ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಖಾಸಗಿ ಆಸ್ಪತ್ರೆಗಳಲ್ಲಿ 50% ರಷ್ಟು ಹಾಸಿಗೆ ಮೀಸಲು: ಡಾ.ಕೆ.ಸುಧಾಕರ್

|
Google Oneindia Kannada News

ಬೆಂಗಳೂರು, ಏಪ್ರಿಲ್ 12: ''ಕಳೆದ ಬಾರಿ ಖಾಸಗಿ ಆಸ್ಪತ್ರೆಗಳಲ್ಲಿ 50% ರಷ್ಟು ಹಾಸಿಗೆ ಕೋವಿಡ್‌ಗೆ ಮೀಸಲಿಡಲಾಗಿತ್ತು. ಇದೇ ರೀತಿ ಈಗ ಹಾಸಿಗೆ ಮೀಸಲಿಡಬೇಕು ಎಂದು ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ'' ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಮ್ ಗಳ ಸಂಘಟನೆ (PHANA) ಸಂಘಟನೆ ಜೊತೆ ವೀಡಿಯೋ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ಕೋವಿಡ್ ಅಲ್ಲದ ರೋಗಿಗಳಿಗೆ ದಾಖಲಾತಿ ಅವಶ್ಯಕತೆ ಇಲ್ಲದಿದ್ದಲ್ಲಿ ಅಂತಹ ರೋಗಿಗಳಿಗೆ ಮನವಿ ಮಾಡಿ, ಬಿಡುಗಡೆ ಮಾಡಬೇಕು. ಅವನ್ನು ಕೋವಿಡ್ ಗೆ ಮೀಸಲಿಡಬೇಕು ಎಂದು ಹೇಳಲಾಗಿದೆ.

ಒಂದು ವಾರದೊಳಗೆ 50% ರಷ್ಟು ಹಾಸಿಗೆ ನೀಡಲು ಖಾಸಗಿ ಆಸ್ಪತ್ರೆಗಳವರು ಒಪ್ಪಿಕೊಂಡಿದ್ದಾರೆ. ಅಲ್ಪ ರೋಗಲಕ್ಷಣ ಹಾಗೂ ಲಕ್ಷಣರಹಿತ ರೋಗಿಗಳಿಗೆ ಹೋಟೆಲ್ ಗಳಲ್ಲಿ, ಕೋವಿಡ್ ಕೇರ್ ಸೆಂಟರ್ ಗಳಲ್ಲಿ ವ್ಯವಸ್ಥೆ ಮಾಡಬೇಕೆಂದು ಸೂಚಿಸಲಾಗಿದೆ. ಆಸ್ಪತ್ರೆಗಳ ಹಾಸಿಗೆಗಳಲ್ಲಿ ಅನಿವಾರ್ಯ ಇರುವವರಿಗೆ ಚಿಕಿತ್ಸೆ ನೀಡಬೇಕೆಂದು ಸೂಚಿಸಲಾಗಿದೆ ಎಂದರು.

ಔಷಧಿ ಲಭ್ಯವಾಗುತ್ತಿಲ್ಲ ಎಂದು ದೂರಿದ್ದಾರೆ

ಔಷಧಿ ಲಭ್ಯವಾಗುತ್ತಿಲ್ಲ ಎಂದು ದೂರಿದ್ದಾರೆ

ರೆಮಿಡಿಸಿವಿರ್ ಔಷಧಿ ತಯಾರಿಕೆ, ಪೂರೈಕೆಯನ್ನು ಕಂಪನಿಗಳು ಸ್ಥಗಿತಗೊಳಿಸಿವೆ. ರಾಜ್ಯಕ್ಕೆ ಇದರ ಅಗತ್ಯ ಇದೆ. ಕೆಲ ಖಾಸಗಿ ಆಸ್ಪತ್ರೆಗಳು ಔಷಧಿ ಲಭ್ಯವಾಗುತ್ತಿಲ್ಲ ಎಂದು ದೂರಿದ್ದಾರೆ. ಡ್ರಗ್ ಕಂಟ್ರೋಲರ್ ಜೊತೆ ಚರ್ಚಿಸಿ, ಅಗತ್ಯವಿರುವ ಔಷಧ ಪ್ರಮಾಣ ಗುರುತು ಮಾಡಿ, ಸರ್ಕಾರದಿಂದಲೇ ನಿರ್ದಿಷ್ಟ ದರದಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಪೂರೈಸುವ ಕ್ರಮ ವಹಿಸಲಾಗುವುದು. ಆಕ್ಸಿಜನ್, ಆಕ್ಸಿಜನ್ ಜನರೇಟರ್ ಕೊರತೆಯಾಗದಂತೆ ಕ್ರಮ ವಹಿಸಲಾಗಿದೆ. ಕೊರತೆಯ ಸಂಭವ ಬಂದರೆ ಕೈಗಾರಿಕಾ ಆಕ್ಸಿಜನ್ ಬಳಸಲು ಕ್ರಮ ವಹಿಸಲಾಗುವುದು ಎಂದರು.

ಎರಡು ತಿಂಗಳ ಕೊರೊನಾ ಸ್ಥಿತಿಗತಿ ಅಂದಾಜು

ಎರಡು ತಿಂಗಳ ಕೊರೊನಾ ಸ್ಥಿತಿಗತಿ ಅಂದಾಜು

ತಾಂತ್ರಿಕ ಸಲಹಾ ಸಮಿತಿಯು ಮುಂದಿನ ಎರಡು ತಿಂಗಳ ಕೊರೊನಾ ಸ್ಥಿತಿಗತಿಯನ್ನು ಅಂದಾಜಿಸಿದ್ದು, ಸರ್ಕಾರ ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಲಹೆ ನೀಡಿದೆ. ಈ ಒಂದು ವರ್ಷದ ಅನುಭವದಲ್ಲಿ ಕೊರೊನಾ ಬಗ್ಗೆ ಗೊತ್ತಾಗಿದೆ. ಕೋವಿಡ್ ನಿಂದಾಗಿ ಆರ್ಥಿಕ ನಷ್ಟ ಉಂಟಾಗಿದ್ದು, ಜನರು ಕಷ್ಟದಲ್ಲಿದ್ದಾರೆ. ಇಂತಹ ಸಮಯದಲ್ಲಿ ಲಾಕ್ ಡೌನ್ ನಂತಹ ಕಠಿಣ ಕ್ರಮಕ್ಕೆ ಮುಂದಾಗುವುದು ಕಷ್ಟ ಎಂದರು.

ತಪ್ಪೆಸಗಿದ ನೌಕರರನ್ನು ವಜಾಗೊಳಿಸಲಾಗಿದೆ

ತಪ್ಪೆಸಗಿದ ನೌಕರರನ್ನು ವಜಾಗೊಳಿಸಲಾಗಿದೆ

ಕೋವಿಡ್ ಪರೀಕ್ಷೆಯಲ್ಲಿ ತಪ್ಪೆಸಗಿದ ನೌಕರರನ್ನು ವಜಾಗೊಳಿಸಲಾಗಿದೆ. ಇದೊಂದು ತಪ್ಪಿಗಾಗಿ ಸರ್ಕಾರ ಮಾಡಿದ ಉತ್ತಮ ಕೆಲಸಗಳನ್ನು ಮರೆಮಾಚುವುದು ಬೇಡ. ಈವರೆಗೆ 2.2 ಕೋಟಿಗೂ ಅಧಿಕ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 85% ನಷ್ಟು ಆರ್ ಟಿಪಿಸಿಆರ್ ಪರೀಕ್ಷೆಯಾಗಿದೆ ಎಂದರು.

ಕೊರೊನಾ ತಡೆಗೆ ಜನರ ಸಹಕಾರ ಅಗತ್ಯ. ಲಾಕ್ ಡೌನ್ ಮಾಡುತ್ತೇವೆ ಎಂದು ಎಲ್ಲೂ ಹೇಳಿಲ್ಲ. ಆದರೆ ಅಂತಹ ಅನಿವಾರ್ಯ ತರಬೇಡಿ ಎಂದು ಮನವಿ ಮಾಡುತ್ತಿದ್ದೇವೆ. ಲಾಕ್ ಡೌನ್ ನಿಂದ ಎಷ್ಟು ನಷ್ಟವಾಗುತ್ತದೆ ಎಂಬ ಅರಿವಿದೆ ಎಂದರು.

ಮೇ ತಿಂಗಳ ಕೊನೆವರೆಗೂ ಎಚ್ಚರಿಕೆಯಿಂದಿರಬೇಕು

ಮೇ ತಿಂಗಳ ಕೊನೆವರೆಗೂ ಎಚ್ಚರಿಕೆಯಿಂದಿರಬೇಕು

ಮೇ ತಿಂಗಳ ಕೊನೆವರೆಗೂ ಎಚ್ಚರಿಕೆಯಿಂದಿರಬೇಕು. ಮೇ ಮೊದಲ ವಾರದಲ್ಲಿ ಕೊರೊನಾ ಗರಿಷ್ಠ ಮಟ್ಟ (ಪೀಕ್) ತಲುಪಬಹುದು. ಮೇ ಅಂತ್ಯಕ್ಕೆ ಸ್ವಲ್ಪ ಕಡಿಮೆಯಾಗಬಹುದು. ಹೆಚ್ಚು ಪ್ರಕರಣ ಕಂಡುಬಂದರೆ ಅದಕ್ಕೆ ತಕ್ಕಂತೆ ಆಸ್ಪತ್ರೆ ಹಾಸಿಗೆ ಬೇಡಿಕೆ ಹೆಚ್ಚಾಗುತ್ತದೆ. ಇದಕ್ಕಾಗಿ ಖಾಸಗಿ ಆಸ್ಪತ್ರೆಗಳ ಸಹಕಾರ ಪಡೆಯಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

Recommended Video

ಈ ದೇಶದಲ್ಲಿ ಕೊರೊನ ರೋಗಿಗೆ ಬೆಡ್ ಇಲ್ವಂತೆ !! | Oneindia Kannada

English summary
Private hospitals have been asked to reserve 50% beds for Covid patients as it was done during the first wave, said Health & Medical Education Minister Dr.K.Sudhakar. He was speaking to the media here after video conference with the Private Hospitals and Nursing Home Association (PHANA).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X