ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು:ಕೊರೊನಾ ಲಸಿಕೆ ಪಡೆಯಲು ಖಾಸಗಿ ಆಸ್ಪತ್ರೆ ಸಿಬ್ಬಂದಿ ಒಲವು

|
Google Oneindia Kannada News

ಬೆಂಗಳೂರು,ಜನವರಿ 28: ಬಿಬಿಎಂಪಿ ವ್ಯಾಪ್ತಿಯಲ್ಲಿ ಎರಡನೇ ಹಂತದಲ್ಲಿ ಕೊರೊನಾ ಲಸಿಕೆ ಪಡೆಯಲು ಖಾಸಗಿ ಆಸ್ಪತ್ರೆ ಸಿಬ್ಬಂದಿ ಒಲವು ತೋರಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್-19 ಲಸಿಕಾ ಅಭಿಯಾನ ಆರಂಭವಾದ 11 ದಿನಗಳ ನಂತರ ಜಿಲ್ಲೆಗಳಲ್ಲಿ ಶೇ. 100ಕ್ಕಿಂತಲೂ ಕಡಿಮೆ ಸಾಧನೆಯಾಗಿದೆ.

ಬಿಬಿಎಂಪಿ ನೀಡಿರುವ ಅಂಕಿಸಂಖ್ಯೆಗಳ ಪ್ರಕಾರ ಜನವರಿ 19 ರಿಂದ 27ರವರೆಗೂ 7,736 ಸರ್ಕಾರಿ ಸಿಬ್ಬಂದಿ ಲಸಿಕೆ ಪಡೆದುಕೊಂಡಿದ್ದರೆ ಖಾಸಗಿ ಆಸ್ಪತ್ರೆಗಳಲ್ಲಿ 34, 707 ಮಂದಿ ಲಸಿಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು: ಎರಡನೇ ಹಂತದಲ್ಲಿ 50 ಸಾವಿರ ಮಂದಿ ಕೊರೊನಾ ಲಸಿಕೆಬೆಂಗಳೂರು: ಎರಡನೇ ಹಂತದಲ್ಲಿ 50 ಸಾವಿರ ಮಂದಿ ಕೊರೊನಾ ಲಸಿಕೆ

ಯುವ ನರ್ಸ್ ಗಳು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವರು ಕುಟುಂಬದವರು ಲಸಿಕೆ ಪಡೆಯಲು ಅನುಮತಿ ನೀಡುತ್ತಿಲ್ಲ. ಆದ್ದರಿಂದ ಲಸಿಕೆ ಪಡೆಯಲು ಹಿಂಜರಿಯುತ್ತಿದ್ದಾರೆ. ಲಸಿಕೆ ಧಕ್ಷತೆ ಬಗ್ಗೆ ಇತರರಲ್ಲಿ ಅನುಮಾನವಿದೆ ಎಂದು ಸರ್ಕಾರಿ ವೈದ್ಯಕೀಯ ಸಿಬ್ಬಂದಿ ಹೇಳಿದ್ದಾರೆ.

 Private Hospital Staff More Willing To Take Corona Vaccine

ಲಸಿಕೆ ಪಡೆಯುವ ಬಗ್ಗೆ ಈಗಲೂ ಅನೇಕ ಸಿಬ್ಬಂದಿಯಲ್ಲಿ ಭಯವಿದೆ. ಆದರೆ, ಖಾಸಗಿ ಆಸ್ಪತ್ರೆಗಳಲ್ಲಿ ಈ ಭಯ ಸ್ವಲ್ಪ ಕಡಿಮೆಯಾಗಿದ್ದು, ಲಸಿಕೆ ಪಡೆಯಲು ಮುಂದೆ ಬರುತ್ತಿರುವುದಾಗಿ ಕೆಲ ಸರ್ಕಾರಿ ಆಸ್ಪತ್ರೆಗಳ ಅಧಿಕಾರಿಗಳು ತಿಳಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಸಂಖ್ಯೆಯ ರೋಗಿಗಳು ಮತ್ತು ಕೆಲ ಆರೋಗ್ಯ ಕಾರ್ಯಕರ್ತರು ಮಾತ್ರ ಲಸಿಕೆ ಪಡೆಯುತ್ತಿದ್ದಾರೆ.ಅನೇಕ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತಿನಿತ್ಯ ಲಸಿಕೆ ವಿತರಣೆ ಅಭಿಯಾನ ಕೈಗೊಂಡಿಲ್ಲ ಎಂದು ಬಿಬಿಎಂಪಿಯ ಆರೋಗ್ಯಾಧಿಕಾರಿಯೊಬ್ಬರು ಹೇಳಿದ್ದಾರೆ.

ಲಸಿಕೆ ಬಗ್ಗೆ ಭಯ ಈಗಲೂ ಇದೆ. ಲಸಿಕೆ ಪಡೆಯಲು ವಿದ್ಯಾರ್ಥಿಗಳಿಗೆ ಹೇಳಿದಾಗ ಅವರಿಗೆ ಲಸಿಕೆ ಪಡೆಯದಂತೆ ಮನೆಯಲ್ಲಿ ಅನುಮತಿ ಸಿಕ್ಕಿಲ್ಲ. ಜೊತೆಗೆ ಅಡ್ಡ ಪರಿಣಾಮಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸುದ್ದಿಗಳನ್ನು ಹರಿಯಬಿಡಲಾಗುತ್ತಿದೆ.

ಲಸಿಕೆ ಪಡೆಯುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಪದೇ ಪದೇ ವಿವರಿಸಲಾಗುತ್ತಿದೆ. ಆದರೆ, ಆದರೆ, ಅನೇಕ ಆರೋಗ್ಯ ಕಾರ್ಯಕರ್ತರು ಹಿಂಜರಿಯುತ್ತಿದ್ದಾರೆ. ಈವರೆಗೂ ಶೇ. 56 ರಷ್ಟು ಮಂದಿ ಮಾತ್ರ ಲಸಿಕೆ ಪ್ರಯೋಜನ ಪಡೆದುಕೊಂಡಿದ್ದಾರೆ.

ಇದು ಉತ್ತಮ ಎಂದು ನಿರೀಕ್ಷಿಸಿರುವುದಾಗಿ ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆಯ ಡಾ. ಸಿ. ನಾಗರಾಜ್ ಹೇಳಿದ್ದಾರೆ.ಕೆ. ಸಿ. ಜನರಲ್ ಆಸ್ಪತ್ರೆಯಲ್ಲಿ ಶೇ. 53 ರಷ್ಟು ಮಂದಿ ಲಸಿಕೆ ಪಡೆದಿದ್ದಾರೆ.

English summary
11 days after the vaccination drive rolled out in the state, the turnout in districts is way below 100 per cent. In Bruhat Bengaluru Mahanagara Palike (BBMP) limits, most of the vaccinated individuals are from private hospitals, and beneficiaries from government hospitals are fewer.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X