' ತೆರಲು ಬಿಬಿಎಂಪಿ ಚಿಂತನೆ ಆರಂಭಿಸಿದೆ. ಈ ಸಂಬಂಧ ಈಗಾಗಲೇ ಖಾಸಗಿ ಕ್ಯಾಬ್ ಚಾಲಕರ ಯೂನಿಯನ್ ಮುಖ್ಯಸ್ಥರು ಮನವಿ ಮಾಡಿದ್ದಾರೆ.
ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA)ದಲ್ಲಿ ಊಟ-ತಿಂಡಿ ಸಿಗತ್ತದೆಯಾದರೂ ಎಂದರೂ ಅದು ಬಲು ದುಬಾರಿಯಾಗಿದೆ. ಅಷ್ಟು ಹಣ ಕೊಟ್ಟು ಪ್ರತಿ ದಿವಸ ಊಟ ಮಾಡಲು ಆಗದು. ಈ ಕಾರಣದಿಂದ ನಮಗಾಗಿ ವಿಮಾನ ನಿಲ್ದಾಣದ ಹೊರಗೆ ಇಂದಿರಾ ಕ್ಯಾಂಟೀನ್ ತೆರೆಯುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಲ್ಲಿ ಸೋಮವಾರ ಮನವಿ ಮಾಡಿದ್ದರು. ಅದರ ಬೆನ್ನಲ್ಲೆ ಬಿಬಿಎಂಪಿಯು ಇಂತದ್ದೊಂದು ಚಿಂತನೆ ಆರಂಭಿಸಿದೆ.

ಮನವಿ ಸ್ವೀಕರಿಸಿದ ಸಚಿವ ರಾಮಲಿಂಗಾ ರೆಡ್ಡಿ ಅವರು, ವಿಮಾನ ನಿಲ್ದಾಣದ ಹೊರಗೆ ಒಂದು ಅಥವಾ ಎರಡು ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪಿಸಲು ಅಗತ್ಯ ಕ್ರಮ ವಹಿಸುವಂತೆ ಪಾಲಿಕೆ ಮುಖ್ಯ ಆಯುಕ್ತರಿಗೆ ಪತ್ರ ಬರೆಯುವುದಾಗಿ ಖಾಸಗಿ ಕ್ಯಾಬ್ ಯೂನಿಯನ್ ಸದಸ್ಯರಿಗೆ ಭರವಸೆ ನೀಡಿದರು.
ಕ್ಯಾಬ್ ಚಾಲಕರ ಜತೆ ಬಡವರಿಗೂ ಅನುಕೂಲ
ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಇಂದಿರಾ ಕ್ಯಾಂಟೀನ್ ತೆರೆದಿದ್ದೇ ಆದಲ್ಲಿ ಕ್ಯಾಬ್ ಚಾಲಕರು ಮಾತ್ರವಲ್ಲದೇ ಇನ್ನಿತರ ಬಡವರಿಗೂ ಅನುಕೂಲವಾಗಲಿದೆ. ಅವರೆಲ್ಲರನ್ನು ಗಮನದಲ್ಲಿಟ್ಟುಕೊಂಡು ಇಂದಿರಾ ಕ್ಯಾಂಟೀನ್‌ಗಳ ಮೂಲಕ ಕೈಗೆಟಕುವ ದರದಲ್ಲಿ ಊಟ ತಿಂಡಿ ಒದಗಿಸಲು ಶ್ರಮಿಸಲಾಗುವುದು. ಇದರ ಭಾಗವಾಗಿ ಇಂದಿರಾ ಕ್ಯಾಂಟೀನ್‌ಗಳ ಸ್ಥಾಪನೆಗೆ ಸ್ಥಳಾವಕಾಶ ಮೀಸಲಿಡುವಂತೆ ಬಿಬಿಎಂಪಿ ಮೂಲಕ ವಿಮಾನ ನಿಲ್ದಾಣದ ಅಧಿಕಾರಿಗಳಿಗೂ ಮನವಿ ಮಾಡುತ್ತೇನೆ ಎಂದು ಸಚಿವರು ಹೇಳಿದರು.

ಇದೇ ವಿಚಾರವಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಪ್ರತಿಕ್ರಿಯಿಸಿದ್ದು, ವಿಮಾನ ನಿಲ್ದಾಣವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬಾರದು. ಹೀಗಿದ್ದರೂ ಸಹ ಹೆಚ್ಚಿನ ಸಂಖ್ಯೆಯ ಜನರಿಗೆ ಅಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪಿಸಿದರೆ ಪ್ರಯೋಜನ ಆಗುತ್ತದೆ ಎಂದರೆ, ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಲಾಗುವುದು ಎಂದು ಅವರು ಸಹಮತ ವ್ಯಕ್ತಪಡಿಸಿದರು.
ಕೆಲವು ಆಸ್ಪತ್ರೆಗಳ ಆವರಣ ಇಂದಿರಾ ಕ್ಯಾಂಟೀನ್?
ಸದ್ಯಕ್ಕಿರುವ ಹಾಲಿ ನಿಯಮಗಳ ಪ್ರಕಾರ ಇಂದಿರಾ ಕ್ಯಾಂಟೀನ್‌ಗಳನ್ನು ಬಿಬಿಎಂಪಿ ಮಾತ್ರ ತೆರೆಯಬಹುದಾಗಿದೆ. ಆದರೆ ವಿಮಾನ ನಿಲ್ದಾಣದ ಮಿತಿಯಲ್ಲಿ ಇದನ್ನು ತೆರೆಯಲು ಬರುತ್ತದೋ ಇಲ್ಲವೋ ಎಂಬುದರ ಚರ್ಚೆ ನಡೆದ ಬಳಿಕ ಅಂತಿಮ ನಿರ್ಧಾರ ತಿಳಿಯಲಿದೆ.
ಸರ್ಕಾರ ಹಿಂದಿನಿಂದಲೂ ಸಹ ಹೆಚ್ಚೆಚ್ಚು ಜನ ಸೇರುವ ಸ್ಥಳಗಳಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಅವಕಾಶ ಇದೆ. ಈಗಾಗಲೇ ಸರ್ಕಾರ ಹೆಚ್ಚು ಜನ ಬಂದು ಹೋಗುವ ಕೆಲವು ಆಸ್ಪತ್ರೆಗಳ ಆವರಣದಲ್ಲೂ ಕ್ಯಾಂಟೀನ್ ಸ್ಥಾಪನೆಗೆ ಚಿಂತನೆ ನಡೆಸುತ್ತಿದೆ. ಅದೇ ರೀತಿ ಬೆಂಗಳೂರು ಏರ್‌ಪೋರ್ಟ್‌ನಲ್ಲೂ ಸ್ಥಾಪಿಸಲು ಮನವಿ ಬಂದಿದೆ. ಇದನ್ನು ವಿಶೇಷ ಪ್ರಕರಣವಾಗಿ ಸರ್ಕಾರ/ಬಿಬಿಎಂಪಿ ಪರಿಗಣಿಸಿ ಸ್ಥಾಪನೆಗೆ ಮುಂದಾಗುವ ಸಾಧ್ಯತೆಗಳು ಇದೆ ಎಂದು ತಿಳಿದು ಬಂದಿದೆ.
ಈಗಾಗಲೇ ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ಇಂದಿರಾ ಕ್ಯಾಂಟಿನ್ ನಿರ್ಮಿಸಲು ನೀರ್ಣಯಿಸಿದ್ದು, ಸುಮಾರು ನೂರು ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದೆ.












Click it and Unblock the Notifications