• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಟ್ವಿಟ್ಟರ್ ನಲ್ಲಿ ಯಡಿಯೂರಪ್ಪರ ಕಾಲೆಳೆದ ಪ್ರಿಯಾಂಕ್ ಖರ್ಗೆ

|

ಬೆಂಗಳೂರು, ಆಸಗ್ಟ್ 14: "ನಿಮ್ಮ ಬಳಿ ಪ್ರವಾಹ ಸಂತ್ರಸ್ತರಿಗೆ ನೀಡಲು ಹಣವಿಲ್ಲ. ಆದರೆ ಸರ್ಕಾರದ ಮೂರು ವಾರಗಳ ಸಾಧನೆಯನ್ನು ಸಂಭ್ರಮಿಸಿಸ, ಜಾಹೀರಾತು ನೀಡಲು ಹಣವಿದೆಯೇ?" ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಾಲೆಳೆದಿದ್ದಾರೆ.

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹರಿದು ಬಂದ ಹಣವೆಷ್ಟು?

ರಾಜ್ಯದಲ್ಲಿ ಪ್ರವಾಹ ಉಂಟಾಗಿ, ಜನಜೀವನ ಅಸ್ತವ್ಯಸ್ಥವಾಗಿರುವ ಕಾರಣ ಈ ಬಾರಿ ಸ್ವಾತಂತ್ರ್ಯೋತ್ಸವವನ್ನು ಸರಳವಾಗಿ ಆಚರಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿತ್ತು. ಈ ಕುರಿತು ತಮ್ಮ ಟ್ವೀಟ್ ನಲ್ಲಿ ಉಲ್ಲೇಖಿಸಿರುವ ಪ್ರಿಯಾಂಕ್ ಖರ್ಗೆ, "ಪ್ರವಾಹ ಪೀಡಿತ ಸಂತ್ರಸ್ತರಿಗೆ ಗೌರವ ನೀಡುವ ನಿಟ್ಟಿನಲ್ಲಿ ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸದೆ, ಸರಳವಾಗಿ ಆಚರಿಸೋಣ ಎಂದುಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಆದರೆ ತಮ್ಮ ಸರ್ಕಾರದ ಮೂರು ವಾರಗಳ ಸಾಧನೆಯ ಬಗ್ಗೆ ಎಲ್ಲಾ ಪತ್ರಿಕೆಗಳ ಮುಖಪುಟದಲ್ಲಿ ಜಾಹೀರಾತು ನೀಡೀದ್ದಾರೆ. ಪರಿಹಾರ ನೀಡಲು ಹಣವಿಲ್ಲ, ಆದರೆ ಜಾಹೀರಾತಿಗೆ ಹಣವಿದೆಯೇ?" ಎಂದು ಖರ್ಗೆ ಪ್ರಶ್ನಿಸಿದ್ದಾರೆ.

ಖರ್ಗೆ ಅವರ ಈ ಟ್ವೀಟ್ ಅನ್ನು ಕೆಲವು ಮೆಚ್ಚಿಕೊಂಡಿದ್ದರೆ, ಮತ್ತೆ ಕೆಲವರು ಪ್ರಿಯಾಂಕ್ ಅವರನ್ನೇ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ನಾಯಕರು ಈದ್ ಪಾರ್ಟಿಯಲ್ಲಿ ಊಟಮಾಡುತ್ತಿರುವ ಚಿತ್ರವನ್ನು ಪೋಸ್ಟ್ ಮಾಡಿ, "ಇವರು ಪರಿಹಾರ ನಿಧಿಗೆ ದಾನ ಮಾಡಿದ್ದಾರೆಯೇ? ಸಂತ್ರಸ್ತರು ಊಟವಿಲ್ಲದೆ ಸಾಯುತ್ತಿದ್ದರೆ, ನಿಮ್ಮ ಕಾಂಗ್ರೆಸ್ ನಾಯಕರು ಭೂರಿಭೋಜನ ಮಾಡುತ್ತಿದ್ದಾರಲ್ಲ, ಇದಕ್ಕೇನನ್ನುತ್ತೀರಾ?" ಎಂದು ಪ್ರಶ್ನಿಸಿದ್ದಾರೆ.

English summary
Former minister and Congress leader Priyank Kharge slams CM BS Yediyurappa For government ads in New paper.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X