ಸೆ.11ರಂದು ಬೆಂಗಳೂರಲ್ಲಿ ಆಟೋ, ಟ್ಯಾಕ್ಸಿ ಸೇವೆ ಬಂದ್
ಬೆಂಗಳೂರು, ಸೆಪ್ಟೆಂಬರ್ 01; ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ 'ಶಕ್ತಿ ಯೋಜನೆ' ಯಶಸ್ವಿಯಾಗಿದೆ. ಮಹಿಳೆಯರು, ವಿದ್ಯಾರ್ಥಿನಿಯರು ಸರ್ಕಾರಿ ಬಸ್‌ಗಳಲ್ಲಿ ಶೂನ್ಯ ದರದ ಟಿಕೆಟ್ ಪಡೆದು ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಆದರೆ ಯೋಜನೆ ಬಗ್ಗೆ ಖಾಸಗಿ ವಾಹನಗಳ ಒಕ್ಕೂಟದ ಮಾಲೀಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
'ಶಕ್ತಿ ಯೋಜನೆ' ಜಾರಿಗೆ ಬಂದ ಬಳಿಕ ಖಾಸಗಿ ಬಸ್‌ಗಳಿಗೆ ನಷ್ಟವಾಗುತ್ತಿದೆ. ಆಟೋ, ಟ್ಯಾಕ್ಸಿಗಳ ಚಾಲಕರಿಗೆ ಸಂಕಷ್ಟ ಎದುರಾಗಿದೆ. ಈ ಕುರಿತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಜೊತೆಗೆ ಖಾಸಗಿ ವಾಹನಗಳ ಮಾಲೀಕರ ಒಕ್ಕೂಟ ಸಭೆ ನಡೆಸಿತ್ತು. ಆದರೆ ಸಮಸ್ಯೆ ಇನ್ನೂ ಬಗೆಹರಿದಿಲ್ಲ.

ಆಗಸ್ಟ್ 31ರೊಳಗೆ ಸಮಸ್ಯೆ ಬಗೆಹರಿಸುತ್ತೇವೆ ಎಂದು ಸಾರಿಗೆ ಸಚಿವರು ಭರವಸೆ ನೀಡಿದ್ದರು. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಬೆಂಗಳೂರು ನಗರದಲ್ಲಿ ಖಾಸಗಿ ವಾಹನಗಳ ಸಂಚಾರ ಸಂಪೂರ್ಣ ಬಂದ್ ಮಾಡಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮಾಲೀಕರ ಒಕ್ಕೂಟ ತೀರ್ಮಾನಿಸಿದೆ.
ಖಾಸಗಿ ವಾಹನಗಳ ಮುಷ್ಕರ; ಖಾಸಗಿ ವಾಹನಗಳ ಒಕ್ಕೂಟದಲ್ಲಿ ಆಟೋ, ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್, ಖಾಸಗಿ ಶಾಲಾ ಬಸ್‌ಗಳು ಮುಂತಾದವರು ಸೇರಿದ್ದಾರೆ. ಸೆಪ್ಟೆಂಬರ್ 11ರಂದು ಎಲ್ಲಾ ವಾಹನಗಳ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ಒಕ್ಕೂಟ ತೀರ್ಮಾನಿಸಿದೆ. ಆದ್ದರಿಂದ ಬೆಂಗಳೂರು ನಗರದಲ್ಲಿ ಖಾಸಗಿ ವಾಹನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ನಿರೀಕ್ಷೆ ಇದೆ.
ಬೆಂಗಳೂರು ಮಹಾನಗರ ಬಂದ್ ಮಾಡಿ ಖಾಸಗಿ ವಾಹನಗಳ ಒಕ್ಕೂಟ ಸರ್ಕಾರಕ್ಕೆ ತಮ್ಮ ಬೇಡಿಕೆ ತಿಳಿಸಲು ಮುಂದಾಗಿದ್ದಾರೆ. ತಮ್ಮ ಸಮಸ್ಯೆ ಬಗೆರಿಸುವ ಕುರಿತು ಸರ್ಕಾರ ಲಿಖಿತ ಭರವಸೆಯನ್ನು ನೀಡಬೇಕು ಎಂಬುದು ಒಕ್ಕೂಟದ ಬೇಡಿಕೆಯಾಗಿದೆ.
ಸೆಪ್ಟೆಂಬರ್ 11ರ ಮಧ್ಯರಾತ್ರಿಯಿಂದ ಸೆಪ್ಟೆಂಬರ್ 12ರ ಮಧ್ಯರಾತ್ರಿ ತನಕ ಎಲ್ಲಾ ಖಾಸಗಿ ವಾಹನಗಳ ಸೇವೆ ಬಂದ್ ಮಾಡಿ ಪ್ರತಿಭಟನೆ ಮಾಡುತ್ತೇವೆ ಎಂದು ಖಾಸಗಿ ವಾಹನಗಳ ಒಕ್ಕೂಟ ಹೇಳಿದೆ. ಈ ಹಿಂದೆ ಆಗಸ್ಟ್ 27ರಂದು ವಾಹನಗಳ ಸಂಚಾರ ಬಂದ್ ಮಾಡುವುದಾಗಿ ಒಕ್ಕೂಟ ಹೇಳಿತ್ತು. ಆದರೆ ಸಚಿವರು ಭರವಸೆ ಬಳಿಕ ಅದನ್ನು ವಾಪಸ್ ಪಡೆಯಲಾಗಿತ್ತು.
ಸಾರಿಗೆ ಸಚಿವರ ಜೊತೆ ಸಭೆ ನಡೆಸಿದಾಗ ಖಾಸಗಿ ವಾಹನಗಳ ಒಕ್ಕೂಟ ತಮ್ಮ ಬೇಡಿಕೆಗಳೇನು? ಎಂದು ಅವರಿಗೆ ಮನವರಿಕೆ ಮಾಡಿಕೊಟ್ಟಿತ್ತು. ಆಗಸ್ಟ್ 31ರೊಳಗೆ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಸಚಿವರು ಭರವಸೆ ನೀಡಿದ್ದರು. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಆರೋಪವಾಗಿದೆ.
ಖಾಸಗಿ ವಾಹನಗಳ ಒಕ್ಕೂಟ ಕರೆ ನೀಡಿರುವ ಬೆಂಗಳೂರು ಮಹಾನಗರ ಬಂದ್‌ಗೆ 32 ಸಂಘಟನೆಗಳು ಬೆಂಬಲ ನೀಡಿವೆ. ಗುರುವಾರ ಎಲ್ಲಾ ಸಂಘಟನೆಗಳು ಬಂದ್ ಮಾಡುವ ಕುರಿತು ಸಭೆ ಸೇರಿ ತೀರ್ಮಾನ ಕೈಗೊಂಡಿವೆ. ಸಾರಿಗೆ ಇಲಾಖೆ ಒಕ್ಕೂಟದ ಬಂದ್ ಕರೆ ಬಗ್ಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.
ಖಾಸಗಿ ವಾಹನಗಳ ಒಕ್ಕೂಟದ ಬೇಡಿಕೆಗಳು
* ಚಾಲಕರಿಗೆ ಮಾಸಿಕ 10 ಸಾವಿರ ರೂ. ಪರಿಹಾರ ಧನ ನೀಡಬೇಕು
* Rapido ಬೈಕ್ ಟ್ಯಾಕ್ಸಿ ಸೇವೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು
* ಅಸಂಘಟಿತ ವಾಣಿಜ್ಯ ಚಾಲಕರ ಮತ್ತು ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು
* ವೈಟ್ ಬೋರ್ಡ್ ವಾಹನಗಳಲ್ಲಿ ಬಾಡಿಗೆ ಓಡಿಸುವುದು ಸ್ಥಗಿತಗೊಳಿಸಬೇಕು
* ಚಾಲಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಬೇಕು
* ಓಲಾ, ಊಬರ್ ಸೇರಿದಂತೆ ಅಪ್ಲಿಕೇಶನ್ ಆಧಾರಿತ ಸೇವೆಗಳನ್ನು ಬಂದ್ ಮಾಡಬೇಕು
* ಖಾಸಗಿ ವಾಹನಗಳನ್ನು ಸರ್ಕಾರ ಕಿ. ಮೀ. ಆಧಾರದಲ್ಲಿ ಬಾಡಿಗೆ ಪಡೆಯಬೇಕು
* ನಿಯಮ ಬಾಹಿರವಾಗಿ ಖಾಸಗಿ ವಾಹನ ವಶಕ್ಕೆ ಪಡೆಯುವ ಫೈನಾನ್ಸ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು.












Click it and Unblock the Notifications