ಕೆಲಸಕ್ಕೆಂದು ಹೊರಟವರು ಮಸಣ ಸೇರಿದರು
ಬೆಂಗಳೂರು, ನ.16: ಮುಂಜಾನೆ ಕೆಲಸಕ್ಕೆಂದು ಹೊರಟಿದ್ದ ಕಾರ್ಮಿಕರಿಬ್ಬರನ್ನು ವೇಗವಾಗಿ ಬರುತ್ತಿದ್ದ ಖಾಸಗಿ ಸಂಸ್ಥೆ ಬಸ್ ಮಸಣ ಸೇರಿಸಿದೆ. ಬೆಳಗ್ಗೆ ಸುಮಾರು 7 ಗಂಟೆ ಸಮಯಕ್ಕೆ ಇಬ್ಬರು ಕಾರ್ಮಿಕರು ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಿಂದ ಬೈಕ್‌ನಲ್ಲಿ ಹೋಗುವಾಗ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಅಮಾಯಕ ಬೈಕ್ ಸವಾರರ ಸಾವಿಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ಆನೇಕಲ್ ತಾಲೂಕಿನ ಬೊಮ್ಮಸಂದ್ರ ಲಿಂಕ್ ರಸ್ತೆಯಲ್ಲಿ ನಡೆದ ದುರಂತದಲ್ಲಿ ತಮಿಳುನಾಡು ಮೂಲದ ಅರವಿಂದ್(25) ಮತ್ತು ಗಣೇಶ್(26) ಮೃತರಾಗಿದದ್ದಾರೆ. ಇವರು ಜಿಗಣಿ ಕೈಗಾರೀಕಾ ಪ್ರದೇಶದಲ್ಲಿರುವ ಬಿಲ್ ಫೋರ್ಜ್ ಪ್ರೈ.ಲಿಮಿಟೆಡ್ ಕಂಪನಿಯ ನೌಕರರಾಗಿದ್ದು, ಭಾನುವಾರ ಮುಂಜಾನೆ ಕೆಲಸಕ್ಕೆಂದು ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಅಪಘಾತಕ್ಕೆ ಬಲಿಯಾಗಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿ ಕಡೆಯಿಂದ ವೇಗವಾಗಿ ಬರುತ್ತಿದ್ದ ಎಪಿಸಿ ಕಂಪನಿಯ ಬಸ್ ನಿಲ್ಲಿಸಿದ್ದ ಕಂಟೇನರ್ ವೊಂದನ್ನು ಓವರ್ ಟೇಕ್ ಮಾಡಲು ಹೋಗಿದೆ, ಈ ಸಮಯದಲ್ಲಿ ರಸ್ತೆ ಬದಿಯಲ್ಲಿ ಸಾಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿದ್ದು ಸವಾರಿಬ್ಬರು ಸ್ಥಳದಲ್ಲೇ ಅಸುನೀಗಿದ್ದಾರೆ. ಘಟನೆ ನಂತರ ಬಸ್ ಚಾಲಕ ಪರಾರಿಯಾಗಿದ್ದಾನೆ.

'ಎಪಿಸಿ' ಕಂಪನಿ ಬಸ್ ಚಾಲಕರ ಅಜಾಗರೂಕತೆಯಿಂದ ಈ ಹಿಂದೆ ಕೂಡ ಇಂಥದ್ದೇ ಹಲವು ರಸ್ತೆ ಅವಘಡಗಳನ್ನು ಸಂಭವಿಸಿವೆ ಕಂಪನಿ ಮ್ಯಾನೇಜರ್ ಮತ್ತು ಬಸ್ ಚಾಲಕನನ್ನು ಬಂಧಿಸಬೇಕೆಂದು ಬಿಲ್ ಫೋರ್ಜ್ ಕಾರ್ಖಾನೆಯ ಎರಡು ಘಟಕ (ಜಿಗಣಿ ಹಾಗೂ ಬೊಮ್ಮಸಂದ್ರ) ನೌಕರರು ಹೆಬ್ಬಗೋಡಿ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದರು.

ಇದರಿಂದಾಗಿಬೊಮ್ಮಸಂದ್ರ ಮುಖ್ಯರಸ್ತೆಯಲ್ಲಿ ಕೆಲಕಾಲ ಬಿಗುವಿವ ವಾತಾವರಣ ಸೃಷ್ಟಿಯಾಗಿತ್ತು. ಆರೋಪಿಗಳನ್ನು ಕೂಡಲೇ ಬಂಧಿಸದಿದ್ದರೆ ಹೆದ್ದಾರಿ ತಡೆಯುವುದಾಗಿ ಎಚ್ಚರಿಕೆ ಕೂಡ ನೀಡಿದರು. ಘಟನೆ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.[ಚಿತ್ರಗಳು: ಮಾಲ ಎಂ, ಎಲೆಕ್ಟ್ರಾನಿಕ್ ಸಿಟಿ]
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications