ಖಾಸಗಿ ಶಾಲೆಗಳಲ್ಲಿ ಶುಲ್ಕ ಏರಿಕೆಗೆ ಚಿಂತನೆ

ಬೆಂಗಳೂರು, ನ.11 : ಶಾಲೆಗಳಲ್ಲಿ ಲೈಂಗಿಕ ದೌರ್ಜನ್ಯ ತಡೆಯಲು ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನು ಅಳವಡಿಸಲು ಹೆಚ್ಚು ಖರ್ಚಾಗುತ್ತದೆ. ಆದ್ದರಿಂದ ಶಾಲೆಗಳಲ್ಲಿ ಶುಲ್ಕ ಹೆಚ್ಚಳ ಮಾಡಲು ಅನುಮತಿ ನೀಡಬೇಕು ಎಂದು ಕರ್ನಾಟಕ ಖಾಸಗಿ ಶಾಲೆಗಳ ಒಕ್ಕೂಟದ ಪದಾಧಿಕಾರಿಗಳು ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ.

ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜ್‌ಕುಮಾರ್‌ ಖತ್ರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಮಹಮ್ಮದ್‌ ಮೊಹಸೀನ್‌ ಮತ್ತು ಪ್ರಾಥ­ಮಿಕ ಶಿಕ್ಷಣ ನಿರ್ದೇಶಕ ಆನಂದ್‌ ಅವರನ್ನು ಭೇಟಿ ಮಾಡಿದ ಪದಾಧಿಕಾರಿಗಳು ಶುಲ್ಕ ಹೆಚ್ಚಳದ ಬಗ್ಗೆ ಮನವಿ ಪತ್ರಗಳನ್ನು ನೀಡಿದ್ದಾರೆ. [ಮಕ್ಕಳ ಸುರಕ್ಷತೆಗೆ ಸರ್ಕಾರದ ಮಾರ್ಗಸೂಚಿ]

School

ಶಾಲೆಗಳಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಗಳ ನಂತರ ಮಕ್ಕಳ ಸುರಕ್ಷತೆಗಾಗಿ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗಿದ್ದು, ಅವುಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ನಿರ್ದೇಶನ ನೀಡಲಾಗಿದೆ. ಎಲ್ಲಾ ಮಾರ್ಗಸೂಚಿಗಳನ್ನು ಕಡ್ಡಾಯ­ವಾಗಿ ಪಾಲಿಸಬೇಕಾದರೆ ತಿಂಗಳಿಗೆ ಲಕ್ಷಾಂತರ ರೂಪಾಯಿ ಹೊರೆ ಬೀಳಲಿದೆ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ. [ಮಕ್ಕಳಿಗಿಂತ ಬ್ಯಾಗ್‌ ಭಾರವೇ ಜಾಸ್ತಿ!]

ಸರ್ಕಾರಿ ಶಾಲೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಸರ್ಕಾರ 13 ಕೋಟಿ ಅನುದಾನ ನೀಡಲಿದೆ. ಆದರೆ, ಖಾಸಗಿ ಶಾಲೆಗಳಲ್ಲಿ ಮಾರ್ಗಸೂಚಿ ಪಾಲಿಸಲು ಸಹಾಯ ಮಾಡುವುದಿಲ್ಲ. ಆದ್ದರಿಂದ ಶುಲ್ಕ ಹೆಚ್ಚಳ ಮಾಡಲು ಅನುಮತಿ ನೀಡಬೇಕೆಂದು ಶಾಲೆಗಳು ಮನವಿ ಮಾಡಿವೆ.

ಗೊಂದಲ ಬಗೆಹರಿಸಿ : ಭಾಷಾ ಮಾಧ್ಯಮದಲ್ಲಿ ಉಂಟಾಗಿರುವ ಗೊಂದಲವನ್ನು ಬಗೆಹರಿಸುವಂತೆ ಶಾಲೆಗಳು ಮನವಿ ಸಲ್ಲಿಸಿವೆ. ಭಾಷಾ ಮಾಧ್ಯಮದ ವಿಚಾರದಲ್ಲಿ ಸುಪ್ರೀಂಕೋರ್ಟ್‌ ಪೋಷಕರಿಗೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದೆ. ಆದರೆ, ಈ ಗೊಂದಲವನ್ನು ನಿವಾರಣೆ ಮಾಡಲು ಸರ್ಕಾರ ಇಚ್ಛಾಶಕ್ತಿ ತೋರಿಸಿಲ್ಲ. ಇದನ್ನು ಬಗೆಹರಿಸಿ ಎಂದು ಮನವಿಯಲ್ಲಿ ತಿಳಿಸಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+